ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ನೀಡುವ ಕಾನೂನು ಜಾರಿ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗದಗ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಮುತ್ತನಗೌಡ ಚೌಡರೆಡ್ಡಿ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸಲ್ಲಿಸಲಾಯಿತು. ಸರ್ಕಾರಕ್ಕೆ ಮನವಿ ಸಲ್ಲಿಸಿದರು.
“ರೈತರ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು. ವಿದ್ಯುತ್ ಖಾಸಗೀಕರಣ ಮಾಡಬಾರದು. ವಿವಿಧ ಕಡೆಗಳಲ್ಲಿ ನಡೆಯುತ್ತಿರುವ ಖಾಸಗೀಕರಣ ಹಾಗೂ ಪಂಪ್‌ಸೆಟ್ ಮೀಟರೀಕರಣದ ಪ್ರಯತ್ನ ಕೂಡಲೇ ನಿಲ್ಲಿಸಬೇಕು. ಐತಿಹಾಸಿಕ ದೆಹಲಿ ರೈತ ಹೋರಾಟ ಮುಂದಿಟ್ಟಿದ್ದ ಎಲ್ಲಾ ಹಕ್ಕೋತ್ತಾಯ- ಗಳನ್ನು ಈಡೇರಿಸಬೇಕು. 60 ವರ್ಷ ದಾಟಿರುವ ಎಲ್ಲ ಕೃಷಿಕರಿಗೆ ₹5,000 ಮಾಸಿಕ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ
ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಮಹಾದೇವೇಗೌಡ ಪಾಟೀಲ, ರಾಮಪ್ಪ ಸವಡಿ, ಬಾಳಪ್ಪ ಮೊರಬದ, ಗೋವಿಂದಪ್ಪ ತಳವಾರ, ಶರಣಪ್ಪ ಕೊಪ್ಪದ, ಶರಣಪ್ಪ ಜೋರಗತ್ತಿ, ಅಲಾಸಾಬ್ ಇದ್ದರು.
