- ಹೈಕೋರ್ಟ್‌ನ ಏಕಸದಸ್ಯ ಪೀಠ ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿತು
- ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿ ಆದೇಶ
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ರಿಲೀಫ್ ಸಿಕ್ಕಿದ್ದು, ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದೆ.
ಕರ್ನಾಟಕ ಹೈಕೋರ್ಟ್ ಈ ಹಿಂದೆ ಪ್ರಕರಣದಲ್ಲಿ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆಯನ್ನು ತೆರವು ಮಾಡಬೇಕೆಂದು ಸಿಬಿಐ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಇಂದು (ಜೂನ್ 2, ಶುಕ್ರವಾರ) ಹೈಕೋರ್ಟ್‌ನ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ವಿಸ್ತರಣೆ ಮಾಡಿ ಆದೇಶ ನೀಡಿದೆ.
ಈಗಾಗಲೇ ಪ್ರಕರಣದ ವಿಚಾರಣೆ ಮತ್ತೊಂದು ಪೀಠ ನಡೆಸಿದ್ದ ಹಿನ್ನೆಲೆ ಯಾವ ಪೀಠದಲ್ಲಿ ವಿಚಾರಣೆ ನಡೆಯಬೇಕೆಂಬ ಬಗ್ಗೆ ಸಿಜೆ ಆದೇಶ ಅಗತ್ಯ. ಹೀಗಾಗಿ ಅರ್ಜಿ ಮುಖ್ಯ ನ್ಯಾಯಮೂರ್ತಿಗಳ ಅವಗಾಹನೆಗೆ ವರ್ಗಾವಣೆ ಮಾಡಲಾಗಿದೆ. ಸಿಜೆ ಸೂಚನೆ ನಂತರ ಹೈಕೋರ್ಟ್ ಮತ್ತೆ ವಿಚಾರಣೆ ನಡೆಸಲಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಸ್ತಿಪಟುಗಳ ಕಣ್ಣೀರು ಮತ್ತು ಪ್ರಚಂಡ ಪ್ರಧಾನಿಯ ಮೌನ
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆ ತನಿಖೆ ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮೇ 30ಕ್ಕೆ ವಿಸ್ತರಣೆ ಮಾಡಲಾಗಿತ್ತು. ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತ್ತು. ಈಗ ನ್ಯಾ.ಎಂ.ನಾಗಪ್ರಸನ್ನ ಅವರ ಪೀಠದಲ್ಲಿ ವಿಚಾರಣೆ ನಡೆದಿದೆ.
ಇನ್ನು ಸಿಬಿಐ ಪರವಾಗಿ ವಾದ ಮಾಡಿಸಿದ್ದ ವಕೀಲ ಪಿ.ಪ್ರಸನ್ನ ಕುಮಾರ್, ಸಿಬಿಐ ತನಿಖೆಗೆ ಶಿಫಾರಸು ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸಬೇಕು ಎಂದು ಹೈಕೋರ್ಟ್‌ಗೆ ಮತ್ತೊಂದು ಅರ್ಜಿ ಮೂಲಕ ಮನವಿ ಮಾಡಿದ್ದರು.