ಭಾನುವಾರವೂ ಸೇರಿ ವಾರಕ್ಕೆ 90 ಗಂಟೆ ಕೆಲಸ ಮಾಡಿ: ಎಲ್ ಆ್ಯಂಡ್ ಟಿ ಮುಖ್ಯಸ್ಥ

Date:

Advertisements

ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ ಹೇಳಿದ ವಾರಕ್ಕೆ 70 ಗಂಟೆಗಳ ಕೆಲಸ ಅವಧಿಯ ಚರ್ಚೆಯ ಕಾವು ಆರುವ ಮುನ್ನವೇ, ವಾರಕ್ಕೆ 90 ಗಂಟೆಗಳ ಕೆಲಸ ಮಾಡಬೇಕು ಎಂದು ಹೇಳುವ ಮೂಲಕ ಲಾರ್ಸೆನ್ ಆ್ಯಂಡ್ ಟೂಬ್ರೊ ಮುಖ್ಯಸ್ಥ ಎಸ್ ಎನ್ ಸುಬ್ರಮಣ್ಯ ಮತ್ತೊಂದು ಸುತ್ತಿನ ಚರ್ಚೆಗೆ ನಾಂದಿ ಹಾಡಿದ್ದಾರೆ.

ಭಾನುವಾರ ಸಹ ಕೆಲಸ ಮಾಡಬೇಕು ಎಂದು ತಮ್ಮ ಉದ್ಯೋಗಿಗಳಿಗೆ ಸಲಹೆ ನೀಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಆ ವಿಡಿಯೋದಲ್ಲಿ, “ಎಷ್ಟು ಕಾಲ ನೀವು ನಿಮ್ಮ ಪತ್ನಿಯ ಮುಖವನ್ನೇ ದಿಟ್ಟಿಸುತ್ತಾ ಕೂರುತ್ತೀರಿ?” ಎಂದು ಸುಬ್ರಮಣ್ಯ ತಮ್ಮ ಉದ್ಯೋಗಿಗಳನ್ನು ಪ್ರಶ್ನಿಸುತ್ತಿರುವುದು ಸೆರೆಯಾಗಿದೆ. ನೀವು ಮನೆಯಲ್ಲಿ ಕಡಿಮೆ ಸಮಯ ಕಳೆದು, ಕಚೇರಿಯಲ್ಲಿ ಹೆಚ್ಚು ಸಮಯ ವ್ಯಯಿಸಿ ಎಂದು ಅವರು ಕರೆ ನೀಡುತ್ತಿರುವುದೂ ಆ ವಿಡಿಯೋದಲ್ಲಿ ಸೆರೆಯಾಗಿದೆ.

ಇದಕ್ಕೂ ಮುನ್ನ, ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಸಲಹೆ ನೀಡಿ, ಉದ್ಯೋಗ ಮತ್ತು ಜೀವನ ಸಮತೋಲನದ ಕುರಿತ ಚರ್ಚೆಗೆ ನಾಂದಿ ಹಾಡಿದ್ದರು.

Advertisements

ಇದನ್ನು ಓದಿದ್ದೀರಾ? ರಾಷ್ಟ್ರಗೀತೆ ನುಡಿಸಲಿಲ್ಲ ಎಂದು ಭಾಷಣ ಮಾಡದೆ ವಿಧಾನಸಭೆಯಿಂದ ಹೊರ ನಡೆದ ತಮಿಳುನಾಡು ರಾಜ್ಯಪಾಲ

ಇದರ ಬೆನ್ನಿಗೇ ಲಾರ್ಸೆನ್ ಆ್ಯಂಡ್ ಟೂಬ್ರೊ ಮುಖ್ಯಸ್ಥ ಸುಬ್ರಮಣ್ಯ ಅವರು, “ನಾನು ನಿಮಗೆ ಭಾನುವಾರ ಕೆಲಸ ಮಾಡಿಸಲಾಗದ್ದಕ್ಕೆ ವಿಷಾದಿಸುತ್ತೇನೆ. ನೀವು ನಿಮ್ಮ ಕೆಲಸಗಳನ್ನು ಭಾನುವಾರ ಮಾಡುವುದು ಸಾಧ್ಯವಾದರೆ, ನಾನು ಬಹಳ ಸಂತೋಷ ಪಡುತ್ತೇನೆ. ಯಾಕೆಂದರೆ, ನಾನು ಭಾನುವಾರ ಸಹ ಕೆಲಸ ಮಾಡುತ್ತೇನೆ” ಎಂದು ಅವರು ಹೇಳುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಈ ಹೇಳಿಕೆ ನಂತರ ಲಾರ್ಸೆನ್ ಆ್ಯಂಡ್ ಟೂಬ್ರೊ ಸಮಜಾಯಿಷಿ ನೀಡಿದೆ. “ದೇಶಕ್ಕಾಗಿ ಅಸಾಧಾರಣ ಸಾಧನೆ ಮಾಡಲು ಅಸಾಧಾರಣ ಪ್ರಯತ್ನಗಳ ಅಗತ್ಯವಿದೆ ಎಂಬ ಹಿನ್ನೆಲೆಯಲ್ಲಿ ಅವರು ಇಂತಹ ಹೇಳಿಕೆ ನೀಡಿದ್ದಾರೆ” ಎಂದು ತಿಳಿಸಿದೆ.

“ಈ ದಶಕ ಭಾರತದ ದಶಕ ಎಂದು ನಾವು ನಂಬಿದ್ದೇವೆ. ಈ ಸಮಯ ಒಗ್ಗಟ್ಟಾದ ಸಮರ್ಪಣಾ ಮನೋಭಾವವನ್ನು ಬಯಸುತ್ತಿದ್ದು, ಪ್ರಗತಿಯತ್ತ ಪ್ರಯತ್ನವನ್ನು ಬೇಡುತ್ತಿದೆನಮ್ಮ ದೇಶದ ಪ್ರಗತಿಶೀಲ ದೇಶವಾಗಲು ನಮ್ಮಲ್ಲಿ ದೃಷ್ಟಿಕೋನಗಳ ವಿನಿಮಯ ಅಗತ್ಯ ಎಂಬುದನ್ನು ಮನವರಿಕೆ ಮಾಡಿಸುತ್ತಿದೆ” ಎಂದು ಲಾರ್ಸೆನ್ ಆ್ಯಂಡ್ ಟೂಬ್ರೊ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಹೇಳಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X