ಹಿಂದೂ ಅನ್ನೋದು ಅವಮಾನಕರ ಶಬ್ದ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಅಂತ ಚಿಂತಕ ಕೆ ಎಸ್ ಭಗವಾನ್ ಹೇಳಿದ್ದಾರೆ.
ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
ಕೆ ಎಸ್ ಭಗವಾನ್ ಹಿಂದೂ ಪದದ ಬಗ್ಗೆ ಮಾತನಾಡಿದ್ದಾರೆ. ಹಿಂದೂ ಶಬ್ದ ಬಂದಿದ್ದು 1030ನೇ ಇಸವಿಯಲ್ಲಿ. ಪರ್ಷಿಯನ್ ಲೇಖಕ ಆಲ್ಬರೋನಿ ಭಾರತದ ಬಗ್ಗೆ ಬರೆಯುತ್ತಾ ಸಿಂಧೂ ನದಿಯನ್ನು ಹಿಂದೂ ಅಂತ ಕರೆದರು. ಪರ್ಷಿಯನ್ ಭಾಷೆಯಲ್ಲಿ ‘ಸ’ ಕಾರ ಇಲ್ವಂತೆ, ‘ಸ’ ಕಾರ ‘ಹ’ ಕಾರ ಆಗುತ್ತಂತೆ. ಮುಂದೆ ಅಕ್ಬರ್‌ನ ಕಾಲದಲ್ಲಿ ಈ ದೇಶಕ್ಕೆ ಹಿಂದೂಸ್ತಾನ ಎಂದು ಹೆಸರು ಬಂತು. ಹೀಗಾಗಿ ರಾಮಾಯಣ, ಮಹಾಭಾರತ, ಪುರಾಣ, ವೇದ ಗ್ರಂಥಗಳಲ್ಲಿ ಹಿಂದೂ ಅನ್ನೋ ಹೆಸರಿಲ್ಲ ಎಂದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಬಗ್ಗೆ ಕೇಜ್ರಿವಾಲ್‌ಗೆ ಇರಲಿ ಎಚ್ಚರ
ಕಾಶ್ಮೀರದ ಶೈವ ಗ್ರಂಥಗಳಲ್ಲಿ ಹಿಂದೂ ಪದಕ್ಕೆ ಯಾರೂ ಹೀನನಾಗಿದ್ದಾರೊ, ಯಾರು ದೂಷಣೆಗೆ ಒಳಗಾಗಿದ್ದಾರೋ ಅವನು ಹಿಂದೂ ಅಂತ ಇದೆ. ಹಾಗಾಗಿ ಹಿಂದೂ ಅನ್ನೋ ಶಬ್ದ ಬಹಳ ಅಪಮಾನಕರವಾಗಿದೆ. ಚಾತುರ್ವಣದಲ್ಲಿ ಶೂದ್ರ ಅನ್ನೋ ಶಬ್ದ ಸಹ ಮನುಸ್ಮೃತಿ ಪ್ರಕಾರ ಅಪಮಾನಕ್ಕೆ ಒಳಗಾಗಿದೆ. ಸಂವಿಧಾನದಲ್ಲಿ ಸಮಾನತೆ ಸ್ವಾತಂತ್ರ್ಯ ಸೇರಿ ದೊಡ್ಡ ತತ್ವವನ್ನ ಬಾಬಾ ಸಾಹೇಬರು ಅಳವಡಿಸಿದ್ದಾರೆ. ಸಂವಿಧಾನ ತೆಗೆದು ಹಾಕಲು ನಮ್ಮ ದೇಶದ ಜನ ಅವಕಾಶ ನೀಡಬಾರದು. ಮನುಸ್ಮೃತಿಯನ್ನು ವಾಪಸ್ ತರಬಾರದು. ಮನುಸ್ಮೃತಿಯನ್ನು ಬಾಬಾ ಸಾಹೇಬರು, ಪೆರಿಯಾರ್ ಸುಟ್ಟು ಹಾಕಿದರು. ಸಂವಿಧಾನದ ಪರ ಹೋರಾಡಬೇಕು ಮನುಸ್ಮೃತಿಯನ್ನು ತಿರಸ್ಕರಿಸಬೇಕು ಅಂತ ಭಗವಾನ್ ಹೇಳಿದ್ದಾರೆ.
ಒಂದೊಂದು ಮಠ ಒಂದೊಂದು ಸಮುದಾಯಕ್ಕೆ ಸೀಮಿತವಾಗಿವೆ. ಇದರಿಂದ ಜನರ ಮನಸ್ಸು ಬಹಳ ಸಂಕುಚಿತವಾಗುತ್ತಿದೆ. ಎಲ್ಲರೂ ಸಮಾನರು ಅನ್ನೋ ಭಾವನೆಗೆ ಅಡ್ಡಿ ಬರುತ್ತಿದೆ. ಜನ ಇದನ್ನ ದಾಟಿ ಬರಬೇಕು. ದೇಶದಲ್ಲಿ ಬೌದ್ಧ ಧರ್ಮ 1,500 ವರ್ಷಕಾಲ ಹರಡಿತ್ತು. ಬುದ್ಧ ಈ ಮಣ್ಣಿನ ಮಗ ಒಬ್ಬ ರೈತನ ಮಗ, ಬೌದ್ಧ ಸ್ತೂಪಗಳು, ದೇವಾಲಯಗಳು ಎಲ್ಲವನ್ನೂ ಒಡೆದು ಹಾಕಿದ್ದಾರೆ. ಯಾರು ಮಾಡಿದ್ದು ಅದನ್ನು ಪತ್ತೆ ಹಚ್ಚಿ ಮೂಲ ವ್ಯಕ್ತಿಗಳಿಗೆ ವಾಪಸ್ ಕೊಡಬೇಕು ಎಂದು ಆಗ್ರಹಿಸಿದ್ದಾರೆ.
Jai Bhagavan, Nimmanthavara Saviraru Manassugalu Huttabeku
Nimantha desha drohi media davr mel legal action thagolbek first… Avaga ella sari agutte
Ivanyaava Chintakano.. Tagadu soolemaga ivandu ond bhashana, iva heliddu bareyo neevu obba journalist, soolemaganige muslims Alla ge, Christians Esu Christanigu ondashtu baigula bayyoke heli, avru hadtaare ivanna.
ಯಾಕ್ರಪ್ಪಾ, ಚರಂಡಿ ಭಾಷೆಯಲ್ಲಿ ಬಂದ ಪ್ರತಿಕ್ರಿಯೆಗಳನ್ನು ಪ್ರಕಟಿಸುತ್ತೀರಿ?!