ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹಾಸನದ ಭುವನಹಳ್ಳಿ ಬೈಪಾಸ್ ಬಳಿ ವಿವಿಧ ದಲಿತ ಪರ ಸಂಘಟನೆಗಳು ರಾಷ್ಟ್ರೀಯ ಹೆದ್ದಾರಿ ತಡೆದು ಬುಧವಾರದಂದು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಸಚಿವ ಸಂಪುಟದಿಂದ ವಜಾ ಗೊಳಿಸಬೇಕು ಎಂದು ಆಗ್ರಹಿಸಿ ಕೇಂದ್ರ ಬಿಜೆಪಿ ಹಾಗೂ ಗೃಹ ಸಚಿವ ಅಮಿತ್ ಷಾ ವಿರುದ್ಧ ಘೋಷಣೆ ಕೂಗುವ ಮೂಲಕ ಅಮಿತ್ ಶಾ ರಾಜಿನಾಮೆಗೆ ಪ್ರತಿಭಟನಾಕಾರರು ಆಗ್ರಹಿಸಿದರು.

ರಸ್ತೆ ತಡೆಗೂ ಮುನ್ನ ಬಹಿರಂಗ ಸಭೆ ನಡೆಸಿ ಮಾತನಾಡಿದ ಪ್ರತಿಭಟನಕಾರರು, ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗೆ ಸಂಸತ್ ನಲ್ಲಿ ವ್ಯಂಗ್ಯವಾಗಿ ಮಾತನಾಡುವ ಜೊತೆಗೆ ಅಂಬೇಡ್ಕರ್ ಬಗ್ಗೆ ಮಾತನಾಡುವ ಬದಲು ದೇವರ ನಾಮ ಜಪ ಮಾಡಿದ್ದರೆ ಮೋಕ್ಷ ಸಿಗುತ್ತಿತ್ತು ಎಂಬ ಮಾತನ್ನು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಶಾ ಅಪಮಾನ ಮಾಡಿದ್ದಾರೆ. ಅವರ ಸಂವಿಧಾನದ ಆಧಾರದ ಮೇಲೆ ಸಚಿವರಾಗಿರುವ ಶಾ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೆಡಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿದ್ದೀರಾ?ಹಾಸನ | ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು
ಈ ವೇಳೆ ದಲಿತ ಪರ ಸಂಘಟನೆಗಳು ಹಾಗೂ ಇನ್ನಿತರರು ಉಪಸ್ಥಿತಿಯಲ್ಲಿದ್ದರು.
