ನಾಳೆ (ಜ.9) ರಂದು ಬೀದರ್ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆ ಬೀದರ್ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ರಾಜ್ಯಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳ ಸಮಿತಿ ನೇತೃತ್ವದಲ್ಲಿ ಬೀದರ್ ಬಂದ್‌ಗೆ ಕರೆ ನೀಡಿದ್ದು, ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.
ಈ ಬಗ್ಗೆ ಮಾಹಿತಿ ನೀಡಿರುವ ಬೀದರ್ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಆಡಳಿತ) ಎಸ್.ಎಲ್. ಪ್ರಸನ್ನಕುಮಾರ್ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಕಾಂತ ಶಾಬಾದಕರ್ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ
ಬೀದರ್ ಬಂದ್ ಹಿನ್ನೆಲೆಯಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ಬಂದ್‌ಗೆ ಕರೆ ಹಿನ್ನೆಲೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳ ನಿರ್ದೇಶನ ಮೇರೆಗೆ ಬೀದರ್ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.