ಭಾರತದ ಎಲ್ಲ 543 ಲೋಕಸಭಾ ಕ್ಷೇತ್ರಗಳಲ್ಲೂ ಪಾಸ್‌ಪೋರ್ಟ್ ಸೇವಾ ಕೇಂದ್ರ ತೆರೆಯಲಾಗುತ್ತದೆ ಎಂದು ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಘೋಷಿಸಿದ್ದಾರೆ.
ಮಧ್ಯಪ್ರದೇಶದ ಗುಣ ಲೋಕಸಭಾ ಕ್ಷೇತ್ರದಲ್ಲಿ (ಸಿಂಧಿಯಾ ಪ್ರತಿನಿಧಿಸುವ ಕ್ಷೇತ್ರ) ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಪ್ರಧಾನಿ ಮೋದಿ ಅವರು ಸೇವೆಗಳನ್ನು ವಿಸ್ತರಿಸುವ ಉದ್ದೇಶ ಹೊಂದಿದ್ದಾರೆ. ಹೀಗಾಗಿ, ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಿದ್ದಾರೆ” ಎಂದು ಹೇಳಿದ್ದಾರೆ.
ಇದೇ ವರ್ಷ ಮಧ್ಯಪ್ರದೇಶದಲ್ಲಿ ಆರು ಪಾಸ್‌ಪೋರ್ಟ್ ಸೇವಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ವಿದೇಶಾಂಗ ಸಚಿವಾಲಯದ ನೆರವು ಪಡೆದು, ದೇಶದ ಎಲ್ಲ ಲೋಕಸಭಾ ಕ್ಷೇತ್ರಗಳಲ್ಲೂ ಪಾಸ್‌ಪೋರ್ಟ್ ಸೇವಾ ಕೇಂದ್ರ ತೆರೆಯಲಾಗುತ್ತದೆ” ಎಂದು ತಿಳಿಸಿದ್ದಾರೆ.