ರಾಜ್ಯಕ್ಕೆ ಕರ್ನಾಟಕವೆಂದು ಹೆಸರಾಗಿ 50 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಈದಿನ.ಕಾಮ್ ಡಿಜಿಟಲ್ ಮಾಧ್ಯಮ ಸಂಸ್ಥೆಯು ಪ್ರಕಟಿಸಿರುವ ʼನಮ್ಮ ಕರ್ನಾಟಕ–ನಡೆದ 50 ಹೆಜ್ಜೆ… ಮುಂದಿನ ದಿಕ್ಕುʼ ಎಂಬ ವಿಶೇಷ ಸಂಚಿಕೆ ಮತ್ತು ಈದಿನ ನ್ಯೂಸ್ ಆ್ಯಪ್ ಬಿಡುಗಡೆ ಸಮಾರಂಭಕ್ಕೆ ಪತ್ರಕರ್ತ ಮೊಹಮ್ಮದ್ ಝುಬೇರ್ ಆಗಮಿಸುತ್ತಿದ್ದಾರೆ.
ಮಂಗಳೂರು ನಗರದ ಬಲ್ಮಠದ ಕರ್ನಾಟಕ ಥಿಯೋಲಾಜಿಕಲ್ ಕಾಲೇಜು ಆವರಣದಲ್ಲಿರುವ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ಜನವರಿ 9ರ ಗುರುವಾರ ಸಾಯಂಕಾಲ 4ಕ್ಕೆ ನಡೆಯಲಿರುವ ವಿಶೇಷ ಸಂಚಿಕೆ ಮತ್ತು ಈದಿನ ನ್ಯೂಸ್ ಆ್ಯಪ್ ಬಿಡುಗಡೆ ಸಮಾರಂಭದಲ್ಲಿ, ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಝುಬೇರ್ ವಿಶೇಷ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.

ಕರ್ನಾಟಕ ಥಿಯೋಲಾಜಿಕಲ್ ಕಾಲೇಜಿನ ಪ್ರಾಶುಪಾಲ ರೆ. ಡಾ. ಎಚ್ ಎಂ ವಾಟ್ಸನ್ ಈದಿನ ನ್ಯೂಸ್ ಆ್ಯಪ್ ಬಿಡುಗಡೆ ಮಾಡಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಜ.9ರಂದು ಅಕ್ಕಮಹಾದೇವಿ ಮಹಿಳಾ ವಿವಿಯ 16ನೇ ಘಟಿಕೋತ್ಸವ
ಈದಿನ ಸಂಸ್ಥೆಯ ಸಮುದಾಯ ವಿಭಾಗದ ಮುಖ್ಯಸ್ಥ ಡಾ. ವಾಸು ಹೆಚ್ ವಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಎಂ ದೇವದಾಸ್, ಸಾಮಾಜಿಕ ಕಾರ್ಯಕರ್ತೆ ವಿದ್ಯಾ ದಿನಕರ್, ಅನುಪಮ ಮಹಿಳಾ ಮಾಸಿಕದ ಸಂಪಾದಕಿ ಶಹನಾಝ್ ಎಂ ಮತ್ತು ಡೀಡ್ಸ್ ಸಂಸ್ಥೆಯ ಸಮಾಜ ಸೇವಕಿ ಜೆಸಿಂತಾ ಪಿರೇರಾ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.