ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ 13 ವರ್ಷದ ಪುತ್ರ ಆತ್ಮಹತ್ಮೆ ಮಾಡಿಕೊಂಡಿದ್ದಾರೆ. ತುಮಕೂರಿನ ವಿಜಯನಗರದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಡೆತ್‌ನೋಟ್ ಬರೆದಿಟ್ಟು ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ಬಾಲಕ ತ್ರಿಶಾಲ್ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶುಕ್ರವಾರ ಶಾಲೆಯಿಂದ ಮನೆಗೆ ಮರಳಿದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾರಿವಾಳದ ಬೆಟ್ಟಿಂಗ್ ವಿಚಾರದಲ್ಲಿ ಸ್ನೇಹಿತರ ಜೊತೆ ಜಗಳ ಮಾಡಿಕೊಂಡಿದ್ದ ಬಾಲಕ, ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಜಯನಗರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
