ಪ್ರಸ್ತುತ ಯುವ ಪೀಳಿಗೆಗೆ ಶಿಕ್ಷಣ, ವೃತ್ತಿ, ವ್ಯಕ್ತಿತ್ವ ಬೆಳವಣಿಗೆ, ಜೀವನ ಶೈಲಿ ನಿರ್ವಹಣೆ, ಸುರಕ್ಷತೆ ಹಾಗೂ ಸಂಬಂಧಗಳ ಮೌಲ್ಯಗಳ ಬಗ್ಗೆ ತಿಳಿಸಿಕೊಡುವ ಮೂಲಕ ʼಯುವಸ್ಪಂದನ ಅರಿವು ಕಾರ್ಯಕ್ರಮʼ ಯಶಸ್ವಿಯಾಗಿದೆ.
ಬಳ್ಳಾರಿ ಜಿಲ್ಲೆಯ ಸಿರಗುಪ್ಪದ ಜ್ಞಾನಭಾರತಿ ಕಾಲೇಜಿನಲ್ಲಿ ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರಿನ ಕರ್ನಾಟಕ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ ನಿಮ್ಹಾನ್ಸ್ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ʼಯುವ ಸ್ಪಂದನ ಅರಿವು ಕಾರ್ಯಕ್ರಮʼದಲ್ಲಿ ಹಲವು ವಿಷಯಗಳ ಕುರಿತು ತಿಳಿಸಿಕೊಡಲಾಗಿದೆ.
ಪರಿವರ್ತಕ ಹಳೇಕೋಟೆ ಖಾಸಿಂವಲಿ ಮಾತನಾಡಿ, “ಈಗಾಗಲೇ ಯಾವುದಾದರೂ ಸಮಸ್ಯೆಗಳಿಗೆ ಒಳಗಾಗಿದ್ದರೆ, ಯುವ ಸ್ಪಂದನ ಕೇಂದ್ರಕ್ಕೆ ಬಂದು ಸಮಸ್ಯೆಗಳಿಗೆ ಮಾರ್ಗದರ್ಶನ ಕಂಡುಕೊಳ್ಳಬಹುದು. ಯುವಕರಿಗಾಗಿ ಒಂದೇ ಸೂರಿನಡಿ ಸರ್ಕಾರದ ಎಲ್ಲ ಯೋಜನೆಗಳ ಮಾಹಿತಿ ಇರುವ ಪೋರ್ಟಲ್ ಕುರಿತು ತಿಳಿದುಕೊಳ್ಳಬಹುದು” ಎಂಬಹುದನ್ನು ತಿಳಿಸಿಕೊಟ್ಟರು.
ಜ್ಞಾನ ಭಾರತಿ ಕಾಲೇಜಿನ ಪ್ರಾಂಶುಪಾಲ ಬಿ ಹರೀಶ್ ಮಾತನಾಡಿ, “ವಿದ್ಯಾರ್ಥಿಗಳು ಇಂತಹ ಸೌಲಭ್ಯಗಳನ್ನು ಪಡೆದುಕೊಳ್ಳುವುದರ ಜತೆಗೆ ನಿಮ್ಮ ಸುತ್ತಮುತ್ತಲಿನ ಜನರಿಗೆ ಈ ಪೋರ್ಟಲ್ ಮತ್ತು ಸೌಲಭ್ಯಗಳ ಬಗ್ಗೆ ತಿಳಿಸಬೇಕು” ಎಂದು ಕಿವಿಮಾತು ಹೇಳಿದರು.
ಈ ಸುದ್ದಿ ಓದಿದ್ದೀರಾ?: ಬಳ್ಳಾರಿ | ಗುಬ್ಬಿಯಲ್ಲಿ ದಲಿತ ಯುವಕರ ಮೇಲೆ ಹಲ್ಲೆ; ರೈಲ್ವೆ ಪೊಲೀಸ್ ಚಂದ್ರಶೇಖರ್ ಬಂಧನಕ್ಕೆ ರೈತ ಸಂಘ ಒತ್ತಾಯ
ಕಾರ್ಯಕ್ರಮದಲ್ಲಿ ಜ್ಞಾನಭಾರತಿ ಕಾಲೇಜಿನ ಶಿಕ್ಷಕರು ಮತ್ತು ಇತರೆ ಸಿಬ್ಬಂದಿಗಳು ಇದ್ದರು.
