ಹಾಸನ | ಬಿಜೆಪಿ ಸಂಸದನ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Date:

Advertisements

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಹಾಸನದಲ್ಲಿ ಸಿಐಟಿಯು, ಎಸ್‌ಎಫ್‌ಐ, ಡಿವೈಎಫ್‌ಐ, ಕೆಪಿಆರ್‌ಎಸ್‌, ಡಿಎಚ್‌ಒ ಹಾಗೂ ದಲಿತ, ಜನಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

ಒಲಂಪಿಕ್ ಪದಕ ವಿಜೇತರು, ವಿಶ್ವ ಚಾಂಪಿಯನ್‌ಗಳು ಸೇರಿದಂತೆ ದೇಶದ ಹೆಮ್ಮೆಯ ಕುಸ್ತಿಪಟುಗಳು 2023 ಏಪ್ರಿಲ್ 24 ರಿಂದ ನವದೆಹಲಿಯ ಜಂತರ್ ಮಂಥರ್ ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ, ಅವರ ಅಳಲನ್ನು ಕೇಳದ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರ ಆರೋಪಿ ಸಂಸದನ ರಕ್ಷಣೆಗೆ ನಿಂತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಾಹಿತಿ ರೂಪ ಹಾಸನ, “ಅಪ್ರಾಪ್ತ ಹೆಣ್ಣು ಮಕ್ಕಳು ಸೇರಿದಂತೆ ಪ್ರಖ್ಯಾತ ಮಹಿಳಾ ಕುಸ್ತಿಪಟುಗಳಿಗೆ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಇನ್ನಿತರ ಸಿಬ್ಬಂದಿಗಳು ಲೈಂಗಿಕ ಕಿರುಕುಳ ಹಾಗೂ ಹಿಂಸೆ ನೀಡಿರುವುದು ಅತ್ಯಂತ ಅಘಾತಕಾರಿ ಮತ್ತು ದೇಶವೇ ತಲೆತಗ್ಗಿಸುವಂತಹ ಕೃತ್ಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisements

‘ಭೇಟಿ ಬಚಾವೋ, ಭೇಟಿ ಪಡಾವೋ’ ಎಂದು ಪ್ರಚಾರ ಮಾಡುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಆರೋಪಿ ಬಿಜೆಪಿ ಸಂಸದನನ್ನು ರಕ್ಷಿಸುತ್ತಿರುವುದು ನಾಚೀಕೆಗೇಡಿನ ಸಂಗತಿ. ದೂರಿನ ಆಧಾರದಲ್ಲಿ ಕಾನೂನು ಕ್ರಮ ಜರುಗಿಸಿ ನೊಂದ ಮಹಿಳಾ ಕ್ರೀಡಾಪಟುಗಳಿಗೆ ರಕ್ಷಣೆ ಒದಗಿಸಬೇಕಾಗಿದ್ದ ಸರ್ಕಾರ, ತನ್ನ ಪೊಲೀಸ್ ಪಡೆಗಳನ್ನು ಬಳಸಿ, ನ್ಯಾಯಕ್ಕಾಗಿ ಪ್ರತಿಭಟಿಸುತ್ತಿರುವ ಕ್ರೀಡಾಪಟುಗಳ ಮೇಲೆ ದಮನಕಾರಿ ಕ್ರಮಗಳನ್ನು ಅನುಸರಿಸುತ್ತಿದೆ. ಕಳೆದ ವಾರ ಪ್ರತಿಭಟನಾನಿರತರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಕಿಡಿಕಾರಿದ್ದಾರೆ.

“ನೂತನ ಸಂಸತ್ ಕಟ್ಟಡದ ಒಳಗಡೆ ಆರೋಪಿ ಬಿಜೆಪಿ ಸಂಸದ ಆತಿಥ್ಯ ಪಡೆಯುತ್ತಿರುವಾಗಲೇ, ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ಹೀನಾಯ ದೌರ್ಜನ್ಯ ನಡೆಸಲಾಗಿದೆ. ಪ್ರಜಾಪ್ರಭುತ್ವದ ಹೆಮ್ಮೆಯ ಸಂಸ್ಥೆಯಾದ ಸಂಸತ್ತಿನಲ್ಲಿ ಸಂವಿಧಾನದ ನೀತಿ-ನಡಾವಳಿಗೆ ವಿರುದ್ದವಾಗಿ, ಪುರುಷ ಅಹಂಕಾರವನ್ನು ಸಮರ್ಥಿಸುವ ಪುರೋಹಿತಶಾಹಿ ಯಜಮಾನಿಕೆಯನ್ನು ಸಂಕೇತಿಸುವ ಧಾರ್ಮಿಕ ಆಚರಣೆಗಳನ್ನು ನಡೆಸಲಾಗಿದೆ. ಇದು ನಮ್ಮ ಸಂವಿಧಾನ ಪರಂಪರೆಗೆ ಆಗಿರುವ ಗಂಭೀರ ಧಕ್ಕೆ” ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಗ್ಯಾರಂಟಿ ಯೋಜನೆ ಹೇಗೆ ವಿರೋಧಿಸಬೇಕು ಎಂಬ ಗೊಂದಲದಲ್ಲಿ ಬಿಜೆಪಿ‌ ಇದೆ : ಕಾಂಗ್ರೆಸ್ ಟೀಕೆ

ಲೈಂಗಿಕ ಕಿರುಕುಳ ಹಾಗೂ ಹಿಂಸೆ ಕೊನೆಗಾಣಬೇಕು ಇದಕ್ಕಾಗಿ ದೇಶದ ಎಲ್ಲ ನಾಗರಿಕರು ಕುಸ್ತಿಪಟುಗಳ ಪ್ರತಿಭಟನೆಯನ್ನು ಬೆಂಬಲಿಸಬೇಕು. ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ನಮ್ಮ ದೇಶಕ್ಕೆ ಕೀರ್ತಿ ತಂದವರಿಗೆ ಇಷ್ಟು ಕಿರುಕುಳ ನೀಡಲಾಗಿದೆ. ಇನ್ನು ಸಾಮಾನ್ಯ ಮಹಿಳೆಯರ ಹಾಗೂ ಹೆಣ್ಣು ಮಕ್ಕಳ ಸುರಕ್ಷತೆ ಕೇಳುವುದು ಹೇಗೆ? ದೇಶಕ್ಕೆ ಕೀರ್ತಿ ತಂದ ಕ್ರೀಡಾಪಟುಗಳ ಆತ್ಮಸ್ಥೈರ್ಯ ಕುಂದಿಸುವ ಕೆಲಸವನ್ನು ಬಿಜೆಪಿ ಸರ್ಕಾರ ನಿಲ್ಲಿಸಬೇಕು. ಆರೋಪಿಯನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಪುಷ್ಪ, ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಎಚ್.ಆರ್ ನವೀನ್ ಕುಮಾರ್, ಹಿರಿಯ ದಲಿತ ಮುಖಂಡರಾದ ರಾಜಶೇಖರ, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಪೃಥ್ವಿ ಹಾಗೂ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X