ಚಿಕ್ಕಮಗಳೂರು | ಪೊಲೀಸ್‌ ಠಾಣೆಯಲ್ಲೇ ಧರಣಿ ಕುಳಿತ ಮಹಿಳೆ

Date:

Advertisements

ತಮಗೆ ಬೆದರಿಕೆ ಹಾಕಿದವರ ವಿರುದ್ಧ ದೂರು ನೀಡಲು ಬಂದರೆ, ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ. ದೂರು ದಾಖಲಾಗುವವರೆಗೂ ಕದಲುವುದಿಲ್ಲವೆಂದು ಮಹಿಳೆಯೊಬ್ಬರು ತನ್ನ ಮಗುವೊಂದಿಗೆ ರಾತ್ರಿ 1 ಗಂಟೆವರೆಗೂ ಕಳಸ ಪೊಲೀಸ್‌ ಠಾಣೆಯಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಗ್ರಾಮದ ಮಹಿಳೆ ಧರಣಿ ನಡೆಸಿದ್ದಾರೆ. ತನಗೂ, ತನ್ನ ಪತಿಗೂ ಇಬ್ಬರು ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ಅವರ ವಿರುದ್ಧ ದೂರು ನೀಡಲು ಹೋದರೆ, ಕುದುರೆಮುಖ ಪೊಲೀಸ್‌ ಠಾಣೆಯ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ತಮ್ಮ ಪಕ್ಕದ ಮನೆಯ ಯುವಕರು ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಘಟನೆ ವಿಡಿಯೋ ಕೂಡ ಇದೆ. ವಿಡಿಯೋವನ್ನು ನೀಡಿದರೂ ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ ಎಂದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

ಎಫ್‌ಐಆರ್ ದಾಖಲಾಗುವವರೆಗೂ ಠಾಣೆಯಿಂದ ಕದಲುವುದಿಲ್ಲವೆಂದು ತನ್ನ ಮಗುವಿನೊಂದಿಗೆ ಮಹಿಳೆ ಧರಣಿ ಕುಳಿತಿದ್ದಾರೆ. ಆಕೆಯ ಆಕ್ರೋಶಕ್ಕೆ ಮಣಿದ ಪೊಲೀಸರು ಆರೋಪಿ ಯುವಕರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಆರೋಪಿ ನವೀನ್, ಶ್ರೇಯಾಂಶ್ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X