ತಿಪಟೂರು:ಕಲ್ಪತರು ವಿದ್ಯಾ ಸಂಸ್ಥೆಯ ವತಿಯಿಂದ ಜನವರಿ 9 ರ ಗುರುವಾರ ಬೆಳಗ್ಗೆ 9:30 ರಿಂದ ಸಂಜೆ 5:00 ರ ವರೆಗೆ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳ ವನ್ನು ಕಲ್ಪತರು ಕಾಲೇಜು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಪತರು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಹೆಚ್.ಜಿ.ಸುಧಾಕರ್ ತಿಳಿಸಿದರು.
ತಿಪಟೂರು ನಗರದ ಕಲ್ಪತರು ತಾಂತ್ರಿಕ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೃಹತ್ ಉದ್ಯೋಗ ಮೇಳವನ್ನು ಕಲ್ಪತರು ವಿದ್ಯಾಸಂಸ್ಥೆಯು ಇದೇ ಮೊದಲ ಬಾರಿಗೆ ತಿಪಟೂರು,ಅರಸೀಕೆರೆ ಚಿಕ್ಕನಾಯಕನಹಳ್ಳಿ ಹಾಗೂ ಹುಳಿಯಾರು ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಸುಮಾರು ಪ್ರತಿಷ್ಠಿತ 75ರಿಂದ 80ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು,ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಕಲ್ಪತರು ವಿದ್ಯಾ ಸಂಸ್ಥೆ ಉಪಾಧ್ಯಕ್ಷರಾದ ಜಿ.ಪಿ. ದೀಪಕ್ ಮಾತನಾಡಿ, ಮೊದಲ ಬಾರಿಗೆ ನಮ್ಮ ವಿದ್ಯಾ ಸಂಸ್ಥೆಯ ವತಿಯಿಂದ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡುತ್ತಿದ್ದೇವೆ. ಇಂಜಿನಿಯರಿಂಗ್,ಎಂಬಿಎ, ವಿದ್ಯಾರ್ಥಿಗಳಿಗೆ ಮಾತ್ರ ಉದ್ಯೋಗ ಮೇಳಗಳನ್ನು ಆಯೋಜನೆ ಮಾಡುತ್ತಿದ್ದು, ಆದರೆ ಐಟಿಐ,ಬಿ.ಎ,
ಬಿ.ಎಸ್.ಸಿ,ವಿದ್ಯಾರ್ಥಿಗಳಿಗೆ ಸಹಾಯವಾಗಲು ಬೆಂಗಳೂರಿನ ಪ್ರತಿಷ್ಠಿತ ಸುಮಾರು 80ಕ್ಕೂ ಹೆಚ್ಚು ಕಂಪನಿಗಳು ಇದರಲ್ಲಿ ಭಾಗವಹಿಸುತ್ತಿವೆ. ಸುಮಾರು 3000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಸಂಸ್ಥೆಯ ಕಾರ್ಯದರ್ಶಿ ಸಂಗಮೇಶ್ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು
ಎಸ್.ಎಸ್.ಎಲ್.ಸಿ, ಪಿಯುಸಿ,ಐಟಿಐ, ಡಿಪ್ಲೋಮೋ,ಬಿಎ,
ಬಿಎಸ್ಸಿ ಮುಗಿಸಿರುವ ಗ್ರಾಮೀಣ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಎಲ್ಲರಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ತಿಳಿಸಿದರು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಕೆ. ಷಡಕ್ಷರಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಪಿ.ಕೆ. ತಿಪ್ಪೇರುದ್ರಪ್ಪನವರು, ಮುಖ್ಯ ಅತಿಥಿಗಳಾಗಿ ಡಾ.ರಾಮಕೃಷ್ಣ ರೆಡ್ಡಿ,ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ನ ಶ್ರೀಮತಿ ಕರ್ಪಗಮ್ ಪ್ರಕಾಶ್, ಇನ್ನು ಹಲವಾರು ಕಂಪನಿ ಮುಖ್ಯಸ್ಥರುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷರಾದ ಬಾಗೇಪಲ್ಲಿ ನಟರಾಜು,ಬಿ.ಎಸ್. ಉಮೇಶ್, ಕಾರ್ಯದರ್ಶಿಗಳಾದ ಜಿ.ಎಸ್. ಉಮಾಶಂಕರ್ ಮತ್ತು ಜಗದೀಶ್ ಮೂರ್ತಿ ಸೇರಿದಂತೆ ಕಲ್ಪತರು ವಿದ್ಯಾ ಸಂಸ್ಥೆಯ ಪ್ರಾಂಶುಪಾಲರುಗಳು ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.
ವರದಿ – ಮಿಥುನ್ ತಿಪಟೂರು