ಕಲಬುರಗಿ | ಸಚಿವ ಪ್ರಿಯಾಂಕ್‌ ಖರ್ಗೆ ಮನೆ ಮುತ್ತಿಗೆ ಖಂಡಿಸಿ ದಸಂಸ ಪ್ರತಿಭಟನೆ

Date:

Advertisements

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಯುವ ಗುತ್ತಿಗೆದಾರ ಸಚಿನ್ ಪಾಂಚಾಳರವರ ಆತ್ಮಹತ್ಯೆ ಪ್ರಕರಣದಲ್ಲಿ ವಿನಾಕಾರಣ ಸಚಿವ ಪ್ರಿಯಾಂಕ್ ಖರ್ಗೆ ‌ಅವರ ಹೆಸರನ್ನು ತಂದು ಅವರ ರಾಜಿನಾಮೆಗೆ ಒತ್ತಾಯಿಸಿ, ಮನೆಗೆ ಮುತ್ತಿಗೆ ಹಾಕಿರುವ ವಿಪಕ್ಷಗಳ ನಡೆ ಖಂಡಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಜೇವರ್ಗಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ʼಕಲ್ಯಾಣ ಕರ್ನಾಟಕದ ಸಮಗ್ರ ಏಳಿಗೆಯನ್ನು ಹಿಸಲಾರದೆ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಡವಿದ್ದು ಇದೇ ಬಿಜೆಪಿಗರು. ಅಲ್ಲದೆ ಗೃಹಮಂತ್ರಿ ಅಮಿತ್ ಶಾ, ರಾಜ್ಯ ಸಭೆಯ ಕಲಾಪದಲ್ಲಿ ಮಾತನಾಡುವಾಗ ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದನ್ನು ಖಂಡಿಸಿ ನಡೆಸಿದ ಜೇವರ್ಗಿ ಬಂದ್‌ ಕೂಡ ಯಶಸ್ವಿಯಾಗಿದೆ. ಬಿಜೆಪಿಗರು ಸಾಲು ಸಾಲು ಹಗರಣ ಮಾಡಿ ಕೈಯಲ್ಲಿ ಪ್ಲೇಟ್ ಹಿಡಿದುಕೊಂಡು ಪರಪ್ಪನ ಅಗ್ರಹಾರದಲ್ಲಿ ಹಾಕುವ ಅನ್ನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದೀರಿ. ಖರ್ಗೆ ಅವರದ್ದು ಏನಾದರೂ ಹಗರಣಗಳಿವೆಯೇ ತೋರಿಸಿ. ಯಾವ ಕಾರಣಕ್ಕಾಗಿ ರಾಜಿನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಜಿಲ್ಲಾ ಉಸ್ತವಾರಿ ಸಚಿವರ ಮನೆಗೆ ಮುತ್ತಿಗೆ ಹಾಕಿ ಅವರ ಘನತೆಗೆ ದಕ್ಕೆ ತರುವ ಹುನ್ನಾರ ನಡೆಸಲಾಗಿದೆ. ಆ ಪುಂಡರ ಗುಂಪಿನವರ ಮೇಲೆ ಕಾನೂನಿನ ಕ್ರಮ ಜರುಗಿಸಬೇಕು ಇಲ್ಲವೆ ರಾಜ್ಯದ ದಲಿತ ಸಮುದಾಯದ ಬಹಿರಂಗ ಕ್ಷೇಮೆಯಾಚಿಸಬೇಕೆಂದು ರಾಜ್ಯ ಪಾಲರನ್ನು ಒತ್ತಾಯಿಸಿದರು.

Advertisements

ಪ್ರತಿಭಟನೆಯಲ್ಲಿ ಚಂದ್ರಶೇಖರ್ ಹರನಾಳ್. ಶಾಂತಪ್ಪ ಕೂಡಲಗಿ. ಸುಭಾಷ್ ಚನ್ನೂರ್. ಅಯ್ಯಾಳಪ್ಪ ಗಂಗಾಕರ್. ಶಾಂತಪ್ಪ ಯಲಗೋಡ. ಬೆನ್ನಪ್ಪ ಕೊಂಬಿನ. ಚೆನ್ನಪ್ಪ ಮಂದೇವಾಲ. ಕರೆಪ್ಪ ಹಿಪ್ಪರಗಿ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X