ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆ ತರಬೇತಿ ಕೇಂದ್ರ ಸ್ಥಾಪನೆ

Date:

Advertisements

ಮೈಸೂರಿನ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ (RPF) ಆರಂಭಿಸುವುದಾಗಿ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಭರವಸೆ ನೀಡಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ತಮ್ಮನ್ನು ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ ಕುಮಾರಸ್ವಾಮಿ ಅವರ ಮನವಿಗೆ ತತ್ ಕ್ಷಣವೇ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಅವರು; ಇದು ಅತ್ಯಂತ ಮಹತ್ವದ ಪ್ರಸ್ತಾವನೆ. ಈ ಬಗ್ಗೆ ಖುದ್ದು ತಾವೇ ಗಮನ ಹರಿಸುವುದಾಗಿ ತಿಳಿಸಿದರು.

ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ರೈಲ್ವೆ ರಕ್ಷಣಾ ಪಡೆಯ ತರಬೇತಿ ಶಾಲೆ ತೆರೆಯುವಂತೆ ರೇಲ್ವೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು ಕುಮಾರಸ್ವಾಮಿ ಅವರು. ರೇಲ್ವೆ ಸುರಕ್ಷತೆಗೆ ಮೈಸೂರು ಭಾಗದಲ್ಲಿ ಹೆಚ್ಚು ಆದ್ಯತೆ ಕೊಡಬೇಕಿದೆ ಹಾಗೂ ಈ ಭಾಗದಲ್ಲಿ ಪ್ರಯಾಣಿಕರ ದಟ್ಟಿಣಿಯು ಹೆಚ್ಚಾಗಿದ್ದು, ಒಟ್ಟಾರೆ ರೇಲ್ವೆ ಸುರಕ್ಷತೆಯು ಮಹತ್ವದ ಅಂಶವಾಗಿದೆ ಎಂದು ಕುಮಾರಸ್ವಾಮಿ ಅವರು ರೇಲ್ವೆ ಸಚಿವರಿಗೆ ಮನವಿ ಮಾಡಿಕೊಟ್ಟರು. ಈ ಬಗ್ಗೆ ತಕ್ಷಣವೇ ಗಮನ ಹರಿಸುವುದಾಗಿ ರೇಲ್ವೆ ಸಚಿವರು ಭರವಸೆ ನೀಡಿದರು.

Advertisements

ದೇವೇಗೌಡರು ಪ್ರಧಾನಿಯಾಗಿದ್ದಾಗ ಕೆ.ಆರ್.ನಗರದಲ್ಲಿದ್ದ ಹಳೆಯ ರೈಲು ನಿಲ್ದಾಣವನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿತ್ತು. ಹಳೆಯ ನಿಲ್ದಾಣದ ಜಾಗ ಹಾಗೆಯೇ ಖಾಲಿ ಉಳಿದಿದ್ದು, ಭೂಸ್ವಾಧೀನದ ಸಮಸ್ಯೆ ಇಲ್ಲ ಎಂದು ಅಶ್ವಿನಿ ವೈಷ್ಣವ ಅವರಿಗೆ ಸಚಿವರು ಮನವರಿಕೆ ಮಾಡಿಕೊಟ್ಟರು.

ರೈಲ್ವೆ ರಕ್ಷಣಾ ಪಡೆಯ ತರಬೇತಿ ಶಾಲೆ ಬಂದರೆ ಬೃಹತ್ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿ ಆಗುತ್ತದೆ. ಸ್ಥಳೀಯ ಯುವಕರಿಗೆ ಪ್ರತ್ಯಕ್ಷ, ಪರೋಕ್ಷವಾಗಿ ದುಡಿಮೆಗೆ ಅವಕಾಶ ಲಭ್ಯವಾಗುತ್ತದೆ. ಮೈಸೂರು ಭಾಗದ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ಸಚಿವರು ಹೇಳಿದರು. ಇದಲ್ಲದೆ; ರಾಜ್ಯದಲ್ಲಿ ಬಾಕಿ ಇರುವ ವಿವಿಧ ರೇಲ್ವೆ ಯೋಜನೆಗಳನ್ನು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸುವ ಬಗ್ಗೆ ಕುಮಾರಸ್ವಾಮಿ ಅವರು ರೇಲ್ವೆ ಸಚಿವರ ಜತೆ ಚರ್ಚಿಸಿದರು.

ರಾಮನಗರ – ಚನ್ನಪಟ್ಟಣ ನಡುವೆ ರೇಲ್ವೆ ಲೆವೆಲ್ ಕ್ರಾಸಿಂಗ್ -44/100-200 ಬಳಿ ರೇಲ್ವೆ ಮೇಲು ಸೇತುವೆ (ಫ್ಲೈ ಓವರ್) ನಿರ್ಮಾಣದ ಬಗ್ಗೆಯೂ ಕುಮಾರಸ್ವಾಮಿ ಅವರು ಸಲ್ಲಿಸಿದ ಮನವಿಗೆ ರೇಲ್ವೆ ಸಚಿವರು ಒಪ್ಪಿಗೆ ನೀಡಿದರು. ಈ ಬಗ್ಗೆಯೂ ಕೂಡಲೇ ಕ್ರಮ ವಹಿಸುವುದಾಗಿ ಅವರು ಭರವಸೆ ನೀಡಿದರು.

ಬೆಂಗಳೂರು – ಮಂಗಳೂರು ನಡುವಿನ ರೇಲ್ವೆ ಮಾರ್ಗದಲ್ಲಿ ಪ್ರಮುಖದ್ದಾಗಿರುವ ಸಕಲೇಶಪುರ ರೇಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಮನವಿಗೂ ಸ್ಪಂದಿಸಿದ ಸಚಿವರು, ಈ ಕಾರ್ಯವನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಆದಷ್ಟು ಬೇಗ ಕಾಮಗಾರಿ ಮುಗಿಸಿ ಅತ್ಯಾಧುನಿಕ ರೇಲ್ವೆ ನಿಲ್ದಾಣ ನಿರ್ಮಾಣ ಮಾಡುವುದಾಗಿ ಅಶ್ವಿನಿ ವೈಷ್ಣವ ಅವರು ಸಚಿವರಿಗೆ ತಿಳಿಸಿದರು.

ರೇಲ್ವೆ ಸಚಿವರಿಗೆ ಹೆಚ್ ಡಿ ಮಾಡಿದ ಮನವಿಗಳು

*ಚನ್ನಪಟ್ಟಣ – ಬೆಂಗಳೂರು – ಮೈಸೂರು ವಿಭಾಗದಲ್ಲಿ ಪ್ರಮುಖವಾದ ಎಲ್ಲಾ ರೇಲುಗಳ ನಿಲುಗಡೆ.

*ಹಾಸನ, ಮಂಗಳೂರು ಒಳಗೊಂಡ ಮುಂಬಯಿ – ಬೆಂಗಳೂರು – ಮುಂಬಯಿ ಮಾರ್ಗದಲ್ಲಿ ಹೊಸ ರೈಲಿಗೆ ಮಂಜೂರು.

*ಮದ್ದೂರು ಮತ್ತು ಮಂಡ್ಯದಲ್ಲಿ ಬೆಂಗಳೂರು – ಮಂಗಳೂರು – ಮುರುಡೇಶ್ವರ ನಡುವೆ ಸಂಚರಿಸುವ 16585 ರೇಲಿನ ನಿಲುಗಡೆ.

*ಕೊಪ್ಪಳ ಜಿಲ್ಲೆಯಲ್ಲಿ ಹೊಸ ಬ್ರಾಡ್ ಗೇಜ್ ರೇಲ್ವೆ ಮಾರ್ಗಗಳ ಮಂಜೂರಾತಿ.

*ಹೆಜ್ಜಾಲ- ಕನಕಪುರ – ಮಳವಳ್ಳಿ – ಕೊಳ್ಳೇಗಾಲ – ಯಳಂದೂರು – ಚಾಮರಾಜನಗರ ರೈಲು ಮಾರ್ಗಕ್ಕೆ ಶೀಘ್ರ ಅನುಮತಿ.

ರಾಜ್ಯಕ್ಕೆ ಸಂಬಂಧಪಟ್ಟ ಇಷ್ಟೂ ಮನವಿಗಳಿಗೆ ರೇಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕರ್ನಾಟಕದ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರಕಾರ ಬದ್ಧವಾಗಿದ್ದು, ರಾಜ್ಯದಲ್ಲಿ ರೇಲ್ವೆ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲಾಗುವುದು ಹಾಗೂ ಹೊಸ ಯೋಜನೆಗಳ ಬಗ್ಗೆಯೂ ಅಗತ್ಯ ಪರಿಶೀಲನೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ ಇಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

₹150ರಿಂದ 200 ಕೋಟಿ ಹೂಡಿಕೆ; ಪ್ರತೀ ವರ್ಷ 600 ಮಂದಿಗೆ ತರಬೇತಿ

ರೈಲ್ವೆ ರಕ್ಷಣಾ ಪಡೆಯ ತರಬೇತಿ ಕೇಂದ್ರ ಸ್ಥಾಪನೆ ಬಗ್ಗೆ ಕೇಂದ್ರ ಸಚಿವರ ಜತೆಯಲ್ಲಿದ್ದು ರೇಲ್ವೆ ಸಚಿವರಿಗೆ ಮನವಿ ಸಲ್ಲಿಸಿದ ವೇಳೆ ಉಪಸ್ಥಿತರಿದ್ದ ಸಾ.ರಾ.ಮಹೇಶ್ ಅವರು ಮತ್ತಷ್ಟು ಮಾಹಿತಿ ಹಂಚಿಕೊಂಡರು. ತರಬೇತಿ ಕೇಂದ್ರಕ್ಕೆ ಕೇಂದ್ರ ಸರ್ಕಾರ ₹150ರಿಂದ 200 ಕೋಟಿ ಹೂಡಿಕೆ ಮಾಡಲಿದೆ. ಪ್ರತೀ ವರ್ಷ 600 ಮಂದಿಗೆ ತರಬೇತಿ ದೊರೆಯಲಿದೆ. ಮೈಸೂರು ಅದರಲ್ಲಿಯೂ ಕೆ ಆರ್ ನಗರ ತಾಲೂಕು ಅಭಿವೃದ್ಧಿಗೆ ದೊಡ್ಡ ಕೊಡುಗೆ ಸಿಕ್ಕಿದಂತೆ ಆಗುತ್ತದೆ. ಸ್ಥಳೀಯರಿಗೆ ಹೆಚ್ಚೆಚ್ಚು ಉದ್ಯೋಗ ಲಭ್ಯವಾಗಲಿದೆ. ಈ ಸಂಬಂಧ ಕೇಂದ್ರ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಹಾಗೂ ಮಂಡ್ಯ ಸಂಸದರು, ಕೇಂದ್ರದ ಬೃಹತ್ ಕೈಗಾರಿಕೆ – ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X