ರಿಯಲ್ ಎಸ್ಟೇಟ್ ಉದ್ಯಮಿ, ರೌಡಿಶೀಟರ್ ಪ್ರಪುಲ್ ಬಾಲಕೃಷ್ಣ ಪಾಟೀಲ (30) ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ ಘಟನೆ ಜ.10 ರಂದು ಬೆಳಗಾವಿ ಗಣೇಶಪುರದ ಹಿಂದೂ ನಗರದ ರಸ್ತೆಯಲ್ಲಿ ನಡೆದಿದೆ.
ದಾಳಿಗೊಳಗಾದ ಶಾಹೂ ನಗರ ನಿವಾಸಿ ಪ್ರಪುಲ್ ಬಾಲಕೃಷ್ಣ ಪಾಟೀಲ ಕಾರಿನಲ್ಲಿ ಬೆಳಗುಂದಿಯಿಂದ ಮನೆಗೆ ಹೊರಟಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಏಕಾಏಕಿ ಗುಂಡಿನ ದಾಳಿನಡೆಸಿದ್ದಾರೆ.
ಎರಡು ಸುತ್ತು ಗುಂಡಿನ ದಾಳಿಯಲ್ಲಿ ಕಾರಿನ ಗಾಜು ಸಿಡಿದು ತಲೆ ಮತ್ತು ಮುಖದಕ್ಕೆ ಗಾಯವಾಗಿದ್ದು, ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಈ ವರದಿ ಓದಿದ್ದೀರಾ? ಬೆಳಗಾವಿ | ನಾಡದ್ರೋಹಿ ಆರೋಪದ ಮೇಲೆ ಅಭಯ ಪಾಟೀಲ್ ವಿರುದ್ದ ಕ್ರಮಕ್ಕೆ ಒತ್ತಾಯ
ಘಟನಾ ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.