ಈ ಬಾರಿಯ ಲಾಲ್​ಬಾಗ್​ ಫಲಪುಷ್ಪ ಪ್ರದರ್ಶನದಲ್ಲಿ ವಾಲ್ಮೀಕಿ ಪ್ರತಿಕೃತಿ

Date:

Advertisements

ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ಅಂಗವಾಗಿ ಪ್ರತಿ ವರ್ಷ ಒಂದೊಂದು ರೀತಿಯ ವಿಷಯವಸ್ತುವಿನ ಆಧಾರದಲ್ಲಿ ತೋಟಗಾರಿಕೆ ಇಲಾಖೆ ಬೆಂಗಳೂರಿನ ಸಸ್ಯಕಾಶಿ ಲಾಲ್​​ಬಾಗ್​​ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸುತ್ತದೆ. ಅದರಂತೆ, ಗಣರಾಜ್ಯೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಪ್ರತಿವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಿದ್ದತೆ ನಡೆಸಿದೆ.

ತೋಟಗಾರಿಕೆ ಇಲಾಖೆ ಫಲಪುಷ್ಪ ಪ್ರದರ್ಶನವನ್ನು ಜನವರಿ 16 ರಿಂದ 26ರವರೆಗೆ 11 ದಿನಗಳ ಕಾಲ ಆಯೋಜಿಸುತ್ತಿದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದಲ್ಲಿ ಮಹರ್ಷಿ ವಾಲ್ಮೀಕಿ ಜೀವನ ಆಧಾರಿತ ವಿಷಯ ಹಾಗೂ ರಾಮಾಯಣ ಮಹಾಕಾವ್ಯವನ್ನು ಆಕರ್ಷಕವಾಗಿ ಪುಷ್ಪಗಳಲ್ಲಿ ಅರಳಿಸಲು ತೀರ್ಮಾನಿಸಲಾಗಿದೆ.

ಫಲಪುಷ್ಪ ನೋಡಲು ಬರುವ ಪ್ರವಾಸಿಗರು ಮತ್ತು ಬೆಂಗಳೂರಿನ ಜನತೆ ಮಹರ್ಷಿ ವಾಲ್ಮೀಕಿ ವಿಷಯಾಧರಿತ ಹೂವಿನ ಪ್ರತಿಕೃತಿ ಹಾಗೂ ರಾಮಾಯಣದ ಪ್ರಮುಖ ಘಟನೆಗಳನ್ನು ಕಣ್ತುಂಬಿಕೊಳ್ಳಲಿದ್ದಾರೆ. ಹೂ ಅಲಂಕಾರಕ್ಕಾಗಿ ದೇಶ ವಿದೇಶಗಳಿಂದ ಹೂವುಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ

ಫಲಪುಷ್ಪ ಪ್ರದರ್ಶನಕ್ಕೆ 70 ತರಹದ 25 ಲಕ್ಷ ಹೂವುಗಳನ್ನು ಬಳಕೆ ಮಾಡಲಾಗುತ್ತಿದೆ. ಚಳಿಗಾಲದಲ್ಲಿ ಬೆಳೆಯುವಂತಹ ಪೂಷಿಯಾ, ಅಗಪಾಂಥಸ್​, ಸೈಕ್ಲೋಮನ್​, ಕ್ಯಾಲಾಲಿಲ್ಲ, ಟ್ಯೊಬಿರಸ್​ ರೂಟೆಡ್, ಸೇರಿದಂತೆ ಇನ್ನೂ ಸಾಕಷ್ಟು ಹೂವುಗಳನ್ನು ಪ್ರದರ್ಶನಕ್ಕೆ ಬಳಸಲಾಗುತ್ತಿದೆ.

25 ಲಕ್ಷ ಹೂವುಗಳಲ್ಲಿ, ಹೂವು ಕುಂಡದಲ್ಲಿ ಬೆಳೆಯುವ ಹಾಗೂ ಲಾಲ್​ಬಾಗ್​ನಲ್ಲಿ ಬೆಳೆಯುವ ಹೂವುಗಳು, ಲಾಲ್​ಬಾಗ್​ನಲ್ಲಿ ಬೆಳೆಯುವ 15 ಲಕ್ಷ ಹಾಗೂ ಗುಲಾಬಿ, ಸೇವಂತಿಗೆ ಸೇರಿದಂತೆ 10 ವಿವಿಧ ಜಾತಿಯ ಹೂವುಗಳನ್ನು ಬಳಸಲಾಗುತ್ತಿದೆ.
ಲಾಲ್​ಬಾಗ್​ ಫಲಪುಷ್ಪ ಪ್ರದರ್ಶನ ಕಣ್ತುಂಬಿಕೊಳ್ಳಲು ಬೆಂಗಳೂರು ಮಾತ್ರವಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಜನರು ಆಗಮಿಸುತ್ತಾರೆ. ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಲಾಲ್​ಬಾಗ್​ನಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗುತ್ತಿದೆ.

ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ಪ್ರವೇಶ ಟಿಕೆಟ್​ ನಿಗದಿಪಡಿಸಲಾಗಿದೆ. ಹಿರಿಯರಿಗೆ 80 ರಿಂದ 100 ರೂ. ಇದ್ದು ಮಕ್ಕಳಿಗೆ 30 ರೂ. ನಿಗದಿಪಡಿಸಲಾಗಿದೆ. ಇನ್ನು ಶಾಲಾ ಸಮವಸ್ತ್ರ ತೊಟ್ಟು ಬರುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶವಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X