ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ತಹಶೀಲ್ದಾರ್ ಪ್ರಕಾಶ ಗಾಯಕವಾಡ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದಾರೆ.
ನೂರಾರು ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಖಾತೆ ಹಾಗೂ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ಹಾಗೂ ಖಾನಾಪುರ ತಾಲೂಕಿನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಸುಮಾರು 762 ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಿರುವುದಾಗಿ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ್ ಆರೋಪ ಮಾಡಿದ್ದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಜ.9ರಂದು ಅಕ್ಕಮಹಾದೇವಿ ಮಹಿಳಾ ವಿವಿಯ 16ನೇ ಘಟಿಕೋತ್ಸವ
ನಿಪ್ಪಾಣಿಯಲ್ಲಿರುವ ಪ್ರಕಾಶ ಗಾಯಕವಾಡ ಅವರ ಮನೆ ಹಾಗೂ ಖಾನಾಪುರ ಕಚೇರಿ ಮೇಲೆ ಅಧಿಕಾರಿಗಳ ದಾಳಿ ಮಾಡಿದ್ದು, ಬೆಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿದೆ.
ಬೆಳಗಾವಿ ಎಸ್‌ಪಿ ಹಣಮಂತರಾಯ್ ನೇತೃತ್ವದಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾಯುಕ್ತ ಡಿವೈಎಸ್‌ಪಿ ಪುಷ್ಪಲತಾ, ನಿರಂಜನ್ ಪಾಟೀಲ ದಾಳಿಯಲ್ಲಿ ಇದ್ದರು.