ಮಂಡ್ಯ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ 2 ಗಂಟೆ ವಿದ್ಯುತ್: ಸಚಿವ ಕೆ.ಜೆ. ಜಾರ್ಜ್

Date:

Advertisements
  • ಇಂಧನ ಇಲಾಖೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ
  • ಕುಸುಮ್-ಸಿ ಯೋಜನೆಗೆ ಅಗತ್ಯ ಭೂಮಿ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸಚಿವರ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯ ಕೃಷಿ ಪಂಪ್ ಸೆಟ್‌ಗಳಿಗೆ ಈಗ ಲಭ್ಯವಿರುವ ಏಳು ತಾಸು ತ್ರಿ ಫೇಸ್ ವಿದ್ಯುತ್ ಜತೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಮಂಡ್ಯ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಇಂಧನ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಹಾಗೂ ಇಧನ ಇಲಾಖೆಯ ಅಧಿಕಾಗಳೊಂದಿಗೆ ನಡೆದ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾವನೆ ಕಳುಹಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸೆಸ್ಕ್)ಗೆ ಸಚಿವರು ಸೂಚಿಸಿದರು.

ಕಳೆದ ಬಾರಿ ಉತ್ತಮ ಮಳೆಯಾಗಿರುವುದರಿಂದ ಕಬ್ಬು ಸೇರಿದಂತೆ ಅಲ್ಪಾವಧಿ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಅದರಲ್ಲೂ ಮಾರ್ಚ್ ಅಂತ್ಯದವರೆಗೆ ಕಬ್ಬು ಬೆಳೆಗೆ ನಿರಂತರ ನೀರಿನ ಅಗತ್ಯವಿರುವುದರಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಈಗಿರುವ ಏಳು ಗಂಟೆ ವಿದ್ಯುತ್ ಜತೆಗೆ ಹೆಚ್ಚುವರಿಯಾಗಿ ಎರಡು ಗಂಟೆ ವಿದ್ಯುತ್ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಚಿವರ ಗಮನಕ್ಕೆ ತಂದರು.

Advertisements

“ಕಳೆದ ಬಾರಿ ಹೆಚ್ಚು ಮಳೆಯಾಗಿದ್ದರಿಂದ ಈ ಬಾರಿ ಹಿಂಗಾರಿನಲ್ಲಿ ಕೃಷಿ ಪ್ರದೇಶ ವಿಸ್ತರಣೆಯಾಗಲಿದ್ದು, ಹೆಚ್ಚುವರಿ ವಿದ್ಯುತ್ ಬೇಕಾಗುತ್ತದೆ ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ ಆಧರಿಸಿ ಲೋಡ್ ಡಿಸ್ಪ್ಯಾಚ್ ಸೆಂಟರ್ ಮತ್ತು ಪಿಸಿಕೆಎಲ್ ನವರು ಲೆಕ್ಕ ಹಾಕಿದ್ದಾರೆ. ಅದರಂತೆ ಮಂಡ್ಯ ಜಿಲ್ಲೆಯಲ್ಲಿ ಕೃಷಿ ಪ್ರದೇಶ ಕಳೆದ ಬಾರಿಗಿಂತ ಶೇ. 30ರಷ್ಟು ಏರಿಕೆಯಾಗಲಿದೆ. ಹೀಗಾಗಿ ಕೃಷಿ ಚಟುವಟಿಕೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ವಿದ್ಯುತ್ ಪೂರೈಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಕುಸುಮ್- ಸಿ ಗೆ ಭೂಮಿ ನೀಡಲು ಸೂಚನೆ

“ಕುಸುಮ್-ಸಿ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ 59 ಸಬ್ ಸ್ಟೇಷನ್ ಗಳಿದ್ದು, ಈ ಪೈಕಿ 37 ಕಡೆ ಫೀಡರ್ ಸೋಲರೈಸೇಷನ್ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ ನಾಲ್ಕು ಯೋಜನೆಗಳ ಕೆಲಸ ಆರಂಭವಾಗಿದೆ. ಉಳಿದವುಗಳಿಗೆ ಭೂಮಿ ಗುರುತಿಸುವ ಕಾರ್ಯ ನಡೆಯುತ್ತಿದೆ. ಮುಂದಿನ ಒಂದು ವರ್ಷದಲ್ಲಿ ಈ ಯೋಜನೆ ಪೂರ್ಣಗೊಳಿಸಿ ರೈತರಿಗೆ ಹಗಲು ವೇಳೆ ನಿರಂತರ 7 ಗಂಟೆ ವಿದ್ಯುತ್ ಪೂರೈಸುವ ಕಾರ್ಯ ಮಾಡಬೇಕಾಗಿರುವುದರಿಂದ ಲಭ್ಯವಿರುವ ಸರ್ಕಾರಿ ಭೂಮಿಯನ್ನು ತ್ವರಿತವಾಗಿ ಒದಗಿಸಬೇಕು” ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.

“ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆಯಡಿ 2023ರ ಸೆಪ್ಟೆಂಬರ್ ವರೆಗೆ 1,21,164 ಅರ್ಜಿಗಳು ಬಂದಿದ್ದು, 1,15,794 ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಉಳಿದ 5,571 ಅರ್ಜಿಗಳನ್ನು ಮೂರು ತಿಂಗಳಲ್ಲಿ ಇತ್ಯರ್ಥಗೊಳಿಸಲಾಗುವುದು. ಆ ಬಳಿಕ ಅಕ್ರಮ-ಸಕ್ರಮಕ್ಕೆ 1,600 ಮಂದಿ ಅರ್ಜಿ ಸಲ್ಲಿಸಿದ್ದು, ಹಳೆಯ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸ ಅರ್ಜಿಗಳ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಬೇಸಿಗೆಯಲ್ಲಿ ವಿದ್ಯುತ್ ಖರೀದಿ

“ಈ ಬಾರಿ ಕೃಷಿ ಪ್ರದೇಶ ವಿಸ್ತರಣೆಯಾಗಿರುವ ಕಾರಣ ಜನವರಿಯಿಂದ ಮೇ ತಿಂಗಳವರೆಗೆ ಹೆಚ್ಚುವರಿ ವಿದ್ಯುತ್ ಅಗತ್ಯವಿದೆ. ಈ ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧರಿಸಲಾಗಿದೆ. ಜನವರಿ ಮತ್ತು ಫೆಬ್ರವರಿಯಲ್ಲಿ ತಲಾ 400 ಮೆಗಾವ್ಯಾಟ್ ಹಾಗೂ ಮಾರ್ಚ್, ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ತಲಾ 1000 ಮೆಗಾವ್ಯಾಟ್ ವಿದ್ಯುತ್ ಖರೀದಿಸಲು ಯೋಜನೆ ರೂಪಿಸಲಾಗಿದೆ. ದೀರ್ಘಾವದಿ ವಿದ್ಯುತ್ ಖರೀದಿ ಮಾಡಿದರೆ ಕಡಿಮೆ ದರಕ್ಕೆ ವಿದ್ಯುತ್ ಲಭ್ಯವಾಗುತ್ತದೆ. ಹೀಗಾಗಿ ಹೆಚ್ಚುವರಿ ವಿದ್ಯುತ್ತನ್ನು ಪೀಕ್ ಅವರ್ ನಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಇಲಾಖೆಗೂ ಲಾಭವಾಗುತ್ತದೆ” ಎಂದರು.

ಸೆಸ್ಕ್ ಅಧ್ಯಕ್ಷ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ವಿವೇಕಾನಂದ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಚಿಕ್ಕಲಿಂಗಯ್ಯ‌, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸಿಫ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಶೀಲಾ ಸಿ. ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಗುಡಿ, ಮಸೀದಿ, ಚರ್ಚುಗಳ ಪ್ರಭಾವದಿಂದ ದೂರವಿರಬೇಕಾಗಿದೆ: ನ್ಯಾ. ಬಿ ಟಿ ವಿಶ್ವನಾಥ್

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ದೇಶದ ಮಕ್ಕಳನ್ನು ನಾವು ಗುಡಿ, ಮಸೀದಿ,...

ಮಂಡ್ಯ | ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ: 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಜಿಲ್ಲಾಧಿಕಾರಿ – ಆರೋಪ

ಬೋರ್ಡಿಂಗ್‌ ಮತ್ತು ಲಾಡ್ಜಿಂಗ್‌ ತೆರೆಯಲು 'ಸಿಎಲ್‌7' ಪರವಾನಗಿ ನೀಡಲು ಮಂಡ್ಯ ಅಬಕಾರಿ...

ಮಂಡ್ಯ | ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದಿದೆ: ಸಚಿವ ಎನ್ ಚಲುವರಾಯಸ್ವಾಮಿ

ಸ್ವಾತಂತ್ತ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದು. ಕಿತ್ತೂರು ರಣಿ ಚೆನ್ನಮ್ಮ, ಸಂಗೊಳ್ಳಿ...

ಮಳವಳ್ಳಿ | ತಳಗವಾದಿ ಗ್ರಾಮಕ್ಕೆ ಮೂಲಸೌಕರ್ಯ ಮರೀಚಿಕೆ: ಜನಪ್ರತಿನಿಧಿಗಳ ನಿರ್ಲಕ್ಷ್ಯ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮ, ತಾಲೂಕು ಕೇಂದ್ರದಿಂದ ಕೇವಲ...

Download Eedina App Android / iOS

X