ಪ್ರವಾಸಕ್ಕೆಂದು ಸೋಮೇಶ್ವರ ಬೀಚ್‌ಗೆ ಬಂದಿದ್ದ ಕೇರಳ ಮೂಲದ ಮೂವರು ಮುಸ್ಲಿಂ ಯುವಕರು ಮತ್ತು ಮೂವರು ಯುವತಿಯರ ಮೇಲೆ ಪುಂಡರ ಗುಂಪೊಂದು ದಾಳಿ ಮಾಡಿ, ಅನೈತಿಕ ಪೊಲೀಸ್‌ಗಿರಿ ನಡೆಸಿದ್ದಾರೆ. ಹಲ್ಲೆ ಮಾಡಿದ ನಾಲ್ವರು ಪುಂಡರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಯುವಕ-ಯುವತಿಯ ಮೇಲೆ ಹಲ್ಲೆ ನಡೆಸಿದ ಆರೋಪಿ ಯತೀಶ್ ಬಸ್ತಿಪಡ್ಪು, ಸಚಿನ್ ತಲಪಾಡಿ, ಸುಹಾನ್ ತಲಪಾಡಿ ಹಾಗೂ ಇನ್ನೋರ್ವ ಅಪ್ರಾಪ್ತ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಸಂಜೆ ಬೀಚ್‌ಗೆ ಬಂದಿದ್ದ ಆರು ಮಂದಿಯಲ್ಲಿ ಮೂವರು ಯುವತಿಯರು ಹಾಗೂ ಮೂವರು ಯುವಕರಿದ್ದರು. ಆ ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂಬ ಸಂಶಯದ ಮೇಲೆ ಪುಂಡರ ಗುಂಪು ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ.
ಗಾಯಗೊಂಡಿದ್ದ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.