ಮಂಗಳೂರು | ಜ.16ರಂದು ‘ಪೇರೆಂಟಿಂಗ್’ ಬಗ್ಗೆ ಉಚಿತ ಕಾರ್ಯಾಗಾರ

Date:

Advertisements

ಜನವರಿ 16(ಗುರುವಾರ)ದಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಅಡ್ಯಾರ್‌ ಪ್ರದೇಶದಲ್ಲಿರುವ ಬರಕಾ ಇಂಟರ್‌ ನ್ಯಾಷನಲ್ ಸ್ಕೂಲ್ ಅಂಡ್ ಕಾಲೇಜಿನಲ್ಲಿ ಪೋಷಕರಿಗೆ ‘ಪೇರೆಂಟಿಂಗ್‌’ನ ವಿಷಯದಲ್ಲಿ ತರಬೇತಿ ನೀಡಲು ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅಂದು ಸಂಜೆ 6:30ಕ್ಕೆ ಶಾಲೆಯ ಬರಾಕಾ ಸಭಾಂಗಣದಲ್ಲಿ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಪೇರೆಂಟಿಂಗ್‌ಗೆ ಸಂಬಂಧಿಸಿದ ಮೂರು ಪ್ರಮುಖ ಅಂಶಗಳ ಬಗ್ಗೆ ಚರ್ಚಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಬರಕ ಇಂಟರ್ ನ್ಯಾಷನಲ್ ಸ್ಕೂಲ್ ಮತ್ತು ಕಾಲೇಜಿನ ಪ್ರಾಂಶುಪಾಲ, ಅಂತಾರಾಷ್ಟ್ರೀಯ ಭಾಷಣಕಾರ ಶರ್ಫುದ್ದೀನ್ ಬಿ.ಎಸ್ ಅವರು ‘ನಿಮ್ಮ ಮಗುವನ್ನು ಶೈಕ್ಷಣಿಕವಾಗಿ ಉತ್ಕೃಷ್ಟರಾಗಲು ಹೇಗೆ ಪ್ರೇರೇಪಿಸುವುದು’ ಎಂಬ ಕುರಿತು ಮಾತನಾಡಲಿದ್ದಾರೆ. ಮತ್ತೊಬ್ಬ ಪ್ರಸಿದ್ಧ ಪ್ರೇರಕ ಭಾಷಣಕಾರ ಮತ್ತು ಹೋಪ್ ಫೌಂಡೇಶನ್‌ನ ಅಧ್ಯಕ್ಷ ಸೈಫ್ ಸುಲ್ತಾನ್ ‘ಆಧುನಿಕ ಯುಗದಲ್ಲಿ ಮಕ್ಕಳ ಪೋಷಣೆ ಹೇಗೆ?’ ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ.

Advertisements

ಬರಕಾ ಇಂಟರ್‌ ನ್ಯಾಷನಲ್ ಸ್ಕೂಲ್ ಅಂಡ್ ಕಾಲೇಜಿನ ಇಸ್ಲಾಮಿಕ್ ವಿಭಾಗದ ಪ್ರಾಂಶುಪಾಲ ಮತ್ತು ಖತೀಬರಾದ ಮೊಹಮ್ಮದ್ ಹನೀಫ್ ಅವರು ‘ಇಸ್ಲಾಮಿಕ್ ಮೌಲ್ಯಗಳನ್ನು ಅನುಸರಿಸಲು ನಿಮ್ಮ ಮಕ್ಕಳಿಗೆ ತರಬೇತಿ ನೀಡಲು ಪೋಷಕರಲ್ಲಿ ಇರಬೇಕಾದ ಕೌಶಲ್ಯ ‘ ಎಂಬ ಕುರಿತು ಮಾತನಾಡಲಿದ್ದಾರೆ. ತಜ್ಞರಿಂದ ಈ ವಿಷಯದ ಬಗ್ಗೆ ಹೆಚ್ಚಿನ ಒಳನೋಟವನ್ನು ಪಡೆಯಲು ಕೊನೆಯಲ್ಲಿ ಪ್ರಶ್ನೋತ್ತರದ ವ್ಯವಸ್ಥೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಹಸುವಿನ ಹರಿದ ಕೆಚ್ಚಲಿನಿಂದ ದ್ವೇಷದ ವಿಷ ಹಿಂಡಲು ಹೊರಟವರು…

ನೋಂದಣಿಯ ಆಧಾರದ ಮೇಲೆ ತಂದೆ ತಾಯಿಗಳಿಬ್ಬರೂ ಇದರಲ್ಲಿ ಹಾಜರಾಗಬಹುದು. ತಜ್ಞರಿಂದ ಈ ವಿಷಯದ ಬಗ್ಗೆ ಹೆಚ್ಚಿನ ಒಳನೋಟವನ್ನು ಪಡೆಯಲು ಕೊನೆಯಲ್ಲಿ ಪ್ರಶ್ನೋತ್ತರದ ವ್ಯವಸ್ಥೆ ಮಾಡಲಾಗಿದೆ. ಆಸಕ್ತರು ತಮ್ಮ ಹಾಜರಿಯನ್ನು ಖಚಿತಪಡಿಸಿಕೊಳ್ಳಲು ನೀಡಲಾಗಿರುವ ಫಾರ್ಮ್ ಅನ್ನು ಬಳಸಿಕೊಂಡು ನೋಂದಾಯಿಸಿಕೊಳ್ಳಲು ಪ್ರಕಟನೆ ತಿಳಿಸಿದೆ.

ಗೂಗಲ್ ಫಾರ್ಮ್ ಲಿಂಕ್ ಇಲ್ಲಿದೆ.
https://forms.gle/mKxsr4A1UGrpo7DJ9

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X