ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅನುದಾನ ಕಡಿತ ಸಂಭವ: ‌ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಣೆ ಮಾಡಿದ್ದ 5,300 ಕೋಟಿ ರೂ. ಅನುದಾನ ಬಿಡುಗಡೆ ಸೇರಿದಂತೆ ಕರ್ನಾಟಕದ ನೀರಾವರಿ ಯೋಜನೆಗಳು ಹಾಗೂ ಪೆನ್ನಾರ್ ನದಿಯ ಉಪನದಿ ಮಾರ್ಕಂಡೇಯ ನದಿಗೆ ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎತ್ತಿರುವ ತಕರಾರಿನ ಕುರಿತು ಕೇಂದ್ರ ಸಚಿವ ವಿ.ಸೋಮಣ್ಣ ಅವರ ಜತೆ ಡಿಸಿಎಂ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸಿದರು.

ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರ ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ ಹಣವನ್ನು ಕಡಿತಗೊಳಿಸಲಾಗುವುದು ಎನ್ನುವ ಸುದ್ದಿಯಿದೆ. ಇದರ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿಯಿಲ್ಲ. ಅನುದಾನ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಯೋಜನೆಯ ವಿವರಗಳನ್ನು ಕಳುಹಿಸಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಗಮನ ಹರಿಸಲಾಗಿದೆ” ಎಂದು ಹೇಳಿದರು.

“ತಮಿಳುನಾಡಿನವರು ಪೆನ್ನಾರ್ ನದಿ ನೀರಿನ ವಿಚಾರವಾಗಿ ಕಳೆದ 2ನೇ ತಾರೀಖಿನಂದು ಅಫಿಡವಿಟ್ ಸಲ್ಲಿಸಿದ್ದಾರೆ. ಮೂರು ವಾರದಲ್ಲಿ ತೀರ್ಮಾನ ಮಾಡಬೇಕಿರುವ ಕಾರಣಕ್ಕೆ ಅಫಿಡವಿಟ್ ಸಲ್ಲಿಕೆ ಮಾಡಲು ತಿಳಿಸಿದ್ದರು. ವಿಧಾನಸಬೆ ಚಳಿಗಾಲದ ಅಧಿವೇಶನವಿದ್ದ ಕಾರಣಕ್ಕೆ ನಮ್ಮಿಂದ ವಿಳಂಬವಾಯಿತು. ನಾವು ದಿನಾಂಕ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದೇವೆ” ಎಂದರು.

Advertisements

“ಎರಡು ರಾಜ್ಯಗಳ ಪ್ರತಿನಿಧಿಗಳನ್ನು ಸೇರಿಸಿ ಮಾತುಕತೆ ನಡೆಸಬೇಕಿರುವ ಕಾರಣಕ್ಕೆ ಶೀಘ್ರದಲ್ಲೇ ಸಭೆಗೆ ಒಂದು ದಿನಾಂಕವನ್ನು ಅಂತಿಮಗೊಳಿಸುವುದಾಗಿ ಹೇಳಿದ್ದಾರೆ. ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮಲ್ಲೇ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನವಿದೆ. ಈ ನದಿ ನೀರಿನ ವಿಚಾರದಲ್ಲಿ ತಮಿಳುನಾಡಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅಲ್ಲದೇ ಕೋಲಾರದ ನೀರಿನ ಸಮಸ್ಯೆ ಬಗ್ಗೆ ಎಲ್ಲರಿಗೂ ಅರಿವಿದೆ. ಕೋಲಾರದ ಕೆರೆಗಳಿಗೆ ವೃಷಭಾವತಿ ಸೇರಿದಂತೆ ಕೆ.ಸಿ ವ್ಯಾಲಿ ಯೋಜನೆಯಿಂದ ಬಳಕೆಯಾದ ನೀರನ್ನು ಶುದ್ದೀಕರಿಸಿ ತುಂಬಿಸಲಾಗುತ್ತಿದೆ. ಈ ಯೋಜನೆಯ ಬಗ್ಗೆ ಈ ಹಿಂದೆ ಕೇಂದ್ರ ಸರ್ಕಾರವೂ ಮೆಚ್ಚುಗೆ ವ್ಯಕ್ತಪಡಿಸಿತ್ತು” ಎಂದು ಹೇಳಿದರು.

“ಪೆನ್ನಾರ್ ನದಿ ನೀರಿನ ವಿವಾದ ಕುರಿತು ಟ್ರಿಬ್ಯೂನಲ್ ಮೂಲಕ ಹೋದರೆ ತಡವಾಗುತ್ತದೆ ಹಾಗೂ ಕೋರ್ಟ್ ಮತ್ತು ವಕೀಲರ ವೆಚ್ಚ ದುಬಾರಿಯಾಗುತ್ತದೆ. ಆದ ಕಾರಣಕ್ಕೆ ಸರ್ಕಾರದ ಮಟ್ಟದಲ್ಲೇ ಬಗೆಹರಿಸಿಕೊಳ್ಳಲು ನಾವು ನೋಡುತ್ತಿದ್ದೇವೆ. ಈಗಾಗಲೇ ಅರಣ್ಯ ಇಲಾಖೆಯವರು ಅನುಮತಿ ನೀಡುತ್ತೇವೆ ಎಂದು ಹೇಳಿದ್ದಾರೆ. ಈ ವಿಚಾರವಾಗಿ ಮಾತನಾಡಲು ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಬೇಕಿತ್ತು. ಅವರು ಲಭ್ಯವಿಲ್ಲ. ಇದರ ನಡುವೆ ಇತರೇ ಸಚಿವರನ್ನು ಇನ್ನೊಮ್ಮೆ ಬಂದು ಭೇಟಿಯಾಗುವೆ. ಇಲಾಖೆಯ ಬಜೆಟ್ ಕೆಲಸವಿರುವ ಕಾರಣಕ್ಕೆ ಕೇಂದ್ರ ಜಲಶಕ್ತಿ ಸಚಿವರೂ ಭೇಟಿಗೆ ಸಿಗಲಿಲ್ಲ” ಎಂದು ತಿಳಿಸಿದರು.

ಡಿನ್ನರ್ ರಾಜಕೀಯ ಮತ್ತು ಒಬ್ಬೊಬ್ಬರೇ ಸಚಿವರು ಔತಣಕೂಟ ಏರ್ಪಡಿಸುತ್ತಿರುವ ಬಗ್ಗೆ ಹಾಗೂ ಗೃಹಸಚಿವ ಪರಮೇಶ್ವರ್ ಅವರು ಬುಧವಾರ ಸಭೆ ಕರೆದಿರುವ ಬಗ್ಗೆ ಕೇಳಿದಾಗ, “ನಾನು ಹೊರದೇಶದಲ್ಲಿದ್ದ ಕಾರಣಕ್ಕೆ ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಬೆಂಗಳೂರಿಗೆ ಹೋದ ನಂತರ ಇದರ ಬಗ್ಗೆ ತಿಳಿದುಕೊಳ್ಳಲು ನಾನು ಪ್ರಯತ್ನಿಸುತ್ತೇನೆ. ಪಕ್ಷದ ಕೆಲಸವಿದ್ದ ಕಾರಣಕ್ಕೆ ಹಾಗೂ ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೋಮವಾರದಂದು ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಮಾದರಿಯ ಪ್ಯಾರಿ ದೀದಿ ಯೋಜನೆ ಪ್ರಕಟಣೆಗಾಗಿ ಬಂದಿದ್ದೆ” ಎಂದು ಹೇಳಿದರು.

ಕುಮಾರಸ್ವಾಮಿ ಭಂಡಾರದಲ್ಲಿ ಏನೇನಿದೆ?

60 ಪರ್ಸೆಂಟ್ ಸರ್ಕಾರ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರ ಭಂಡಾರದಲ್ಲಿ ಏನೇನಿದೆ ಎನ್ನುವ ಬಗ್ಗೆ ಆನಂತರ ಮಾತನಾಡೋಣ. ಈಗ ಚರ್ಚೆ ಮಾಡುವುದು ಬೇಡ” ಎಂದರು.

ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ನನ್ನ ಹೆಸರನ್ನು ತಳುಕು ಹಾಕಿಸಿರುವುದರ ಹಿಂದೆ ಯಾರಿದ್ದಾರೆ ಎನ್ನುವುದು ತಿಳಿದಿದೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನನಗೆ ಯಾವ ಐಶ್ವರ್ಯ ಗೌಡನೂ ಗೊತ್ತಿಲ್ಲ. ನನಗೆ ಸಂಬಂಧವಿಲ್ಲದ್ದು ಹಾಗೂ ಗೊತ್ತಿಲ್ಲದೇ ಇರುವ ಬಗ್ಗೆ ಮಾತನಾಡುವುದಿಲ್ಲ. ನನ್ನ ತಮ್ಮ ಡಿ.ಕೆ.ಸುರೇಶ್ ಅವರನ್ನು ಕೂಡ ಭೇಟಿಯಾಗಿಲ್ಲ. ಇದರ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಮಾತ್ರ ನೋಡಿದ್ದೇನೆ. ನನ್ನ ತಮ್ಮ ಇದರ ಬಗ್ಗೆ ನಿರ್ಲಕ್ಷ್ಯವಹಿಸಬೇಕಾಗಿತ್ತು. ಆತ ಕೂಡ ವಿದೇಶಕ್ಕೆ ಹೋಗಿದ್ದ ಕಾರಣಕ್ಕೆ ನಾನು ಮಾತನಾಡಲು ಸಾಧ್ಯವಾಗಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X