ಕೇಂದ್ರ ಸಚಿವರಾಗಿ ಆರು ತಿಂಗಳಾದರೂ ರಾಜ್ಯಕ್ಕೆ ಕುಮಾರಸ್ವಾಮಿ ಕೊಡುಗೆ ಶೂನ್ಯ: ರಮೇಶ್‌ ಬಾಬು

Date:

Advertisements

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿರವರು ರಾಜ್ಯ ಸರ್ಕಾರ ತಮಗೆ ಶಿಷ್ಟಾಚಾರಕ್ಕೆ ಅನುಗುಣವಾಗಿ ನಿಗದಿತ ಸಮಯದಲ್ಲಿ ಹೊಸ ಕಾರನ್ನು ನೀಡಲಿಲ್ಲ ಎಂದು ಆರೋಪಿಸಿದ್ದಾರೆ. ಕೇಂದ್ರದಲ್ಲಿ ಸಂಪುಟ ದರ್ಜೆಯ ಸಚಿವ ಸ್ಥಾನ ಪಡೆದು ಆರು ತಿಂಗಳು ಕಳೆದರೂ ಇಲ್ಲಿಯವರೆಗೆ ರಾಜ್ಯದ ಅಭಿವೃದ್ಧಿಗೆ ಇವರು ನೀಡಿರುವ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಸಣ್ಣ ಸಣ್ಣ ವಿಷಯಗಳನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ ಪ್ರಚಾರ ಪಡೆಯಲು ಮುಂದಾಗಿದ್ದಾರೆ ಎಂದು ಮಾಜಿ ಎಮ್‌ಎಲ್‌ಸಿ ರಮೇಶ್‌ ಬಾಬು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅವರ ಅಪೇಕ್ಷೆಯಂತೆ ಹೊಸ ಟೊಯೋಟಾ ಇನ್ನೋವಾ ಹೈಕ್ರಾಸ್ ವಾಹನ ಹಂಚಿಕೆ ಆಗಿರುತ್ತದೆ. ಮಂಡ್ಯ ಜಿಲ್ಲಾಧಿಕಾರಿಗಳು ಹೊಸ ಕಾರನ್ನು ಪಡೆಯಲು ಕೇಂದ್ರ ಸಚಿವರನ್ನು ಕೋರಿದ್ದು, ಧನುರ್ಮಾಸದ ಕಾರಣ ನೀಡಿ ಸಂಕ್ರಾಂತಿಯ ನಂತರ ಹೊಸ ಕಾರು ಪಡೆಯುವುದಾಗಿ ತಿಳಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ರಮೇಶ್‌ ಬಾಬು ಹೇಳಿದ್ದಾರೆ.

ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ 04-11-2024 ರಲ್ಲಿ ಕುಮಾರಸ್ವಾಮಿರವರ ಹೊಸ ವಾಹನದ ಪ್ರಸ್ತಾಪಕ್ಕೆ ಅನುಗುಣವಾಗಿ ಆರ್ಥಿಕ ಇಲಾಖೆಗೆ ಪತ್ರ ಬರೆದಿರುತ್ತಾರೆ. ಕರ್ನಾಟಕದ ಸುಮಾರು 6 ಸಂಸದರಿಗೆ ಆರ್ಥಿಕ ಮಿತಿಯೊಳಗೆ ವಾಹನಗಳನ್ನು ಖರೀದಿಸಲು ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಅದಕ್ಕೆ ಅನುಗುಣವಾಗಿ ವಾಹನ ಖರೀದಿ ಮಾಡಿ, ಹೊಸ ಕಾರು ಪಡೆಯಲು ಮಾಹಿತಿ ನೀಡಲಾಗಿರುತ್ತದೆ ಎಂದು ವಿವರಿಸಿದ್ದಾರೆ.

Advertisements

ಹಿಂದಿನ ಇನ್ನೋವಾ ಕ್ರಿಸ್ಟಾ ಕಾರನ್ನು ಬಳಸಲು ಹೆಚ್.ಡಿ.ಕುಮಾರಸ್ವಾಮಿರವರು ನಿರಾಕರಿಸಿ ಹೊಸ ಇನ್ನೋವಾ ಹೈಕ್ರಾಸ್ ಕಾರಿಗೆ ಬೇಡಿಕೆ ಸಲ್ಲಿಸಿದ್ದು, KA 59 G 0099 ಕಾರು ಹಂಚಿಕೆ ಆಗಿರುತ್ತದೆ. ಇದರ ಜೊತೆಗೆ ಕೆಲವು ಸಿಬ್ಬಂದಿಯನ್ನು ಎರವಲು ಸೇವೆಯ ಮೇಲೆ ರಾಜ್ಯ ಸರ್ಕಾರದಿಂದ ಪಡೆದುಕೊಂಡಿರುತ್ತಾರೆ. ಆದರೆ ಇಂತಹ ವಿಚಾರಗಳನ್ನು ಇಟ್ಟುಕೊಂಡು ರಾಜ್ಯ ಸರ್ಕಾರವನ್ನು, ಸಿದ್ದರಾಮಯ್ಯರವರನ್ನು, ಡಿ.ಕೆ.ಶಿವಕುಮಾರ್ ರವರನ್ನು, ಕೃಷ್ಣ ಬೈರೇಗೌಡರವರನ್ನು, ಚಲುವರಾಯ ಸ್ವಾಮಿ ಮತ್ತು ಇತರರನ್ನು ಟೀಕಿಸುವ ಮೂಲಕ ತಮ್ಮ ನಾಯಕತ್ವಕ್ಕೆ ಅವರೇ ಮಸಿ ಬಳಿದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ರಾಜ್ಯದ 2023ರ ವಿಧಾನಸಭೆಯ ಚುನಾವಣೆಯ ಫಲಿತಾಂಶದ ನಂತರ ಕುಮಾರಸ್ವಾಮಿರವರು ಪದೇ ಪದೇ ವ್ಯಕ್ತಿಗತ ಟೀಕೆಗಳಿಗೆ ಮುಂದಾಗುವುದರ ಮೂಲಕ ತಮ್ಮ ಹತಾಶ ಭಾವನೆಯನ್ನು ತೋರುತ್ತಿದ್ದಾರೆ. ಕುಮಾರಸ್ವಾಮಿರವರು ತಮಗೆ ದೊರೆತಿರುವ ಅವಕಾಶಗಳನ್ನು ಬಳಸಿಕೊಂಡು ರಾಜ್ಯದ ಅಭಿವೃದ್ಧಿಗೆ ಮುಂದಾಗಲಿ. ಇಂತಹ ಸಾರ್ವಜನಿಕ ಪ್ರಾಮುಖ್ಯತೆ ಇಲ್ಲದ ವಿಷಯಗಳನ್ನು ಪ್ರಸ್ತಾಪಿಸಿ ಮುಜುಗರಕ್ಕೆ ಒಳಗಾಗುವ ಬದಲು, ಆರೋಗ್ಯಕರ ಚರ್ಚೆಗಳಿಗೆ ಒತ್ತು ನೀಡಿ ರಾಜ್ಯದ ಅಭಿವೃದ್ಧಿಗೆ ಮುಂದಾಗಲಿ ಎಂದು ರಮೇಶ್‌ ಬಾಬು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X