ಕಲಬುರಗಿ | ಸೀತನೂರು ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ಗ್ರಾಮಸ್ಥರ ಆಗ್ರಹ

Date:

Advertisements
  • ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನಿತ್ಯ ತೊಂದರೆ
  • ನಗರ ಬಸ್‌ ಇಲ್ಲದ ಕಾರಣ 2 ಕಿ.ಮೀ ನಡೆಯಬೇಕಿದೆ

ಕಲಬುರಗಿ ನಗರದಿಂದ ಸುಮಾರು 11 ಕಿಲೋ ಮೀಟರ್ ದೂರದಲ್ಲಿರುವ ಸೀತನೂರು ಗ್ರಾಮಕ್ಕೆ ನಗರ ಬಸ್‌ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಕೆಎಸ್‌ಆರ್‌ಟಿಸಿ ಕಲಬುರಗಿ ವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರ ಬಸ್‌ ವ್ಯವಸ್ಥೆ ಇಲ್ಲದ ಕಾರಣ ಗ್ರಾಮಸ್ಥರು ಸುಮಾರು 2 ಕಿ.ಮೀ ವರೆಗೆ, ಅಂದರೆ ಸೀತನೂರು ಗ್ರಾಮದಿಂದ ಕಲಬುರಗಿ ಕೇಂದ್ರ ಕಾರಾಗ್ರಾಹದ ವರೆಗೆ ನಡೆದುಕೊಂಡು ಬರಬೇಕಾಗಿದೆ. ಇದರಿಂದ ಗ್ರಾಮದಿಂದ ಶಾಲಾ-ಕಾಲೇಜಿಗೆ ಹೋಗುವ ಮಕ್ಕಳು, ಹೆಣ್ಣು ಮಕ್ಕಳು, ತರಕಾರಿ ಮಾರಾಟ ಮಾಡಲು ಕಲಬುರ್ಗಿ ನಗರಕ್ಕೆ ಹೋಗುವವರು ಮತ್ತು ವೃದ್ಧರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ವಿವರಿಸಿದ್ದಾರೆ.

ಆಟೋದಲ್ಲಿ ಕಲಬುರಗಿ ನಗರದ ವರೆಗೆ ಹೋಗಿ ಬರಲು ರೂಪಾಯಿ 300 ರಿಂದ 400 ರವರೆಗೆ ಬಾಡಿಗೆ ನೀಡಬೇಕಿದೆ. ಇದರಿಂದ ಗ್ರಾಮಸ್ಥರು ಆರ್ಥಿಕ ಸಮಸ್ಯೆಗೆ ಒಳಗಾಗುತ್ತಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

Advertisements

ಬಸ್ ವ್ಯವಸ್ಥೆ ಇಲ್ಲದ ಕಾರಣಕ್ಕೆ ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ನಿತ್ಯವೂ ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಒಟ್ಟಿನಲ್ಲಿ ನಗರ ಬಸ್‌ ವ್ಯವಸ್ಥೆ ಇಲ್ಲದಿರುವುದು ತೀವ್ರ ಸಮಸ್ಯೆಯಾಗಿ ಪರಿಣಮಿಸಿದೆ. ಆದ್ದರಿಂದ ಸೀತನೂರ ಗ್ರಾಮಕ್ಕೆ ಆದಷ್ಟು ಶೀಘ್ರದಲ್ಲಿ ಸಿಟಿ ಬಸ್‌ ವ್ಯವಸ್ಥೆ ಕಲ್ಪಿಸಿಕೊಡಬೇಕು ಹಾಗೂ ಹೊಸದಾಗಿಯೇ ನೃಪತುಂಗ ಬಸನ್ನು ಒದಗಿಸಬೇಕು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ

ವಾರದೊಳಗೆ ಸೂಕ್ತ ಕ್ರಮ ಕೈಗೊಳ್ಳದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರಗಿ ವಿಭಾಗೀಯ ನಿಯಂತ್ರಣಾಧಿಕಾರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆ ನೇತೃತ್ವವನ್ನು ಪವನಕುಮಾರ ಬಿ ವಳಕೇರಿ ವಹಿಸಿದ್ದರು. ಈ ಸಂದರ್ಭದಲ್ಲಿ ಮಹಬೂಬ ಪಟೇಲ ಮಾಲಿ, ಎಂ ಎಸ್ ಪಾಟೀಲ, ಅನ್ವರ್ ಪಟೇಲ, ಆಸೀಫ್ ಎನ್, ಅಭಾಸಲಿ, ಬಾವಾ ಸಾಬ, ಮೊಲಾಸಾಬ್, ಸಿದ್ದಪ್ಪ ಜೆ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X