ರಾಯಚೂರು ನಗರದಲ್ಲಿ ಎರಡು ಕಡೆ ಲೋಕಾಯುಕ್ತ ದಾಳಿ ನಡೆದಿದ್ದು, ಜೆಸ್ಕಾಂ ಕಚೇರಿ ಹಾಗೂ ಜೆಸ್ಕಾಂ ಎಂಜಿನಿಯರ್ ಮನೆ ಮೇಲೆಯೂ ದಾಳಿ ನಡೆದಿದೆ.
ರಾಯಚೂರು ತಾಲೂಕಿನ ಗಿಲ್ಲೇಸೂಗೂರು ಜೆಸ್ಕಾಂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಂತರ ನಗರದ ಐಡಿಎಸ್‌ಎಂಟಿ ಲೇಔಟ್‌ನಲ್ಲಿರುವ ಜೆಸ್ಕಾಂ ಕಿರಿಯ ಎಂಜಿನಿಯರ್ ಹುಲಿರಾಜ್ ಮನೆಯ ಮೇಲೆ ದಾಳಿ ಮಾಡಿ ದಾಖಲಾತಿಗಳ ಪರಿಶೋಧನೆ ನಡೆಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಈದಿನ ಫಲಶೃತಿ: ‘ಸಂಡೇ ಬಜಾರ್’ ಸ್ವಚ್ಛಗೊಳಿಸಲು ಮುಂದಾದ ಅಧಿಕಾರಿಗಳು
ಗಿಲ್ಲೇಸೂಗೂರು ಕಿರಿಯ ಅಭಿಯಂತರ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹುಲಿರಾಜ್, ಅಕ್ರಮ ಆಸ್ತಿಗಳಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೊಪ್ಪಳ ಹಾಗೂ ರಾಯಚೂರು ತಂಡದಿಂದ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಸಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇನ್‌ಸ್ಪೆಕ್ಟರ್ ಶೈಲಜಾ ಸೇರಿದಂತೆ ಇತರೆ 10 ಮಂದಿ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
