ಮದ್ಯದಂಗಡಿಯಲ್ಲಿ ನಡೆದ ಗಲಾಟೆ ವೇಳೆ ವ್ಯಕ್ತಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ.
ಲಕ್ಷ್ಮಣ ಮರನೂರ(45) ಮೃತ ದುರ್ದೈವಿ. ಮದ್ಯದಂಗಡಿಯಲ್ಲಿ ಕಂಠಪೂರ್ತಿ ಕುಡಿದು ಅಮಲೇರಿದ್ದ ವ್ಯಕ್ತಿ ಮೇಲೆ ಅಲ್ಲಾ ಪಕ್ಕದ ಟೇಬಲ್‌ನಲ್ಲಿ ಕುಳಿತಿದ್ದ ಇಬ್ಬರು ಗಲಾಟೆ ನಡೆಸಿ ಥಳಿಸಿದ್ದರು. ಕುಡಿದ ಮತ್ತಿನಲ್ಲಿದ್ದ ಲಕ್ಷ್ಮಣನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದ್ದು, ಆ ವೇಳೆ ಕುಸಿದು ಬಿದ್ದ ವ್ಯಕ್ತಿ ಲಕ್ಷ್ಮಣ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಈ ಸುದ್ದಿ ಓದಿದ್ದೀರಾ?: ಬೀದರ್ | ಎರಡು ಗಂಟೆ ಬಾರ್‌ನಲ್ಲಿ ಕಳೆದಿದ್ದ ಗುತ್ತಿಗೆದಾರ ಸಚಿನ್ ಪಾಂಚಾಳ್
ಬರಂಗಪ್ಪ ಪಾಟೀಲ್ ಮತ್ತು ಈರಪ್ಪ ತುಂಗಳ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
