ಯುಎಸ್ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು ನಿರಂತರವಾಗಿ ಸಾರ್ವಕಾಲಿಕ ಇಳಿಕೆ ಕಾಣುತ್ತಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ನಾಯಕಿ, ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಕೇಂದ್ರವನ್ನು ಟೀಕಿಸಿದ್ದಾರೆ.
ಯುಎಸ್ ಡಾಲರ್ ವಿರುದ್ಧ ರೂಪಾಯಿ ಮೌಲ್ಯವು ಸಾರ್ವಕಾಲಿಕವಾಗಿ ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರವು ಉತ್ತರವನ್ನು ನೀಡಬೇಕು ಎಂದು ಪ್ರಿಯಾಂಕಾ ಗಾಂಧಿ ಆಗ್ರಹಿಸಿದ್ದಾರೆ.
ಇದನ್ನು ಓದಿದ್ದೀರಾ? ತನ್ನ ಕೆನ್ನೆಯ ಬಗ್ಗೆ ಮಾತನಾಡಿದ ಬಿಜೆಪಿ ನಾಯಕ ಬಿಧುರಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಶುಕ್ರವಾರ ಮೊದಲ ಬಾರಿಗೆ ಯುಎಸ್ ಡಾಲರ್ ವಿರುದ್ಧ ರೂಪಾಯಿ 18 ಪೈಸೆ ಕುಸಿದು 86ಕ್ಕೆ ತಲುಪಿದೆ. ಯುಎಸ್ ಕರೆನ್ಸಿ ವಿರುದ್ಧ ಭಾರತೀಯ ರೂಪಾಯಿ ಮೌಲ್ಯ ಶುಕ್ರವಾ ವಹಿವಾಟಿನ ಅಂತ್ಯದಲ್ಲಿ 86.04 ಕ್ಕೆ ಸ್ಥಿರವಾಗಿದೆ.
“ಯುಎಸ್ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು ಸಾರ್ವಕಾಲಿಕವಾಗಿ ಕುಸಿತ ಕಂಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ಕುಸಿತ ಕಂಡಿದೆ. ಡಾಲರ್ ಎದುರು ರೂಪಾಯಿ ಮೌಲ್ಯವು 86.4ಕ್ಕೆ ತಲುಪಿದೆ” ಎಂದು ಎಕ್ಸ್‌ನಲ್ಲಿ ಪ್ರಿಯಾಂಕಾ ಗಾಂಧಿ ಬರೆದಿದ್ದಾರೆ.
डॉलर के मुकाबले रुपये की कीमत अब तक के सबसे निचले स्तर पर पहुंच गई है। इतिहास में पहली बार एक डॉलर की कीमत 86.4 रुपये हो गई है।
— Priyanka Gandhi Vadra (@priyankagandhi) January 11, 2025
डॉ. मनमोहन सिंह जी के कार्यकाल में जब एक डॉलर की कीमत 58-59 रुपये थी, तब नरेंद्र मोदी जी रुपये की कीमत को सरकार की आबरू से जोड़ते थे। वे कहते थे,… pic.twitter.com/IOG3oaUeA3
ಇನ್ನು “ಮನಮೋಹನ್ ಸಿಂಗ್ ಅವಧಿಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯವು 58-59 ರೂಪಾಯಿ ಆಗಿತ್ತು. ನರೇಂದ್ರ ಮೋದಿ ಅವರು ಈ ವಿಚಾರದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ನನಗೆ ಎಲ್ಲಾ ತಿಳಿದಿದೆ. ರೂಪಾಯಿ ಮೌಲ್ಯ ಇಷ್ಟೊಂದು ಇಳಿಯಲು ಸಾಧ್ಯವೇ ಇಲ್ಲ ಎಂದು ಮೋದಿ ಹೇಳುತ್ತಿದ್ದರು” ಎಂದು ಪ್ರಿಯಾಂಕಾ ಹೇಳಿದ್ದಾರೆ.
“ಇಂದು ನರೇಂದ್ರ ಮೋದಿ ಅವರೇ ದೇಶದ ಪ್ರಧಾನಿಯಾಗಿದ್ದಾರೆ. ಇಂದು ರೂಪಾಯಿ ಎಲ್ಲಾ ದಾಖಲೆಯನ್ನು ಮುರಿದು ತನ್ನ ಮೌಲ್ಯವನ್ನು ಕಳೆದುಕೊಳ್ಳುತ್ತಿದೆ. ಮೋದಿ ಇಂದು ದೇಶದ ಜನರಿಗೆ ಉತ್ತರ ನೀಡಬೇಕು” ಎಂದು ಪ್ರಿಯಾಂಕಾ ಹೇಳಿದ್ದಾರೆ.
