ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರು ಘಟನೆ ಜ.10ರ ಶುಕ್ರವಾರ ತಡರಾತ್ರಿ ಉದ್ಯಾವರ ಬಲೈಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಉಡುಪಿಯಲ್ಲಿ ಪ್ಯಾರಾ ಮೆಡಿಕಲ್ ಕಲಿಯುತ್ತಿದ್ದ ಯುವಕ ರಾತ್ರಿ ಪರಿಚಯಸ್ಥರ ಮನೆಯ ಕಾರ್ಯಕ್ರಮಕ್ಕೆ ತೆರಳಿ, ಅಲ್ಲಿಂದ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಅಪಘಾತದ ಸಂದರ್ಭ ಲಾರಿಯ ಅಡಿಭಾಗದಲ್ಲಿ ಬೈಕ್ ಸಿಲುಕಿಕೊಂಡಿದ್ದು ಈ ವೇಳೆ ಬೈಕಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಲಾರಿ ಬೆಂಕಿಗಾಹುತಿಯಾಗಿದೆ. ಇದರಿಂದಾಗಿ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
