ಸಿಎಂ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಬಂದ ನಕ್ಸಲ್ ಹೋರಾಟಗಾರರು

Date:

Advertisements

ಸಶಸ್ತ್ರ ಹೋರಾಟವನ್ನು ತ್ಯಜಿಸಿ ಮುಖ್ಯವಾಹಿನಿಗೆ ಬರಲು ಮತ್ತು ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ನಕ್ಸಲ್ ಹೋರಾಟಗಾರರು ನಿರ್ಧರಿಸಿದ್ದು, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಸರ್ಕಾರ ಎದುರು ಶರಣಾಗಿದ್ದಾರೆ. ನಕ್ಸಲ್ ಹೋರಾಟದಲ್ಲಿದ್ದ ಆರು ಮಂದಿ ಮಾವೋವಾದಿ ಹೋರಾಟಗಾರರು ಮುಖ್ಯವಾಹಿನಿಗೆ ಬಂದಿದ್ದಾರೆ. ಕಾನೂನಿಗೆ ತಲೆಬಾಗಿರುವ ಹೋರಾಟಗಾರರು, ಜನರೊಂದಿಗೆ ಸೇರಿ ಹೋರಾಟ ಮುಂದುವರೆಸಲು ಮುಂದಾಗಿದ್ದಾರೆ.

ಮುಖ್ಯವಾಹಿನಿಗೆ ಬಂದ ಆರು ಮಂದಿ ಮಾವೋವಾದಿ ಹೋರಾಟಗಾರರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಲಾಬಿ ಹೂವು ಕೊಟ್ಟು ಪ್ರಜಾತಾಂತ್ರಿಕ ಹೋರಾಟಕ್ಕೆ ಸ್ವಾಗತಿಸಿದ್ದಾರೆ. ನಕ್ಸಲ್ ಹೋರಾಟಗಾರರು ತಮ್ಮ ನಕ್ಸಲ್ ವಸ್ತ್ರಗಳನ್ನು ಸಿದ್ದರಾಮಯ್ಯ ಅವರಿಗೆ ಒಪ್ಪಿಸಿಕೊಂಡಿದ್ದಾರೆ.

ಶಾಂತಿಗಾಗಿ ನಾಗರಿಕ ವೇದಿಕೆಯ ಮುಖಂಡರು ಮತ್ತು ಸರ್ಕಾರದ ಪ್ರತಿನಿಧಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ್ದ ಮಾವೋವಾದಿ ಹೋರಾಟಗಾರರು ಮುಖ್ಯವಾಹಿನಿ ಬರಲು ಸಮ್ಮತಿ ಸೂಚಿಸಿದ್ದರು. ‘ಶರಣಾಗತಿ ಮತ್ತು ಪುನರ್‌ವಸತಿ ವಿಶೇಷ ಪ್ಯಾಕೇಜ್‌’ ಅಡಿಯಲ್ಲಿ ಶರಣಾಗುವಂತೆ ಸರ್ಕಾರ ನೀಡಿದ್ದ ಕರೆಯನ್ನು ಒಪ್ಪಿಕೊಂಡಿದ್ದರು. ಅದರಂತೆ, ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಬಂದಿರುವ ವಾವೋವಾದಿ ಹೋರಾಟಗಾರರಾದ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡದ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ ಮತ್ತು ರಾಯಚೂರಿನ ಮಾರೆಪ್ಪ ಅರೋಲಿ ಅವರು ಸರ್ಕಾರದ ಮುಂದೆ ಶರಣಾಗಿದ್ದಾರೆ.

Advertisements

ತಮಗೆ ಶೀಘ್ರವೇ ಜಾಮೀನು ಕೊಡಿಸಲು ಮತ್ತು ಕಾನೂನು ಹೋರಾಟವನ್ನು ನಿಭಾಯಿಸಲು ಸರ್ಕಾರ ನೆರವು ನೀಡಬೇಕು. ಶೀಘ್ರವೇ ಜಾಮೀನು ಕೊಡಿಸಿ, ಜನರೊಂದಿಗಿನ ಹೋರಾಟದಲ್ಲಿ ತೊಡಗಿಕೊಳ್ಳಲು ತ್ವರಿತವಾಗಿ ಅವಕಾಶ ಮಾಡಿಕೊಡಬೇಕು ಎಂಬ ಬೇಡಿಕೆಯೂ ಸೇರಿದಂತೆ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

“ಸರ್ಕಾರದ ಮುಂದೆ ಶರಣಾಗಿರುವ ಆರು ಮಂದಿ ನಕ್ಸಲ್ ಹೋರಾಟಗಾರರಿಗೆ ಸರ್ಕಾರವು ಶರಣಾಗತಿ ಮತ್ತು ಪುನರ್ವಸತಿಯ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಸೌಲಭ್ಯಗಳನ್ನು ಒದಗಿಸಲಿದೆ. ಕಾನೂನು ಪ್ರಕಾರ ಅವರಿಗೆ ಪರಿಹಾರ ಕೊಡುತ್ತೇವೆ. ಕಾಡಿನಿಂದ ಜೈಲಿಗೆ, ಜೈಲಿನಿಂದ ನಾಡಿಗೆ ತರುವ ಪ್ರಯತ್ನ ಮಾಡಿದ್ದೇವೆ. ಅವರಿಗೆ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ಕೊಡಲಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಅನ್ಯಾಯದ ವಿರುದ್ಧ ಅವರ ಹೋರಾಟ ಮುಂದುವರಿಯಲಿ. ಸಂವಿಧಾನ ಪ್ರಕಾರ ಹೋರಾಟ ನಡೆಸಲಿ. ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯ ಮಾಡಬೇಕು ಎನ್ನುವ ಉದ್ದೇಶ ಈಡೇರಿದೆ. ನಕ್ಸಲ್ ಮುಕ್ತ ಹೋರಾಟಕ್ಕೆ ಅನೇಕ ರಾಜ್ಯಗಳು ಶ್ರಮಿಸಿವೆ.
ಶರಣಾಗತಿ ಆಗಲು ಮುಂದೆ ಬಂದಿರುವ ಆರು ನಕ್ಸಲೀಯರ ಬೇಡಿಕೆಗಳನ್ನು ಜಿಲ್ಲಾಡಳಿತ ಈಡೇರಿಸಲಿದೆ. ಅವರ ವಿರುದ್ಧದ ಪ್ರಕರಣಗಳ ತನಿಖೆಗಾಗಿ ತ್ವರಿತ ನ್ಯಾಯಾಲಯ ಸ್ಥಾಪನೆ ಮಾಡುತ್ತೇವೆ” ಎಂದು ಸಿಎಂ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X