ರಾಯಚೂರು | ಕಸ ವಿಲೇವಾರಿ ಕ್ರಮ ಕೈಗೊಳ್ಳದ ಪಿಡಿಒ; ಪಂಚಾಯತಿ ಎದರು ಕಸದ ರಾಶಿ

Date:

Advertisements

ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ತೋರಣದಿನ್ನಿ ಗ್ರಾಮದಲ್ಲಿ ನಾಲ್ಕೈದು ದಿನಗಳಿಂದ ರಸ್ತೆ ಮತ್ತು ಸಂತೆಯ ಕಸವನ್ನು ವಿಲೇವಾರಿ ಮಾಡದೆ ಹಾಗೆ ಬಿಟ್ಟಿದ್ದು,ರಸ್ತೆಯುದ್ದಕ್ಕೂ ಗಬ್ಬು ವಾಸನೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರೆಲ್ಲರೂ ಕಸವನ್ನು ತಂದು ಗ್ರಾಮ ಪಂಚಾಯತಿ ಎದುರು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಗ್ರಾಮಗಳಲ್ಲಿ ಸ್ವಚ್ಛತೆ ಇಲ್ಲದಿರುವ ಕಾರಣ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ. ಈ ಹಿನ್ನೆಲೆಯಲ್ಲಿ ಈಗಾಗಲೇ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿಲ್ಲೆಯ ಎಲ್ಲ ಪಂಚಾಯಿತಿಗಳ ಅಭಿವೃದ್ಧಿಗಾಗಿ ಗ್ರಾಮಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದ್ದಾರೆ. ಆದರೂ, ಪಿಡಿಒ ಸರಿಯಾಗಿ ಕೆಲಸ ಮಾಡುತ್ತಿಲ್ಲ” ಎಂದು ಗ್ರಾಮದ ಮುಖಂಡ ಗಂಗಪ್ಪ ತೋರಣದಿನ್ನಿ ಆರೋಪಿಸಿದ್ದಾರೆ.

“ಪಿಡಿಒ ಬೇಜಬ್ದಾರಿತನದಿಂದ ವರ್ತಿಸುತ್ತಿದ್ದು, ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ. ಕಸವನ್ನು ವಿಲೇವಾರಿ ಮಾಡದೆ ಕಣ್ಮುಚ್ಚಿ ಕುಳಿತಿದ್ದಾರೆ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯ ಮಾತನ್ನು ನಿರ್ಲಕ್ಷಿಸಿದ್ದಾರೆ” ಎಂದು ಆರೋಪಿಸಿದರು.

Advertisements

“ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೂರ್ಯಪ್ರಕಾಶ್ ಗಮನಕ್ಕೆ ತಂದರೆ, ʼಕಸ ವಿಲೇವಾರಿ ಮಾಡಿದ ಹಣವನ್ನು ಇನ್ನೂ ನೀಡಿಲ್ಲ. ಅದಕ್ಕಾಗಿ ಕಸವನ್ನು ವಿಲೇವಾರಿ ಮಾಡಲು ಆಗುವುದಿಲ್ಲ. ಎಲ್ಲ ಕಸವನ್ನು ಸಾರ್ವಜನಿಕರು ತಂದು ಹಾಕಲು ನಾನೇ ಹೇಳಿದ್ದೇನೆʼ ಎನ್ನುತ್ತಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಆಮೆವೇಗದಲ್ಲಿ ಸಾಗುತ್ತಿರುವ ಕಾಮಗಾರಿ; ಹೇಮಾವತಿ ಹರಿವಿಗೆ ವಿಳಂಬ

“ಅಧಿಕಾರಿಗಳು ಅಧ್ಯಕ್ಷರು ಮತ್ತು ಸದಸ್ಯರ ನಡುವಿನ ಸಮನ್ವಯತೆಯ ಕೊರತೆಯಿಂದ ಹಾಗೂ ದುಡಿದವರಿಗೆ ಸರಿಯಾದ ಸಮಯಕ್ಕೆ ವೇತನ ನೀಡದಿರುವುದರಿಂದ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಮಯಕ್ಕೆ ಸರಿಯಾಗಿ ಗ್ರಾಮ ಪಂಚಾಯಿತಿಗೆ ಹಾಜರಾಗದಿರುವ ಕಾರಣಕ್ಕಾಗಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸದೇ ಇರುವುದರಿಂದ ಇಂತಹ ತೊಂದರೆಗಳನ್ನು ಸಾರ್ವಜನಿಕರು ಅನುಭವಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಸರಿಪಡಿಸಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಹೋರಾಟಕ್ಕೆ ಮುಂದಾಗುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X