ಪೋಲಿಸರ ಕಿರುಕುಳ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಸುನಿಲ್ ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಹಣ ನೀಡುವಂತೆ ಪೀಡಿಸುತ್ತಿದ್ದ ನೇತಾಜಿ ನಗರದ ಪೊಲೀಸ್ ಠಾಣೆಯ ಪೊಲೀಸರ ಕಿರುಕುಳ ತಾಳಲಾರದೇ ಸುನಿಲ್ ಡಿ.28 ರಂದು ಆತ್ಮಹತ್ಯೆಗೆ ಯತ್ನಿಸಿದ್ದ, ಬಳಿಕ ಆತನನ್ನು ಸ್ಥಳೀಯ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ.
ಇದನ್ನು ಓದಿದ್ದೀರಾ? ಕಲಬುರಗಿ| ಸಾಲಬಾಧೆ : ವಿಷ ಸೇವಿಸಿ ಯುವ ರೈತ ಆತ್ಮಹತ್ಯೆ
ಸುನೀಲ್ ಸಾವಿಗೆ ಪೊಲೀಸರ ಕಿರುಕುಳವೇ ಕಾರಣ, ಆತ ಗಾಂಜಾ ಮಾರಾಟ ಮಾಡುತ್ತಿದ್ದಾನೆ ಎಂದು ಸುಳ್ಳು ಆರೋಪ ಹೊರೆಸಿ ಕಿರುಕುಳ ನೀಡಿದ್ದರಿಂದಲೇ ಆತ್ಮಹತ್ಯೆಗೆ ಯತ್ನಿಸಿ ಈಗ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಎಸ್‌ಪಿ ಅವರು ಗಂಭೀರವಾಗಿ ಪರಿಗಣಿಸಿ ನಮಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
