ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಆಮ್ ಆದ್ಮಿ ಪಕ್ಷ ವಿನೂತನವಾಗಿ ಪ್ರತಿಭಟನೆ ನಡೆಸಿತು.
ಪಕ್ಷದ ಕಾರ್ಯಕರ್ತರು, ಶಿವಮೊಗ್ಗ ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಟಾಂಗಾ ಸವಾರಿ ಮಾಡುವ ಮೂಲಕ ತಲುಪಿ ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಈಗಾಗಲೇ ಬೆಲೆ ಏರಿಕೆ ಬಿಸಿ ತಟ್ಟಿರುವ ರಾಜ್ಯದ ನಾಗರೀಕರಿಗೆ ಬಸ್ ದರ ಏರಿಕೆ ಮತ್ತಷ್ಟು ಹೊರೆಯಾಗಲಿದೆ. ದರ ಏರಿಕೆಯಿಂದ ಮಧ್ಯಮ, ಕೆಳವರ್ಗ ಹಾಗೂ ಕೂಲಿ ಕಾರ್ಮಿಕ ವರ್ಗಕ್ಕೆ ಸಮಸ್ಯೆಯಾಗಲಿದೆ. ಹಾಗಾಗಿ ಕೂಡಲೇ ಬಸ್ಸಿನ ದರವನ್ನು ಕಡಿತಗೊಳಿಸಿ, ಮೊದಲಿನ ದರವನ್ನು ನಿಗದಿಪಡಿಸಬೇಕೆಂದು ಶಿವಮೊಗ್ಗ ಜಿಲ್ಲಾ ʼಆಪ್ʼ ಮುಖಂಡ ನಜಿರ್ ಅಹ್ಮದ್ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸರ್ಕಾರಿ ಶಾಲೆ ಶಿಕ್ಷಕಿ ನಿವೃತ್ತಿ; ಅಂಬೇಡ್ಕರ್ ಫೋಟೋ ನೀಡಿ, ಹಳೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ಈ ವೇಳೆ ಹರೀಶ್, ಮಂಜುನಾಥ್ ಪೂಜಾರಿ, ಜಯಲಕ್ಷ್ಮಿ, ವಿಜಯ ಮತ್ತಿತರರು ಉಪಸ್ಥಿತರಿದ್ದರು.
