ಬೆಂಗಳೂರು | ಸರ್ಕಾರಿ ನೌಕರರ ಆಸ್ತಿ ಸಾರ್ವಜನಿಕವಾಗಿ ಘೋಷಣೆಯಾಗಬೇಕು: ಕೆಆರ್‌ಎಸ್‌ ಪಕ್ಷದ ಎಲ್ ಜೀವನ್

Date:

Advertisements

ಲೋಕಾಯುಕ್ತ, ಉಪಲೋಕಾಯುಕ್ತರು ಸೇರಿದಂತೆ ಸರ್ಕಾರಿ ನೌಕರರು ತಮ್ಮ ಆಸ್ತಿಯನ್ನು ಸಾರ್ವಜನಿಕವಾಗಿ ಘೋಷಿಸಬೇಕು ಎಂದು ಕೆಆರ್‌ಎಸ್‌ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್ ಜೀವನ್ ಅಭಿಪ್ರಾಯಪಟ್ಟರು.

ಬೆಂಗಳೂರು ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಎಲ್ಲ ಸರ್ಕಾರಿ ನೌಕರರ ಆಸ್ತಿ ವಿವರಗಳನ್ನು ಸರ್ಕಾರವು ಸಂಗ್ರಹಿಸಿ ನೌಕರರ ಆಸ್ತಿ ವಿವರಗಳನ್ನು ಪರಿಶೀಲಿಸಲು ಲೋಕಾಯುಕ್ತಕ್ಕೆ ಅವಕಾಶ ಒದಗಿಸಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಇತ್ತೀಚೆಗೆ ಪತ್ರ ಬರೆದಿದ್ದು, ಲೋಕಾಯುಕ್ತರು ಈ ವಿವರವು ಸರ್ಕಾರದ ಸುಪರ್ದಿಯಲ್ಲಿದೆ ಮತ್ತು ಅಕ್ರಮ ಆಸ್ತಿ ಗಳಿಸಿದವರ ವಿರುದ್ಧ ತನಿಖಾ ಸಂದರ್ಭದಲ್ಲಿ ಸಂಬಂಧಿಸಿದ ನೌಕರರ ಆಸ್ತಿ ವಿವರ ಪರಿಶೀಲಿಸಲು ಯಾವುದೇ ಅಡೆತಡೆಯಿಲ್ಲದೆ ನೇರವಾಗಿ ಪರಿಶೀಲಿಸಲು ಅವಕಾಶ ಇರಬೇಕೆಂದು ತಿಳಿಸಲಾಗಿತ್ತು” ಎಂದರು.

“ಲೋಕಾಯುಕ್ತರ ಈ ಸಲಹೆಯು ಈ ವಿವರವು ಕೇವಲ ಸರ್ಕಾರಕ್ಕೆ ಮತ್ತು ಲೋಕಾಯುಕ್ತಕ್ಕೆ ಮಾತ್ರ ಲಭ್ಯವಿದೆ. ಇದು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಇದು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಹಾಯವಾಗುವಂತಹ ಕ್ರಮವಾಗಿದೆ. ಆದರೆ ಇದಕ್ಕೆ ಸಚಿವಾಲಯದ ನೌಕರರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಭೇಟಿ ಮಾಡಿ ನೌಕರರು ಈ ಪ್ರಸ್ತಾವನೆಗೆ ಒಪ್ಪಬಾರದು. ಒಂದು ವೇಳೆ ಇದಕ್ಕೆ ಒಪ್ಪಿದರೆ ಪ್ರತಿಭಟನೆ ಮಾಡಲಾಗುವುದು” ಎಂದು ತಿಳಿಸಿದ್ದಾರೆ.

Advertisements

“ಸರ್ಕಾರಿ ನೌಕರರು ಕೇವಲ ಸರ್ಕಾರದ ಮತ್ತು ಲೋಕಾಯುಕ್ತದ ಹಂತದಲ್ಲಿ ತಮ್ಮ ಆಸ್ತಿ ವಿವರಗಳನ್ನು ಹಂಚಿಕೊಳ್ಳಲು ಹಿಂಜರಿಯುತ್ತಿದ್ದಾರೆಂದರೆ, ತಾವು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ತಮ್ಮ ಆಸ್ತಿ ವಿವರವು ಲೋಕಾಯುಕ್ತಕ್ಕೆ ಮುಕ್ತವಾಗಿ ಲಭ್ಯವಾದರೆ, ತಮ್ಮ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆಂದು ಈ ರೀತಿಯಾಗಿ ಸರ್ಕಾರವನ್ನೇ ಬ್ಲ್ಯಾಕ್‍ಮೇಲ್ ಮಾಡಲು ಮುಂದಾಗಿದ್ದಾರೆ. ಸಚಿವಾಲಯ ನೌಕರರ ಈ ನಡೆಯನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಬಲವಾಗಿ ವಿರೋಧಿಸುತ್ತದೆ ಮತ್ತು ಸರ್ಕಾರದ ಎಲ್ಲ ನೌಕರರು ಹಾಗೂ ಅಧಿಕಾರಿಗಳು ಪ್ರತಿ ವರ್ಷ ಕಡ್ಡಾಯವಾಗಿ ತಮ್ಮ ಆಸ್ತಿ ವಿವರಗಳನ್ನು ನೇರವಾಗಿ ಲೋಕಾಯುಕ್ತಕ್ಕೆ ಸಲ್ಲಿಸಬೇಕು. ಅದು ಸಾರ್ವಜನಿಕರಿಗೂ ಲಭ್ಯವಿರಬೇಕು. ಈ ನಿಟ್ಟಿನಲ್ಲಿ ಕಾನೂನಿನಲ್ಲಿ ತಿದ್ದುಪಡಿ ತರಬೇಕು” ಎಂದು ಆಗ್ರಹಿಸಿದರು.

“ಕೇಂದ್ರ ಸರ್ಕಾರದ ನೌಕರರು ತಮ್ಮ ಆಸ್ತಿ ವಿವರಗಳನ್ನು ಕಡ್ಡಾಯವಾಗಿ ಲೋಕಪಾಲರಿಗೆ ಪ್ರತಿವರ್ಷ ಸಲ್ಲಿಸಬೇಕೆಂದು ಲೋಕಪಾಲ ಕಾಯ್ದೆಯ ಸೆಕ್ಷನ್ 44 ಹೇಳುತ್ತದೆ. ಕೇಂದ್ರ ಸರ್ಕಾರದ ನೌಕರರಿಗೆ ಮತ್ತು ಅಧಿಕಾರಿಗಳಿಗೆ ಅನ್ವಯವಾಗುವಾಗ, ರಾಜ್ಯ ಸರ್ಕಾರದ ನೌಕರರು ತಮಗೆ ಇಂತಹ ನಿಯಮಗಳು ಇರಬಾರದೆಂದು ಹೇಳುವುದು ವಿರೋಧಾಭಾಸದಿಂದ ಕೂಡಿರುವ ನಡವಳಿಕೆಯಾಗಿದೆ. ಮತ್ತೊಂದೆಡೆ, ಕೇಂದ್ರ ಸರ್ಕಾರದ ನೌಕರರಿಗೆ ಸಿಗುವ ಸಂಬಳ ಮತ್ತು ಸವಲತ್ತುಗಳು ಬೇಕೆಂದು ಒತ್ತಾಯಿಸುವ ರಾಜ್ಯ ಸರ್ಕಾರದ ನೌಕರರು ಈಗ ಆಸ್ತಿ ವಿವರ ಸಲ್ಲಿಸುವಂತಹ ವ್ಯವಸ್ಥೆ ಇರಬಾರದೆಂದು ಹೇಳುತ್ತಿರುವುದು ಅವರು ಅಕ್ರಮವಾಗಿ ಸಂಪಾದಿಸಿದ ಆಸ್ತಿ ವಿವರ ಬಹಿರಂಗವಾಗಬಾರದು ಎನ್ನುವಂತಿದೆ” ಎಂದರು.

“ಕೆಪಿಎಸ್‌ಸಿ ಸೇರಿದಂತೆ ಯಾವುದೇ ಸರ್ಕಾರಿ ನೇಮಕಾತಿಗಳನ್ನು ಪಾರದರ್ಶಕವಾಗಿ ನಡೆಸಲು ಎಲ್ಲ ಸರ್ಕಾರಗಳು ವಿಫಲವಾಗುತ್ತಿದ್ದು, ಸರ್ಕಾರಿ ನೌಕರಿಗಳು ಹಣಕ್ಕೆ ಬಿಕರಿಯಾಗುತ್ತಿವೆ. ಭ್ರಷ್ಟಾಚಾರ ಮಾಡಲೆಂದೇ ಕೆಲವು ಶ್ರೀಮಂತರು ಲಂಚಕೊಟ್ಟು ಸರ್ಕಾರಿ ಕೆಲಸ ಪಡೆದುಕೊಳ್ಳುತ್ತಿರುವ ಇವತ್ತಿನ ಸಂದರ್ಭದಲ್ಲಿ ಸರ್ಕಾರಿ ಇಲಾಖೆಯಲ್ಲಿ ನಡೆಯುವ ಭ್ರಷ್ಟಾಚಾರವನ್ನು ನಿಯಂತ್ರಿಸಲು ಹಲವು ಕಟ್ಟುನಿಟ್ಟಿನ ಕ್ರಮಗಳು ಜಾರಿಯಾಗಬೇಕಿದೆ. ಸರ್ಕಾರಿ ಇಲಾಖೆಯ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ಇರುವಂತೆ ನೋಡಿಕೊಂಡು ಭ್ರಷ್ಟಾಚಾರ ರಹಿತ ಆಡಳಿತ ನೀಡಬೇಕಿದ್ದ ಜನಪ್ರತಿನಿಧಿಗಳೂ ಇಂದು ಜನರ ತೆರಿಗೆ ಹಣವನ್ನು ಲೂಟಿ ಮಾಡುವ ಕಾಯಕದಲ್ಲಿ ಮುಳುಗಿರುವುದು ರಾಜ್ಯದ ಜನತೆಯನ್ನು ಇನ್ನಷ್ಟು ಆತಂಕಕ್ಕೀಡುಮಾಡಿದೆ” ಎಂದರು.

“ಜನಪ್ರತಿನಿಧಿಗಳು ಚುನಾವಣೆ ಸಂದರ್ಭದಲ್ಲಿ ನೀಡುವ ಪ್ರಮಾಣಪತ್ರ ಮತ್ತು ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನೆಡಿಸಿದ ಸಂದರ್ಭದಲ್ಲಿ ಅವರ ಆಸ್ತಿ ವಿವರಗಳನ್ನು ಗಮನಿಸಿದಾಗ ದಿನೇದಿನೆ ರಾಜಕಾರಣಿಗಳ ಮತ್ತು ಸರ್ಕಾರಿ ಅಧಿಕಾರಿಗಳ ಆಸ್ತಿಯು ಅನುಮಾನಾಸ್ಪದ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ಕಂಡುಬರುತ್ತಿದೆ. ಈ ರೀತಿಯ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲೆಂದೇ ಪ್ರಸ್ತುತ ಇರುವ ಅಖಿಲ ಭಾರತ ಸೇವೆಗಳ(ನಡವಳಿಕೆ) ನಿಯಮಗಳು, ಕೇಂದ್ರ ನಾಗರಿಕ ಸೇವೆ(ನಡವಳಿಕೆ) ನಿಯಮಗಳು, ಎಲ್ಲ ಕೇಂದ್ರ ಮತ್ತು ರಾಜ್ಯ ನೌಕರರು/ಸೇವೆಗಳಿಗೆ ಕರ್ನಾಟಕ ನಾಗರಿಕ ಸೇವೆ(ನಡವಳಿಕೆ) ನಿಯಮಗಳು, ಲೋಕಪಾಲ್ ಮತ್ತು ಲೋಕಾಯುಕ್ತ ಕಾಯ್ದೆ ನಿಯಮಗಳನ್ನೂ ಕೂಡ ಸಂಬಂಧಪಟ್ಟ ಅಧಿಕಾರಿಗಳು/ನೌಕರರು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ನೋಡಿಕೊಳ್ಳುವ ಹಾಗೂ ನಿಯಮ ಉಲ್ಲಂಘಿಸಿದವರನ್ನು ಶಿಕ್ಷಿಸುವ ಕೆಲಸವನ್ನು ಸರ್ಕಾರ ಮಾಡಬೇಕಿದೆ” ಎಂದು ಒತ್ತಾಯಿಸಿದರು.

“ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗದಿಂದ ಅಕ್ರಮ ಆಸ್ತಿ ಗಳಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಸದಸ್ಯರೂ ಸೇರಿದಂತೆ ರಾಜ್ಯದ ಎಲ್ಲ ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಜಾರಿಯಲ್ಲಿದೆ. ಈ ನಿಯಮವು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೂ ಅನ್ವಯವಾಗುವಂತೆ ಕಾನೂನು ರೂಪಿಸಬೇಕು. ಈ ವಿವರವು ಸಾರ್ವಜನಿಕ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡುವ ಮತ್ತು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಮಠಾಧೀಶರು, ರಾಜಕಾರಣಿಗಳು ಇರುವವರೆಗೂ ಜಾತಿ ನಿರ್ಮೂಲನವಾಗುವುದಿಲ್ಲ: ಸಾಹಿತಿ ಡಾ. ಬಿ ಎಲ್ ವೇಣು

“ಸರ್ಕಾರಿ ನೌಕರರು/ಅಧಿಕಾರಿಗಳ ಆಸ್ತಿ ಮೇಲೆ ಕಣ್ಣಿಟ್ಟು ಅವರು ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುವ ಹಕ್ಕು ಸರ್ಕಾರಕ್ಕೆ ತೆರಿಗೆ ಕಟ್ಟುವ ಈ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಇರುತ್ತದೆ. ಈ ದೃಷ್ಟಿಯಲ್ಲಿ ನೋಡುವುದಾದರೆ ಈಗ ಲೋಕಾಯುಕ್ತ ಅವರ ಸಲಹೆ ಸರಿಯಿದ್ದು, ಅದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿ ಕಾರ್ಯರೂಪಕ್ಕೆ ತರಲು ತಕ್ಷಣವೇ ಕ್ರಮ ವಹಿಸಬೇಕಾಗಿದೆ. ಪ್ರಸ್ತುತ ಸರ್ಕಾರಿ ನೌಕರರು ತಮ್ಮ ಆಸ್ತಿ ವಿವರಗಳನ್ನು ಸರ್ಕಾರಕ್ಕೆ ಪ್ರತಿ ವರ್ಷ ಸಲ್ಲಿಸಬೇಕಾಗಿರುತ್ತದೆ. ಆದರೆ ಇದನ್ನು ಪಾಲಿಸಲಾಗುತ್ತಿದೆಯೇ ಎಂಬುದು ಯಾರಿಗೂ ತಿಳಿದಿಲ್ಲ. ಮಾಹಿತಿ ಹಕ್ಕು ಕಾಯ್ದೆಯಡಿ ಕೇವಲ ಆಸ್ತಿ ವಿವರ ಸಲ್ಲಿಸಿದ್ದಾರೋ ಇಲ್ಲವೋ ಎಂಬ ಮಾಹಿತಿಯನ್ನು ನೀಡಲು ನಿರಾಕರಿಸುವಂತಹ ದುರಾಡಳಿತ ನಮ್ಮ ರಾಜ್ಯದಲ್ಲಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜನಾಭಿಪ್ರಾಯ ರೂಪಿಸುವ ಕಾರ್ಯಕ್ರಮಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಮುಂದಾಗಲಿದೆ. ಹಾಗೆಯೇ, ಸರ್ಕಾರಿ ನೌಕರರಂತೆ ಲೋಕಾಯುಕ್ತರು ಹಾಗೂ ಉಪಲೋಕಾಯುಕ್ತರೂ ಕೂಡಾ ತಮ್ಮ ಆಸ್ತಿ ವಿವರವನ್ನು ಪ್ರತಿವರ್ಷ ರಾಜ್ಯಪಾಲರಿಗೆ ಸಲ್ಲಿಸಿ, ಲೋಕಾಯುಕ್ತದ ಜಾಲತಾಣದಲ್ಲಿ ಪ್ರಕಟಿಸಿ ಸರ್ಕಾರಿ ನೌಕರರಿಗೆ ಮಾದರಿಯಾಗಬೇಕು” ಎಂದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಕೃಷ್ಣ ವಿ ಬಿ ಹಾಗೂ ರಘು ನಂದನ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X