ದೆಹಲಿ ರೈತ ಹೋರಾಟ ವಾಪಸಾತಿ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯು ಬೆಳಗಾವಿ ಜಿಲ್ಲಾಧಿಕಾಗೆ ಮನವಿ ಸಲ್ಲಿಸಿತು.
ರೈತ ಮುಖಂಡ ಸಿದಗೌಡ ಮೋದಗಿ ಮಾತನಾಡಿ, “ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿ, ಸಾಲ ಮನ್ನಾ ಮುಂತಾದ ಆಗ್ರಹಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಜಾಬ್-ಹರಿಯಾಣ ಗಡಿಯಲ್ಲಿ ಜಗಜಿತ್ ಸಿಂಗ್ ದಲ್ಲೆವಾಲ ಆಮರಣಾಂತ ಉಪವಾಸ ಮಾಡುತಿದ್ದಾರೆ. ಈ ಉಪವಾಸ 49ನೇ ದಿನಕ್ಕೆ ಕಾಲಿಟ್ಟಿದೆ. ಅವರ ದೇಹ ನಿತ್ರಾಣಗೊಂಡು, ರಕ್ತದೊತ್ತಡ ಕೂಡ ಅಪಾಯಕಾರಿ ಮಟ್ಟಕ್ಕೆ ಕುಸಿದಿದೆ. ರೈತ ನಾಯಕರ ಈ ಪರಿಸ್ಥಿತಿಗೆ ಕೇಂದ್ರ ಸರ್ಕಾರವೇ ನೇರ ಕಾರಣವಾಗಿದೆ” ಎಂದು ಆಕ್ರೋಶ ಹೊರಹಾಕಿದರು.
ಈ ಸುದ್ದಿ ಓದಿದ್ದೀರಾ?: ಬೆಳಗಾವಿ | ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ
“ಕೇಂದ್ರ ಸರ್ಕಾರದ ಹಲವು ರೈತ ವಿರೋಧಿ ಧೋರಣೆಗಳು ಹಾಗೂ ರೈತರ ಆಗ್ರಹಗಳನ್ನು ನಿರ್ಲಕ್ಷ್ಯ ಮಾಡಿದ್ದರ ಫಲವಾಗಿ ರೈತ ನಾಯಕರ ಪ್ರಾಣ ಹೋಗುವಂಥ ಪರಿಸ್ಥಿತಿ ಉಂಟಾಗಿದೆ. ಈ ಕೂಡಲೇ ರಾಷ್ಟ್ರಪತಿಗಳು ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು” ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ಹಾಗೂ ಭಾರತೀಯ ಕೃಷಿಕ ಸಮಾಜ ಮತ್ತು ಜಿಲ್ಲೆಯ ಪ್ರಗತಿಪರ ಸಂಘಟನೆಗಳು ಒತ್ತಾಯಿಸಿದವು.
ಈ ವೇಳೆ ರೈತ ಸಂಘಟನೆ ಮುಖಂಡ ಸಿದಗೌಡ ಮೋದಗಿ, ಬಸವರಾಜ ಮೋಕಾಶಿ, ಶಿವಲಿಲಾ ಮಿಸಾಲೆ, ಸೋಮಪ್ಪ ಹಾಗೂ ರೈತ ಮುಖಂಡರು ಇದ್ದರು.
