ಹಾಸನ l ಅಭಿವೃದ್ಧಿ ಕುಂಠಿತ, ಕೆ ಎನ್ ರಾಜಣ್ಣ ಜಿಲ್ಲಾ ಉಸ್ತುವಾರಿ ಬದಲಿಸಿ; ಬನವಾಸೆ ರಂಗಸ್ವಾಮಿ 

Date:

Advertisements

ಹಾಸನ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದ ಅಭಿವೃದ್ಧಿ ಕೆಲಸ ಮಾಡಿಲ್ಲದೇ, ಇರುವುದರಿಂದ ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಅವರನ್ನು ಬದಲಾವಣೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಾಸನ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡು ಸುಮಾರು ಎರಡು ವರ್ಷಗಳು ಆಗುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರ ನೋವಿಗೆ ಸ್ಪಂದಿಸುತ್ತಿಲ್ಲ. ಉಸ್ತುವಾರಿ ಸಚಿವರು ಈಗಿನ ತನಕ ಯಾವುದೇ ರೀತಿಯ ಅನುದಾನವಾಗಲಿ, ಅಲ್ಪಸಂಖ್ಯಾತರ ಹಿಂದುಳಿದ ವರ್ಗದವರ ಕಡೆ ಯಾವುದೇ ಗಮನ ಕೊಡದೆ, ಪಕ್ಷದ ಮುಖಂಡರು ಮತ್ತು ಸದಸ್ಯರನ್ನು ಲೆಕ್ಕಿಸದೆ ಉಡಾಫೆ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ. ಎಂದು ಬೇಸರ ವ್ಯಕ್ತಪಡಿಸಿದರು. 

ಹಾಸನ ಜಿಲ್ಲೆಯು 7 ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿದು, ರಾಜಣ್ಣ ಯಾವುದೇ ಕೆಲಸಗಳನ್ನು ಮಾಡದೆ ಜಿಲ್ಲೆಗೆ ಭಾರವಾಗಿದ್ದಾರೆ ಹಾಗೂ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಇಂತಹ ವ್ಯಕ್ತಿ ಆಡಳಿತದಲ್ಲಿ ಇರುವುದು ಸೂಕ್ತವಲ್ಲ ಆದಷ್ಟು ಬೇಗಾ ರಾಜಣ್ಣ ಅವರನ್ನು ಉಸ್ತುವಾರಿ ಸಚಿವರಿಂದ ಕೆಳಗಿಳಿಸಿ ಬೇರೆಯವರನ್ನು ಹಾಸನದ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕೆಂದು ಈಗಾಗಲೇ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಮಾತಾಡಿದರು.

Advertisements

ರಾಜಣ್ಣ ಅವರು ಸಹಕಾರ ಸಚಿವರಾಗಿದ್ದರೂ, ಡಿಸಿಸಿ ಬ್ಯಾಂಕ್ ಮತ್ತು ಹಾಸನ ಹಾಲು ಒಕ್ಕೂಟದ ಆಡಳಿತ ಜೆಡಿಎಸ್‌ ವಶದಲ್ಲಿಯೇ ಎಲ್ಲಾ ವಿಚಾರವಾಗಿ ಜಿಲ್ಲೆಗೆ ಏನನ್ನೂ ಮಾಡದ ಸಚಿವರು, ಜಿಲ್ಲೆ ಬಿಟ್ಟು ಹೋಗಲಿ ಎಂದು ಆಗ್ರಹಿಸಿದರು. ರಾಜ್ಯ ಮಟ್ಟದಲ್ಲಿ ಎಸ್.ಸಿ.ಎಸ್.ಟಿ. ವರ್ಗಕ್ಕೆ ಒಂದು ನಿಗಮ ಮಂಡಳಿ ಸ್ಥಾನಮಾನ ಕೊಡಿಸಲಿಲ್ಲ. ಕನಿಷ್ಠ ಪಕ್ಷದ ಕಾರ್ಯಕರ್ತರ ಸಭೆಯನ್ನು ಮಾಡಿ ಕಷ್ಟ ಕೇಳಲಿಲ್ಲ., ಪಕ್ಷದಲ್ಲಿ ಅನೇಕ ವಿಭಾಗದ ಘಟಕಗಳಿದ್ದು, ಯಾರನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವುದಿಲ್ಲ ಎಂದು ದೂರಿದರು. ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್ ಇವರ ವಿರುದ್ಧ ಕ್ರಮ ಜರುಗಿಸಬೇಕು. ಹಾಗೂ ಉಸ್ತುವಾರಿಯಿಂದ ಕೂಡಲೇ ಬದಲಾಯಿಸಬೇಕು ಎಂದು ಮನವಿ ಮಾಡುತ್ತೇವೆ ಎಂದು ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ ಮಾತಾಡಿದರು.

ಇದನ್ನೂ ಓದಿದ್ದೀರಾ?ಹಾಸನ l ಮಹಿಳಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು; ಎಸ್ ಎಫ್ ಐ ಸಂಘಟನೆ

ಕಾಂಗ್ರೆಸ್ ಕಾರ್ಯಕರ್ತರು ಸಿಟ್ಟಿಗೇಳುವ ಮೊದಲು ಎಚ್ಚೆತ್ತುಕೊಂಡು ಬದಲಾವಣೆ ಮಾಡಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ವೆಂಕಟಗೌಡ, ಬೂದೇಶ್, ತಲಹ್, ಚಂದ್ರಶೇಖರ್, ಉಮೇಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X