ರಾಜೀವ್‌ ಗಾಂಧಿ ವೈದ್ಯಕೀಯ ವಿವಿ ಹಣವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಒದಗಿಸಲು ಸಿಎಂ ಸೂಚನೆ

Date:

Advertisements

ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಮುಖ್ಯಮಂತ್ರಿಗಳು, “ಪ್ರಸ್ತುತ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗೆ 400 ಕೋಟಿ ರೂ. ಹಾಗೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 130 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈ ಕಾಮಗಾರಿಗಳನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು” ಎಂದು ಸೂಚಿಸಿದರು.

“2024-25ನೇ ಸಾಲಿನಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ 4,331 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಇದುವರೆಗೆ 3,099 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ 3,005 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಬಿಡುಗಡೆ ಮೊತ್ತಕ್ಕೆ ಶೇ. 96.97 ಪ್ರಗತಿ ಸಾಧಿಸಲಾಗಿದೆ” ಎಂದು ಸಚಿವರು ವಿವರಿಸಿದರು.

Advertisements
WhatsApp Image 2025 01 09 at 1.27.58 PM

ಸಭೆಯ ಮುಖ್ಯಾಂಶಗಳು

•2023-24 ಸಾಲಿನಲ್ಲಿ ಅನುಮೋದನೆಗೊಂಡ ಎಲ್ಲ ಕಾಮಗಾರಿಗಳನ್ನು ನಿಗದಿತ ಸಮಯದ ಒಳಗಾಗಿ ಪೂರ್ಣಗೊಳಿಸಬೇಕು.

• ಗದಗ, ಕೊಪ್ಪಳ, ಕಾರವಾರ,ಕೊಡಗು ಜಿಲ್ಲೆಗಳಲ್ಲಿ ನಿರ್ಮಾಣ ಹಂತದಲ್ಲಿರುವ 450 ಹಾಸಿಗೆ ಆಸ್ಪತ್ರೆಗಳ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ.

• ರಾಜೀವ್‌ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸುವ ಕುರಿತು ಕ್ರಮ ಕೈಗೊಳ್ಳಬೇಕು.

• ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು.

• ಕ್ಯಾನ್ಸರ್‌ ಪ್ರಮಾಣ ಹೆಚ್ಚಳವಾಗಲು ಕಾರಣ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಬೇಕು. ಕ್ಯಾನ್ಸರ್‌ ಚಿಕಿತ್ಸೆಗೆ ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ರಾಜ್ಯದಲ್ಲಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X