ಹಿಂದುಳಿದ ವರ್ಗದವರನ್ನು ಮೇಲೆತ್ತಲು ಅರಸು ಅವರು ಮಾಡಿದ ಪ್ರಯತ್ನ ನಡೆದು ನಾಲ್ಕು ದಶಕಗಳಾದ ನಂತರ ನಡೆದ 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಆಯ್ಕೆಯಾದ 28 ಸಂಸದರ ಪೈಕಿ ಹಿಂದುಳಿದ ವರ್ಗಗಳಿಗೆ ಸೇರಿದ ಒಬ್ಬನೇ ಒಬ್ಬ ಪ್ರತಿನಿಧಿ ಇರಲಿಲ್ಲ! ಇರಲಿಲ್ಲ ಎನ್ನುವುದು ಒಂದೆಡೆಯಾದರೆ, ಈ ಬಗ್ಗೆ ಹಿಂದುಳಿದ ವರ್ಗಗಳಿಂದ ಒಂದು ಸಣ್ಣ ಅಸಮಾಧಾನದ ಧ್ವನಿಯೂ ಕೇಳಿಸಲಿಲ್ಲ ಎನ್ನುವುದು ಅರಸು ಎಪ್ಪತ್ತರ ದಶಕದಲ್ಲಿ ಪ್ರಾರಂಭಿಸಿದ ಪ್ರಯೋಗ ಎಲ್ಲಿಗೆ ಬಂದು ನಿಂತಿದೆ ಎನ್ನುವುದಕ್ಕೆ ನಿದರ್ಶನ.. ಅದು ಮಹಾನ್ ಒಳಿತಿನ ಕಾಲವಾಗಿತ್ತುಅದು ದಾರುಣ…

ಎ. ನಾರಾಯಣ
ಅಜೀಂ ಪ್ರೇಮ್‌ಜೀ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಎ.ನಾರಾಯಣ ಅವರು ಪ್ರಖರ ರಾಜಕೀಯ ವಿಶ್ಲೇಷಕರೂ ಹೌದು. ಕನ್ನಡ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ನಿಯಮಿತವಾಗಿ ಬರೆಯುತ್ತಿರುವ ಅವರು, ತಮ್ಮ ವಿಶಿಷ್ಟ ಒಳನೋಟಗಳಿಂದ ಗಮನ ಸೆಳೆದಿದ್ದಾರೆ