ರಾಯಚೂರು | ಸಿಯಾತಲಾಬ್ ಬಡಾವಣೆಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ

Date:

Advertisements

ರಾಯಚೂರು ನಗರದ ಸಿಯಾತಲಾಬ್ ಬಡಾವಣೆಯ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್ಎಸ್)ಯಿಂದ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ಆಚರಿಸಿದರು.

ಸಾಂಸ್ಕೃತಿಕ ಸಂಘಟನೆಯ ರಾಯಚೂರು ಜಿಲ್ಲಾ ಸಂಚಾಲಕಿ ಸರೋಜ ಗೋನವಾರ್ ಮಾತನಾಡಿ, “ರಾಜ್ಯ ಸಮಿತಿಯಿಂದ ಜನವರಿ 3ರಿಂದ 18ರವರೆಗೆ ಸಾವಿತ್ರಿಬಾಯಿ ಫುಲೆಯವರ ಜನ್ಮ ದಿನಾಚರಣೆಯನ್ನು ಮಹಿಳಾ ಶಿಕ್ಷಣ, ಉದ್ಯೋಗ, ಆರೋಗ್ಯ, ಭದ್ರತೆ ಖಾತ್ರಿಗಾಗಿ ಒತ್ತಾಯಿಸಲಾಗುತ್ತಿದೆ. ಭಾರತದಲ್ಲಿ ಮಹಿಳಾ ಶಿಕ್ಷಣದ ರೂವಾರಿ ಹಾಗೂ ಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆಯವರನ್ನು ಪ್ರತಿಯೊಬ್ಬ ಹೆಣ್ಣು ಮಗಳೂ ನೆನಪಿಸಿಕೊಳ್ಳಲೇಬೇಕು” ಎಂದು ಹೇಳಿದರು.

“ಸಾವಿತ್ರಿಬಾಯಿ ಫುಲೆಯವರು ಚಿಕ್ಕ ವಯಸ್ಸಿನಲ್ಲೇ ತನ್ನ ಪತಿ ಜ್ಯೋತಿಬಾ ಫುಲೆಯವರಿಂದ ಶಿಕ್ಷಣವನ್ನು ಕಲಿತು, ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ, ಅವರ ಏಳಿಗೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟರು. ಶಿಕ್ಷಣದ ಅರಿವೇ ಇರದ ಕಾಲದಲ್ಲಿ ಮನುವಾದವನ್ನು ಮೆಟ್ಟಿನಿಂತು ಹೆಣ್ಣುಮಕ್ಕಳಿಗೆ ಶಿಕ್ಷಣ ಕೊಡಿಸಲು ಕೇವಲ ನಾಲ್ಕು ವರ್ಷಗಳಲ್ಲಿ 18 ಶಾಲೆಗಳನ್ನು ತೆರೆದರು. ಸಮಾನತೆಯನ್ನು ಪಡೆಯಬೇಕಾದರೆ ಶಿಕ್ಷಣ ಬಹಳ ಮುಖ್ಯವೆಂಬುದು ಅರಿವಾದ ಕೂಡಲೇ ಸಾವಿತ್ರಿಬಾಯಿ ಫುಲೆಯವರು ಅದನ್ನು ತಮ್ಮ ಜೀವನದ ಗುರಿಯಾಗಿ ಒಪ್ಪಿಕೊಂಡರು‌” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅವೈಜ್ಞಾನಿಕ ಸೇತುವೆ ನಿರ್ಮಾಣದ ವಿರುದ್ಧ ರಸ್ತೆ ತಡೆ ಪ್ರತಿಭಟನೆ; 40ಕ್ಕೂ ಅಧಿಕ ಮಂದಿ ಬಂಧನ

“ಇಂದು ಶಿಕ್ಷಣ ವ್ಯಾಪಾರೀಕರಣವಾಗಿದೆ. ಬಡವರ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯಲು ಅಸಾಧ್ಯವಾಗಿದೆ. ಇಂತಹ ದಿನಗಳಲ್ಲಿ ಸಾವಿತ್ರಿಬಾಯಿ ಫುಲೆಯವರ ಶ್ರಮ, ಧೈರ್ಯ, ಸಾಹಸಗಳನ್ನು ಮೆಚ್ಚಲೇಬೇಕಾಗಿದೆ. ಇಂತಹ ಅವರ ಆದರ್ಶ ಗುಣಗಳನ್ನು ನಾವು ಮೈಗೂಡಿಸಿಕೊಳ್ಳಬೇಕಾಗಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಸದಸ್ಯರಾದ ಕವಿತಾ, ನಾಗವೇಣಿ, ಅನ್ನಪೂರ್ಣ, ರಂಗಮ್ಮ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X