ಸ್ಪಂದಿಸದ ಸರ್ಕಾರ; 3ನೇ ದಿನವೂ ಮುಂದುವರೆದ ಆಶಾ ಹೋರಾಟ: ಓರ್ವ ಕಾರ್ಯಕರ್ತೆ ಅಸ್ವಸ್ಥ

Date:

Advertisements

ಮಾಸಿಕ ಗೌರವಧನವನ್ನ 15 ಸಾವಿರಕ್ಕೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತರೆಯರು ಕೊರೆಯುವ ಚಳಿ, ಸುರಿಯುವ ಮಂಜನ್ನು ಲೆಕ್ಕಿಸದೇ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ರಸ್ತೆಯಲ್ಲಿ ಮಲಗಿ ರಾತ್ರಿ ದೂಡುತ್ತಿದ್ದಾರೆ. ಆದರೆ, ಅವರು ಹೋರಾಟ, ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ತಮ್ಮ ಬೇಡಿಕೆಯನ್ನೂ ಈಡೇರಿಸುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದ್ದಾರೆ. ಅವರು ಹೋರಾಟ ಮೂರನೇ ದಿನವೂ ಮುಂದುವರೆದಿದೆ.

ಮಂಗಳವಾರ ಆರಂಭವಾದ ಧರಣಿಯಲ್ಲಿ 12 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಭಾಗಿಯಾಗಿದ್ದಾರೆ. ಕಳೆದ ಎರಡು ದಿನದಿಂದ ಆಶಾ ಕಾರ್ಯಕರ್ತೆಯರು ಚಳಿಯಲ್ಲಿಯೇ ಫ್ರೀಡಂ ಪಾರ್ಕ್ ಸುತ್ತ ಇರುವ ರಸ್ತೆಗಳಲ್ಲಿ ಮಲಗಿದ್ದಾರೆ. ರಸ್ತೆಯಲ್ಲಿಯೇ ಕುಳಿತಿದ್ದಾರೆ.

ಧರಣಿಯಲ್ಲಿ ಭಾಗಿಯಾಗಿರುವ ಗದಗ ಜಿಲ್ಲೆಯ ನರಗುಂದ ತಾಲೂಕಿನ ಆಶಾ ಕಾರ್ಯಕರ್ತೆಯೊಬ್ಬರಿಗೆ ಆರೋಗ್ಯ ಸಮಸ್ಯೆ ಎದುರಾಗಿದ್ದು, ರಕ್ತದೊತ್ತಡ ಕಡಿಮೆಯಾಗಿತ್ತು. ಅವರನ್ನು ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ದಾಖಲಿಸಿಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Advertisements

ರಾಜ್ಯದ ನಾನಾ ಭಾಗಗಳಿಂದ ಬಂದಿರುವ ಸಾವಿರಾರೂ ಆಶಾ ಕಾರ್ಯಕರ್ತೆಯರು ದಿನನಿತ್ಯವೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಹಾಗೇಯೇ, ತಮಗೆ ನ್ಯಾಯ ಸಿಗುವವರೆಗೂ ಫ್ರೀಡಂ ಪಾರ್ಕ್ ಜಾಗ ಬಿಟ್ಟು ಕದಲುವುದಿಲ್ಲ ಎಂದು ಪಟ್ಟನ್ನು ಹಿಡಿದಿದ್ದಾರೆ.

ಬುಧವಾರ ಪ್ರತಿಭಟನಾ ಸ್ಥಳಕ್ಕೆ ತೆರಳಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ ಅವರು ಆಶಾ ಕಾರ್ಯಕರ್ತರೆಯರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ, ಅವರ ಮನವೊಲಿಕೆ ಸಫಲವಾಗಿಲ್ಲ. ಸಚಿವರ ಹೇಳಿಕೆಗೆ ಆಶಾ ಕಾರ್ಯಕರ್ತೆಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ನಾಗಲಕ್ಷ್ಮೀ, “ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸದೇ ಹಾಲಿ ದೊರೆಯುತ್ತಿರುವ ಗೌರವಧನ ಮತ್ತು ಪ್ರೋತ್ಸಾಹಧನವನ್ನು ಸೇರಿಸಿ 9500 ರೂ. ಮುಂಗಡವಾಗಿ ನೀಡುವುದಾಗಿ ಆರೋಗ್ಯ ಸಚಿವರು ಹೇಳಿದ್ದಾರೆ. ಸರ್ಕಾರವು ಆಶಾ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಜಾರಿ ಮಾಡುವಲ್ಲಿ ವಿಫಲವಾಗಿರುವುದರಿಂದ ಹೋರಾಟ ಮುಂದುವರೆಸಲಾಗುತ್ತದೆ” ಎಂದು ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರ ಪ್ರಮುಖ ಹಕ್ಕೋತ್ತಾಯಗಳು;

  1. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಇರುವ ಗೌರವಧನ ಮತ್ತು ಪ್ರೋತ್ಸಾಹಧನ ಸೇರಿಸಿ ಒಟ್ಟು ರೂ. 15000 ಮಾಸಿಕ ಗೌರವಧನವನ್ನು ನಿಗದಿಗೊಳಿಸಬೇಕು.
  2. ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ ರೂ.2000 ಗೌರವಧನವನ್ನು ಹೆಚ್ಚಿಗೆ ಮಾಡಬೇಕು.
  3. ರಾಜ್ಯದಾದ್ಯಂತ ಬಾಕಿ ಇರುವ 2-3 ತಿಂಗಳ ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನ ಕೂಡಲೇ ಬಿಡುಗಡೆ ಮಾಡಿ.
  4. ಆಶಾ ಕಾರ್ಯಕರ್ತೆಯರು ಸ್ಮಾರ್ಟ್ ಫೋನ್ ಬಳಕೆ ಬಗ್ಗೆ ದಿ: 28-11-2024 ರಂದು ಹೊರಡಿಸಿದ ಅಧಿಕೃತ ಜ್ಞಾಪನಾ ಪತ್ರವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು. ಆಶಾಗಳದಲ್ಲದ ಕೆಲಸವನ್ನು ಅಧಿಕೃತವಾಗಿ ಮಾಡಲು ಹೇಳಿರುವ ಆದೇಶ ವಾಪಾಸಾಗಲೇಬೇಕು.
  5. ಮೊಬೈಲ್ ಕೆಲಸಗಳನ್ನು ಒತ್ತಾಯ ಪೂರ್ವಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಿ. ಅಥವಾ ಮೊಬೈಲ್ ಡಾಟಾ ಒದಗಿಸಿ. ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹಧನ ನಿಗದಿ ಮಾಡಿ. ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೊ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿ.
  6. 60 ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ ರೂ.5 ಲಕ್ಷಕ್ಕೆ ಹೆಚ್ಚಿಸುವುದು.
  7. ತೀವ್ರವಾದ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ 3 ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರುಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು. ಆಶಾ ಸೇವೆಯಲ್ಲಿ ಇದ್ದಾಗ ಆಗುವ ಅನಾಹುತಗಳಿಗೆ ಸಂಪೂರ್ಣ ಜವಾಬ್ದಾರಿಯನ್ನು ಇಲಾಖೆ ವಹಿಸಿಕೊಳ್ಳಬೇಕು.
  8. ಪ್ರತಿ ವರ್ಷ ಪ್ರತಿ ಆಶಾ ಕಾರ್ಯಕರ್ತೆಗೆ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಬೇಕು. ತೀವ್ರ ಕಾಯಿಲೆಗಳಿದ್ದಲ್ಲಿ ಕೂಡಲೇ ಉಚಿತ ಚಿಕಿತ್ಸೆ ಮಾಡಬೇಕು.
  9. ಈ ಬಾರಿಯ ಆರ್ ಒ ಪಿ 2024-26ನಲ್ಲಿ ಅನುಮೋದನೆಯಾದಂತೆ ಇದೇ ಎಪ್ರಿಲ್ 2024ರಿಂದ ಆಶಾ ಸುಗಮಕಾರರಿಗೆ ರೂ.7500 ರಂತೆ ಗೌರವಧನ ನೀಡಿ ಹಲವಾರು ಜಿಲ್ಲೆಗಳಲ್ಲಿ 3-4 ತಿಂಗಳಿಂದ ಬಾಕಿ ಉಳಿದಿರುವ ಸುಗಮಕಾರರ ಗೌರವಧನ ಕೂಡಲೇ ನೀಡಬೇಕು.
  10. ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಅಲ್ಲಿಯವರೆಗೂ ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ ವೇತನ, ಗ್ರಾಜ್ಯುಟಿ, ಪಿಎಫ್-ಇಎಸ್ಐ ಸೌಲಭ್ಯ ನೀಡಬೇಕು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X