ಬೃಹತ್ ಉದ್ಯೋಗ ಮೇಳದಲ್ಲಿ 1196 ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಮೇಳ ಯಶಸ್ವಿಯಾಯಿತು.
ಶಾಸಕ ಶ್ರೀನಿವಾಸ ಮಾನೆ ಅವರ 50ನೇ ಜನ್ಮ ವರ್ಷಾಚರಣೆ ಅಂಗವಾಗಿ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ಗುರುಭವನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳ ನಡೆಯಿತು.
ಈ ಬೃಹತ್ ಉದ್ಯೋಗ ಮೇಳವನ್ನು ಲೋಯಲ ವಿಕಾಸ ಕೇಂದ್ರ, ರೋಶನಿ ಟ್ರಸ್ಟ್, ಉದ್ಯೋಗ ಸಮೃದ್ಧಿ ಕೇಂದ್ರ ಸೇರಿದಂತೆ ನಾನಾ ಸಂಘಟನೆಗಳ ಆಶ್ರಯದಲ್ಲಿ ಆಯೋಜಿಸಲಾಗಿದ್ದ, ಶಿಬಿರ ಉದ್ಯೋಗಾಕಾಂಕ್ಷಿಗಳ ದಂಡೇ ಹರಿದು ಬಂದಿತ್ತು. ಸ್ಥಳದಲ್ಲಿ ಒಟ್ಟು 1720 ಜನರ ನೋಂದಣಿ ಮಾಡಿಕೊಳ್ಳಲಾಯಿತು. ಸಂದರ್ಶನದಲ್ಲಿ 1196 ಜನರಿಗೆ ಉದ್ಯೋಗವಕಾಶ ಪಡೆದವರಿಗೆ ಶಾಸಕ ಶ್ರೀನಿವಾಸ್ ಮಾನೆ ಸ್ಥಳದಲ್ಲಿಯೇ ಪ್ರಮಾಣ ಪತ್ರ ನೀಡಿದ್ದಾರೆ.
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೋಮಾ ತೇರ್ಗಡೆಯಾದವರು ಮತ್ತು ಪದವೀಧರರು ಸೇರಿದಂತೆ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸಂದರ್ಶನಕ್ಕೆ ಹಾಜರಾಗಿ ಉದ್ಯೋಗಾವಕಾಶ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗವಿಮಠದ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಕೊಂದ ಪತಿ
ಲೋಯಲ ಸಮೂಹ ಸಂಸ್ಥೆಗಳ ಮುಖ್ಯಸ್ಥ ಫಾ. ಮೆಲ್ವಿನ್ ಲೋಬೊ, ಲೋಯಲ ವಿಕಾಸ ಕೇಂದ್ರದ ನಿರ್ದೇಶಕ ಫಾ. ಜೇರಾಲ್ಡ್, ಸಹ ನಿರ್ದೇಶಕ ಫಾ. ಜೇಸಸ್, ರೋಶನಿ ಟ್ರಸ್ಟ್ ನಿರ್ದೇಶಕಿ ಸಿಸ್ಟರ್ ಅನಿತಾ ಡಿಸೋಜ, ಹ್ಯುಮ್ಯಾನಿಟಿ ಫೌಂಡೇಶನ್ ಅಧ್ಯಕ್ಷೆ ಸ್ವಾತಿ ಮಾಳಗಿ, ಪ್ರಗತಿಪರ ಮುಖಂಡ ಡಾ. ಎನ್.ಎಫ್. ಕಮ್ಮಾರ, ಪುರಸಭೆ ಅಧ್ಯಕ್ಷೆ ಮಮತಾ ಆರೆಗೊಪ್ಪ, ಉಪಾಧ್ಯಕ್ಷೆ ವೀಣಾ ಗುಡಿ, ಪ್ರಗತಿ ಒಕ್ಕೂಟ ಸಂಘದ ಸದಸ್ಯರು ಇದ್ದರು.
ವರದಿ : ಜಗದೀಶ್ ಹರಿಜನ ಸಿಟಿಜನ್ ಜರ್ನಲಿಸ್ಟ್
