ಭಾರತೀಯ ಅಂಚೆ ಇಲಾಖೆಯಿಂದ ಬೃಹತ್ ಉದ್ಯೋಗ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಖಾಲಿಯಿರುವ ಸಾವಿರಾರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 28 ಕೊನೆಯ ದಿನವಾಗಿದೆ.
ಭಾರತೀಯ ಅಂಚೆ ಕಚೇರಿಗಳಲ್ಲಿ ಬಹುಕಾರ್ಯ ಸಿಬ್ಬಂದಿ(ಎಂಟಿಎಸ್) ಹುದ್ದೆಗೆ 18,200 ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದ್ದು, ವಿವಿಧ ವಿಭಾಗಗಳಲ್ಲಿ ಈ ಹುದ್ದೆಗಳು ಖಾಲಿಯಿವೆ. ಕನಿಷ್ಠ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ತಿಳಿಸಿದೆ.
ಅರ್ಜಿ ಸಲ್ಲಿಕೆಗೂ ಮೊದಲು ಅಭ್ಯರ್ಥಿಗಳ ವಯೋಮಿತಿ, ಮಾಸಿಕ ವೇತನ, ಆರ್ಜಿ ಸಲ್ಲಿಕೆ ಕೊನೆಯ ದಿನಾಂಕ, ವಿದ್ಯಾರ್ಹತೆ, ನೇಮಕಾತಿಯ ಪ್ರಮುಖ ಮಾಹಿತಿ ನೋಡುವುದಾದರೆ,
ನೇಮಕಾತಿ ಸಂಸ್ಥೆ: ಭಾರತೀಯ ಅಂಚೆ ಇಲಾಖೆ
ಹುದ್ದೆ ಹೆಸರು: ಬಹುಕಾರ್ಯ ಸಿಬ್ಬಂದಿ(ಎಂಟಿಎಸ್)
ಒಟ್ಟು ಹುದ್ದೆಗಳು: 18,200 ಹುದ್ದೆಗಳು
ಪೋಸ್ಟಿಂಗ್: ಭಾರತ
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: ಜನವರಿ 28
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ
ಶೈಕ್ಷಣಿಕ ಅರ್ಹತೆ : ಈ ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಪೂರ್ಣಗೊಳಿಸಿರಬೇಕು. ಸ್ಥಳೀಯ ಭಾಷೆ ಗೊತ್ತಿರುವ ಜೊತೆಗೆ ಕನಿಷ್ಠ ಕಂಪ್ಯೂಟರ್ ಜ್ಞಾನ ಇರಬೇಕು.
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
- ಅಭ್ಯರ್ಥಿಗಳ SSLC ಅಂಕಪಟ್ಟಿ, ಪ್ರವೇಶ ಪತ್ರ
- ಪಾಸಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ
- ಆಧಾರ್ ಗುರುತಿನ ಚೀಟಿ
- ಜಾತಿ ಪ್ರಮಾಣ ಪತ್ರ
- ಜನ್ಮ ಪ್ರಮಾಣ ಪತ್ರ
ವಯಸ್ಸಿನ ಮಿತಿ
ನೇಮಕಾತಿ ಅಧಿಸೂಚನೆಯಲ್ಲಿ ನೀಡಲಾದ ಮಾಹಿತಿ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 18 ಹಾಗೂ ಗರಿಷ್ಠ 25 ವರ್ಷಗಳಾಗಿರಬೇಕು. ಜಾತಿ ಆಧಾರದಲ್ಲಿ ವಯೋಮಿತಿಯಲ್ಲಿ ಸಡಿಲಿಕೆ ಸಿಗಬಹುದು.
ಆಯ್ಕೆ ಪ್ರಕ್ರಿಯೆ- ಮಾಸಿಕ ವೇತನ ಎಷ್ಟು?
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ನಿಯಮಾನುಸಾರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾಗುವವರಿಗೆ ಮಾಸಿಕವಾಗಿ ₹15,000ದಿಂದ ₹29,380ರವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ, ವಿಧಾನ ತಿಳಿಯಿರಿ
ಅಭ್ಯರ್ಥಿಗಳು ಜನವರಿ 28ರೊಳಗೆ ಅಂಚೆ ಇಲಾಖೆ ಅಧಿಕೃತ ಜಾಲತಾಣ https://www.indiapost.gov.in/ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಈ ಮೂಲಕ ನೋಂದಾಯಿಸಿಕೊಂಡು ಅಗತ್ಯ ದಾಖಲೆಗಳ ಸಹಿತ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಓದಿಕೊಳ್ಳಬೇಕು.
Hello I’m Fasna. And I’m from virajpet. I have completed my graduation in bcom in Mangalore University.
Job
I am Suhana l have complete my 2nd puc and I have continued my graduation