ಕೇರಳ | ಹೃದಯ ವಿದ್ರಾವಕ ಘಟನೆ: ಪಿಸ್ತಾದ ಸಿಪ್ಪೆ ಶ್ವಾಸಕೋಶದಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತ್ಯು

Date:

Advertisements

ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕೇರಳದಲ್ಲಿ ನಡೆದಿದೆ.

ಕರ್ನಾಟಕ-ಕೇರಳದ ಗಡಿ ಜಿಲ್ಲೆಯಾದ ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ಭಾನುವಾರ ಮಗುವನ್ನು ಕಳೆದುಕೊಂಡ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ ನಿವಾಸಿ ಅನ್ವರ್- ಮೆಹರೂಫಾ ದಂಪತಿ ಪುತ್ರ ಅನಸ್ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.

Advertisements

ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದರು. ಬಳಿಕ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಗಿತ್ತು ಎಂದು ತಿಳಿದುಬಂದಿದೆ.

WhatsApp Image 2025 01 12 at 4.59.21 PM 1

ಆದರೆ, ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದೆ. ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ. ಬಾಕಿಯುಳಿದಿದ್ದ ಪಿಸ್ತಾದ ಸಿಪ್ಪೆ ಶ್ವಾಸಕೋಶದಲ್ಲಿ ಉಳಿದಿದ್ದರಿಂದಾಗಿ ಮಗು ಉಸಿರಾಟದ ಸಮಸ್ಯೆಗೆ ತುತ್ತಾಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ವಿಜಯನಗರ | ಬಸವಣ್ಣನವರು ಅಂತರ್ಜಾತಿ ವಿವಾಹ ಉತ್ತೇಜಿಸಿದ್ದರು: ಸಿಎಂ ಸಿದ್ಧರಾಮಯ್ಯ

ವಿದೇಶದಲ್ಲಿರುವ ಮಗುವಿನ ತಂದೆ ಅನ್ವರ್ ಅವರು ಕಳೆದ ವಾರವಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದು, ರಜೆ ಮುಗಿದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಮತ್ತೆ ವಿದೇಶಕ್ಕೆ ತೆರಳಿದ್ದರು. ಸದ್ಯ ಮಗುವಿನ ಸಾವಿನ ಸುದ್ದಿ ತಿಳಿದು ತಂದೆ ಊರಿಗೆ ಮರಳುತ್ತಿದ್ದಾರೆ ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X