ವಿಧಾನ ಪರಿಷತ್ ಸದಸ್ಯರಾದ ಕೆ. ಗೋವಿಂದರಾಜ್ ಮತ್ತು ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದ ವಿಧಾನ ಪರಿಷತ್ ಸದಸ್ಯರಿಗೆ ಈ ಮೂಲಕ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳ ಸ್ಥಾನಮಾನ ನೀಡಲಾಗಿದೆ. ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ ಅವರು ನೇಮಕವಾಗಿದ್ದಾರೆ.
ಮುಂದಿನ ಆದೇಶದವರೆಗೆ ಇವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ, ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಈ ಕೂಡಲೆ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.