ಚಿಕ್ಕಮಗಳೂರು l ಕಾಡಾನೆ ಕೊಂದು ದಂತ ಕಳ್ಳತನ, ಇಬ್ಬರೂ ಅರಣ್ಯ ಸಿಬ್ಬಂದಿಗಳು ಅಮಾನತು 

Date:

Advertisements

ಚಿಕ್ಕಮಗಳೂರು ಭದ್ರಾ ಅಭಯಾರಣ್ಯ ಹುಲಿ ಮೀಸಲು ವ್ಯಾಪ್ತಿಯ ಲಕ್ಕವಳ್ಳಿ ವಲಯದ ಹಿನ್ನೀರು ಪ್ರದೇಶವಾಗಿರುವ, ಭೈರಾಪುರ ಅರಣ್ಯ ವಲಯದಲ್ಲಿ ಆನೆಯನ್ನು ಕೊಂದು ದಂತ ಅಪಹರಣ ಮಾಡಿರುವ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿಯೇ ಭಾಗಿಯಾಗಿರುವ ಆರೋಪದ ಮೇರೆಗೆ, ಫಾರೆಸ್ಟ್ ಗಾರ್ಡ್ ದೇವರಾಜ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ಕುಮಾರ್ ನಾಯಕ್ ಅವರನ್ನು ಅಮಾನತು ಮಾಡಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ಅವರು ಆದೇಶಿಸಿದ್ದಾರೆ.

ಪ್ರಕರಣದ ತನಿಖೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಭಾಗಿಯಾಗಿರುವುದು ಖಚಿತವಾದ ಹಿನ್ನೆಲೆಯಲ್ಲಿ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ ಜೂನ್ 2024ರಲ್ಲಿ ಆನೆ ಕಳೇಬರ ಅಲ್ಲಿನ ಬೀಟ್ ಸಿಬ್ಬಂದಿಗೆ ಸಿಕ್ಕಿದೆ. ಆಗ ಅದರಲ್ಲಿ ದಂತ ಇರುವುದು ಕಂಡುಬಂದಿದೆ. ಇದನ್ನು ಮೇಲಾಧಿಕಾರಿಗಳಿಗೆ ತಿಳಿಸದೇ ದಂತ ಕಳವು ಮಾಡಿರುವ ಸಾಧ್ಯತೆ ಇರುವುದು ಮೇಲ್ನೋಟಕ್ಕೆ ಖಚಿತವಾಗಿದೆ. ಆನೆ ಕಳೇಬರದ ಮರಣೋತ್ತರ ಪರೀಕ್ಷೆಯನ್ನು ಕಾಟಾಚಾರಕ್ಕೆ ಮಾಡಿಸಿ ಹೆಣ್ಣು ಆನೆ ಎಂದು ಮುಚ್ಚಿ ಹಾಕುವ ವ್ಯವಸ್ಥಿತ ಹುನ್ನಾರ ಮಾಡಿದ ಆರೋಪವೂ ಕೇಳಿ ಬಂದಿದೆ.

ಇದರಲ್ಲಿ ಸರಕಾರೇತರ ಸಂಸ್ಥೆಯ ಸದಸ್ಯರೊಬ್ಬರು ಭಾಗಿ ಆಗಿ ಸಿಬ್ಬಂದಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎನ್ನಲಾಗಿದ್ದು, ಸರಕಾರಿ ಪಶು ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸದೇ ಇಲಾಖೆಯ ಗುತ್ತಿಗೆ ವೈದ್ಯರೇ ಮರಣೋತ್ತರ ಪರೀಕ್ಷೆ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ನಕ್ಸಲರು ಭೂಗತರಾಗದೇ, ಸಮಾಜದ ಮುಖ್ಯವಾಹಿನಿಗೆ ಬರಬೇಕು; ಎಸ್ಪ್ ವಿಕ್ರಮ್ ಅಮಟೆ ಮನವಿ

ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಳಪಡಿಸಬೇಕು ಎಂದು ದೂರುದಾರ ಸಾಮಾಜಿಕ ಪರಿಸರ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಒತ್ತಾಯ ಮಾಡಿ ಅಧಿಕಾರಿಗಳು ತನಿಖೆ ಮಾಡಿ ಎಷ್ಟೇ ಪ್ರಭಾವಿಗಳು ಇದರಲ್ಲಿ ಇದ್ದರೂ ರಕ್ಷಿಸದೆ ತನಿಖೆ ಮಾಡಬೇಕು ಎಂದು ಮುಖ್ಯಮಂತ್ರಿ ಮತ್ತು ಅರಣ್ಯ ಸಚಿವರಿಗೆ ಮನವಿಯನ್ನು ಸಲ್ಲಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X