ಲಾಸ್ ಏಂಜಲೀಸ್ ಕಾಡ್ಗಿಚ್ಚು | 11 ಮಂದಿ ಸಾವು; 10,000 ಕಟ್ಟಡಗಳು ಬೆಂಕಿಗಾಹುತಿ

Date:

Advertisements

ಲಾಸ್ ಏಂಜಲೀಸ್ ಕಾಡ್ಗಿಚ್ಚು ಭೀಕರವಾಗಿ ಹಬ್ಬುತ್ತಿದ್ದು, ಈವರೆಗೆ 11 ಮಂದಿ ಸಾವನ್ನಪ್ಪಿದ್ದಾರೆ. 10,000 ಕಟ್ಟಡಗಳು ಬೆಂಕಿಗಾಹುತಿಯಾಗಿದೆ. ಈವರೆಗೆ 180,000 ಜನರನ್ನು ಸ್ಥಳಾಂತರಿಸಲಾಗಿದ್ದು, 150 ಬಿಲಿಯನ್ ಡಾಲರ್‌ನಷ್ಟು ಹಾನಿಯಾಗಿದೆ ಎಂದು ವರದಿಯಾಗಿದೆ.

ಮಂಗಳವಾರದಿಂದ ಲಾಸ್ ಏಂಜಲೀಸ್ ಕೌಂಟಿಯನ್ನು ಬೃಹತ್ ಕಾಡ್ಗಿಚ್ಚು ಆವರಿಸಿದೆ. ಲಾಸ್ ಏಂಜಲೀಸ್‌ನ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ನಗರದ ವಾಯುವ್ಯದಲ್ಲಿರುವ ಪ್ಯಾಲಿಸೇಡ್ಸ್‌ನಲ್ಲಿ ಬೆಂಕಿ 86 ಚದರ ಕಿಲೋಮೀಟರ್ (33 ಚದರ ಮೈಲಿ) ಪ್ರದೇಶವನ್ನು ಸಂಪೂರ್ಣವಾಗಿ ಸುಟ್ಟಿದೆ. ಬೆಂಕಿಯು 37,000 ಎಕರೆಗಳಿಗಿಂತ ಹೆಚ್ಚು (15,000 ಹೆಕ್ಟೇರ್ ಅಥವಾ 150 ಚದರ ಕಿ.ಮೀ) ಪ್ರದೇಶವನ್ನು ಆವರಿಸಿದೆ.

ಇದನ್ನು ಓದಿದ್ದೀರಾ? ಲಾಸ್‌ ಏಂಜಲೀಸ್‌ ಕಾಡ್ಗಿಚ್ಚು: ಜಗತ್ತು ಕಲಿಯಬೇಕಾದ ಪಾಠವೇನು?

Advertisements

ಈವರೆಗೆ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಲಾಸ್ ಏಂಜಲೀಸ್ ಕೌಂಟಿ ಕರೋನವ್ ಗುರುವಾರ ತಿಳಿಸಿದ್ದಾರೆ. ಕನಿಷ್ಠ 10,000 ಮನೆಗಳು ಅಥವಾ ಇತರೆ ಕಟ್ಟಡಗಳು ಅಗ್ನಿಗಾಹುತಿಯಾಗಿದೆ. 2018ರಲ್ಲಿ ಸ್ಯಾಕ್ರಮೆಂಟೊದ ಉತ್ತರದಲ್ಲಿ ‘ಕ್ಯಾಂಪ್ ಫೈರ್’ ಸುಮಾರು 19,000 ಕಟ್ಟಡಗಳು ಧ್ವಂಸಗೊಳಿಸಿತ್ತು. 2017ರ ಅಕ್ಟೋಬರ್‌ನಲ್ಲಿ ಸ್ಯಾನ್ ಫ್ರಾನ್ಸಿಸ್ಕೋದ ಉತ್ತರದಲ್ಲಿ ಬೆಂಕಿಗೆ 5,600 ಕಟ್ಟಡಗಳು ಧ್ವಂಸವಾಗಿದ್ದವು.

ಸುಮಾರು 180,000 ಜನರ ಸ್ಥಳಾಂತರ ಮಾಡಲಾಗಿದೆ. ಸರ್ಕಾರದ ಆದೇಶವನ್ನು ಪಾಲಿಸುವಂತೆ ಸೂಚಿಸಲಾಗಿದೆ. ಇನ್ನು ಬೆಂಕಿ ಹಬ್ಬುತ್ತಿರುವ ನಡುವೆಯೇ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಈವರೆಗೆ 20 ಮಂದಿಯ ಬಂಧಿಸಲಾಗಿದೆ. ರಾತ್ರಿ ಕರ್ಫ್ಯೂ ಘೋಷಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

Download Eedina App Android / iOS

X