ತನ್ನ ಮೇಲೆ ತನ್ನ ಪತಿಯ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಆ ಕೃತ್ಯವನ್ನು ತನ್ನ ಪತಿ ಸೌದಿಯಿಂದ ಆನ್‌ಲೈನ್‌ನಲ್ಲಿ ನೋಡುತ್ತಿದ್ದನು ಎಂದು ಉತ್ತರ ಪ್ರದೇಶದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ಬುಲಂದ್‌ಶಹರ್‌ನ ಮಹಿಳೆಯು ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ತನ್ನ ಪತಿಯೇ ಪ್ರಮುಖ ಆರೋಪಿಯೆಂದು ಉಲ್ಲೇಖಿಸಿದ್ದಾರೆ. ತನ್ನ ಪತಿ ಸೌದಿ ಅರೆಬಿಯಾದಲ್ಲಿದ್ದು, ತನ್ನ ಮೇಲೆ ಅತ್ಯಾಚಾರ ಎಸಗಲು ಆತನ ಸ್ನೇಹಿತರಿಗೆ ಆತನೇ ಅವಕಾಶ ಮಾಡಿಕೊಟ್ಟಿದ್ದಾನೆ ಎಂದು ಆರೋಪಿಸಿದ್ದಾರೆ.
“ನನ್ನ ಮೇಲೆ ಪತಿಯ ಸ್ನೇಹಿತರು ಮೂರು ವರ್ಷಗಳಿಂದ ನಿರಂತರ ಅತ್ಯಾಚಾರ ಎಸಗಿದ್ದಾರೆ. ನನ್ನ ಪತಿ ಹಣಕ್ಕಾಗಿ ನನ್ನ ಮೇಲೆ ಅತ್ಯಾಚಾರ ಎಸಗಲು ತನ್ನ ಸ್ನೇಹಿತರಿಗೆ ಅವಕಾಶ ನೀಡುತ್ತಿದ್ಧಾನೆ. ಅಲ್ಲದೆ, ನನ್ನ ಮೇಲಾಗುವ ಅತ್ಯಾಚಾರ ಕೃತ್ಯವನ್ನು ಸೌದಿ ಅರೇಬಿಯಾದಿಂದ ಆನ್‌ಲೈನ್‌ನಲ್ಲಿ ವೀಕ್ಷಿಸಿದ್ದಾನೆ” ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.
ಈ ವರದಿ ಓದಿದ್ದೀರಾ?: ಮಣಿಪುರ ಹೊತ್ತಿ ಉರಿದಿದ್ದಕ್ಕೆ ಪ್ರಧಾನಿ ಮೋದಿ ಏಕೆ ಕ್ಷಮೆ ಕೇಳಬೇಕು?
ಸಂತ್ರಸ್ತೆಯು 2010ರಲ್ಲಿ ಬುಲಂದ್‌ಶಹರ್‌ನ ಗುಲಾತಿ ಮೂಲದ ವ್ಯಕ್ತಿಯನ್ನು ವಿವಾಹವಾಗಿದ್ದರು. ಆರಂಭದಲ್ಲಿ ದಾಂಪತ್ಯ ಜೀವನ ಚೆನ್ನಾಗಿತ್ತು. ದಂಪತಿಗಳು ನಾಲ್ಕು ಮಕ್ಕಳನ್ನು ಮಾಡಿಕೊಂಡಿದ್ದರು. ಮಹಿಳೆಯ ಪತಿ ಸೌದಿ ಅರೇಬಿಯಾದಲ್ಲಿ ಆಟೋಮೊಬೈಲ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.
ಆದರೆ, ಎರಡು ವರ್ಷಗಳ ಹಿಂದೆ ತನ್ನ ಪತಿ ಇಬ್ಬರು ಸ್ನೇಹಿತರೊಂದಿಗೆ ಮನೆಗೆ ಬಂದಿದ್ದನು. ಅವರಿಗೆ ತನ್ನ ಮೇಲೆ ಅತ್ಯಾಚಾರ ಎಸಗಲು ಆಕೆಯ ಪತಿಯೇ ಅವಕಾಶ ನೀಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ತನ್ನ ಪತಿಯ ಆ ಇಬ್ಬರೂ ಪುರುಷರು ತಾನು ವಾಸವಾಗಿರುವ ಪ್ರದೇಶದಲ್ಲಿಯೇ ನೆಲೆಸಿದ್ದು, ಆಗ್ಗಾಗ್ಗೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಕೃತ್ಯದಲ್ಲಿ ತನ್ನ ಪತಿಯ ಕುಮ್ಮಕ್ಕು ಇದೆ ಎಂದು ಸಂತ್ರಸ್ತೆ ವಿವರಿಸಿದ್ದಾರೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.