ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಧಾರವಾಡ ಬಂದ್ ಹಿನ್ನೆಲೆ ಮಕ್ಕಳ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಜ. 9 ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಜ.9 ರ ರಜಾ ಅವಧಿಯನ್ನು 2 ಶನಿವಾರಗಳು ಪೂರ್ಣಾವಧಿ ಶಾಲೆ ನಡೆಸಿ ಸರಪಡಿಸಲು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.