ಪ್ಲಾಸ್ಟಿಕ್ ಚೀಲವೊಂದರಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ಮಂಗಳವಾರ ಹುಬ್ಬಳ್ಳಿಯ ಯಲ್ಲಾಪುರ ಓಣಿ ಸಮೀಪದ ಏಳು ಮಕ್ಕಳ ತಾಯಿ ಗುಡಿ ಬಳಿ ನಡೆದಿದೆ.
ನವಜಾತ ಶಿಶು ಪ್ಲಾಸ್ಟಿಕ್ ಚೀಲದಲ್ಲಿ ಕಂಡ ಸ್ತಳೀಯರು ತಕ್ಷಣ ಬೆಂಡಿಗೇರಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಶಿಶುವನ್ನು ಗಮನಿಸಿದ ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಗುರುತಿಸಿ ಪತ್ತೆ ಹಚ್ಚಲು ತನಿಖೆ ಮುಂದುವರೆಸಿದ್ದಾರೆ ಎಂದು ಹೇಳಲಾಗಿದೆ.