ಬಾಗಲಕೋಟೆ | ಭಾರೀ ಮಳೆಗೆ ನೇಕಾರರ ಬದುಕು ಅಂತಂತ್ರ

Date:

Advertisements

ಗುರುವಾರ ರಾತ್ರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು, ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಹಲವು ಮನೆಗಳ ಛಾವಣಿ ಶೀಟ್‌ಗಳು ಹಾರಿದ್ದು, ಕೆಲವು ಮನೆಗಳ ಮೇಲೆ ಮರಗಳು ಬಿದ್ದಿವೆ. ನೇಕಾರಿಕೆ ವಸ್ತುಗಳ ಹಾನಿಯಿಂದ ಜನರ ಬದುಕು ಬೀದಿಗೆ ಬಂದಿದೆ.

ಬಿರುಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನತೆ ನಿಟ್ಟುಸಿರು ಬಿಡುವಂತಾಗಿದ್ದರೆ, ಇನ್ನೊಂದೆಡೆ ಮಹಾಲಿಂಪುರದಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಗೆ ಮಹಿಳೆ ಸೇರಿದಂತೆ ನಾಲ್ಕೈದು ಮಂದಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಮರ ಬಿದ್ದು ಟ್ರಾಫಿಕ್ ಜಾಮ್: ವಿಪರೀತ ಗಾಳಿಗೆ ರಬಕವಿ ರಸ್ತೆಯ ಗಿರಿಮಲ್ಲೇಶ್ವರ ಆಶ್ರಮದ ಹತ್ತಿರ ಮತ್ತು ಪೊಲೀಸ್ ಠಾಣೆಯ ಬಳಿ ಬೃಹತ್ ಮರಗಳು ಬಿದ್ದ ಪರಿಣಾಮ ಕೆಲವು ಗಂಟೆಗಳವರೆಗೆ ಸಂಚಾರ ದಟ್ಟಣೆ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

Advertisements
ಧರೆಗುರುಳಿದ ಮರ
ಭಾರೀ ಮಳೆಗೆ ಧರೆಗುರುಳಿದ ಮರ

ಮಹಾಲಿಂಗಪೂರ ಪಟ್ಟಣದ ಕೆಂಗೇರಿ ಮಡ್ಡಿ ಓಣಿಯಲ್ಲಿ ಮಳೆಯಿಂದ ಅಪಾರ ಹಾನಿಯಾಗಿದ್ದು, ಅದೃಷ್ಟವಶಾತ್ ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನೇಕಾರಿಕೆ ವಸ್ತುಗಳ ಹಾನಿ

ಪಾವರ್ ಲೂಮ್ ಮಗ್ಗಗಳು, ಸೀರೆ, ಕಚ್ಚಾ ವಸ್ತುಗಳು ಸೇರಿ ನೇಕಾರಿಕೆ ವಸ್ತುಗಳು ಹಾನಿಗೊಂಡಿವೆ. ಪರಿಣಾಮವಾಗಿ ಕೆಂಗೇರಿ ಮಡ್ಡಿ ಓಣಿಯ ಜನರ ಬದುಕು ಚಿಂತಾಜನಕವಾಗಿದೆ.

ಮಳೆಯ ಜೊತೆಗೆ ಬೀಸಿದ ಬಿರುಗಾಳಿಯಿಂದಾಗಿ ಪಟ್ಟಣದ ಬಸವನಗರ, ಬುದ್ನಿಪಿಡಿ, ಕೆಂಗೇರಿಮಡ್ಡಿ ಸೇರಿದಂತೆ ಹಲವು ಭಾಗಗಳಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಬಿದ್ದು ವಿದ್ಯುತ್ ವ್ಯತ್ಯಯ ಉಂಟಾಗಿ ಸಾರ್ವಜನಿಕರಿಗೆ ತೊಂದರೆ ಉಂಟಾಗಿತ್ತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗುಡುಗು ಸಹಿತ ಭಾರೀ ಮಳೆ; ಅಪಾರ ಬೆಳೆ ಹಾನಿ

ವಿಪರೀತ ಗಾಳಿಯಿಂದಾಗಿ ಸುತ್ತಮುತ್ತಲಿನ ಗ್ರಾಮಗಳ ತೋಟಗಳಲ್ಲಿನ ತಗಡು ಶೀಟುಗಳು ಹಾರಿ ಹೋಗಿದ್ದು ರೈತರು ಪರದಾಡುವಂತಾಯಿತು. ಮಳೆಯಿಂದ ಹಾನಿಗೆ ಒಳಗಾದ ಜನತೆಗೆ ಸರ್ಕಾರ ಕೂಡಲೇ ಪರಿಹಾರ ನೀಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ತಹಶೀಲ್ದಾರ್‌ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X