ಬೆಳಗಾವಿ | ಸಂಕ್ರಾತಿ‌ ಹಬ್ಬಕ್ಕೆ ಬುತ್ತಿ ಕೊಡಲು ಮನೆಗೆ ಬಂದ ಅತ್ತೆಯನ್ನು ಕೊಲೆ ಮಾಡಿದ ಅಳಿಯ

Date:

Advertisements

ಸಂಕ್ರಾಂತಿ ಹಬ್ಬದ ಪ್ರಯುಕ್ತ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನು ಅಳಿಯ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಗಾವಿ ನಗರದ ರೈತ ಗಲ್ಲಿಯಲ್ಲಿ ನಡೆದಿದೆ.

ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪಡುಮುಖೆ (44) ಕೊಲೆಯಾದ ಮಹಿಳೆ. ಮಲ್ಲಪ್ರಭಾ ನಗರದ ನಿವಾಸಿ, ಪ್ರಸ್ತುತ ರೈತ ಗಲ್ಲಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿರುವ ಶುಭಂ ದತ್ತಾ ಬಿರ್ಜೆ (24) ಕೊಲೆ ಮಾಡಿರುವ ಆರೋಪಿ ಎಂದು ಹೇಳಲಾಗಿದೆ.

ಕೊಲೆಯಾದ ರೇಣುಕಾ ಅವರ ಪುತ್ರಿ ಛಾಯಾ ಮತ್ತು ಶುಭಂ ಮೂರು ವರ್ಷಗಳ ಹಿಂದೆ ಮದುವೆ ಆಗಿದ್ದರು. ದಂಪತಿ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಛಾಯಾ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಮಗಳನ್ನು ಸರಿಯಾಗಿ ನೋಡಿಕೊಂಡಿಲ್ಲ ಎಂದು ರೇಣುಕಾ ಆರೋಪಿಸುತ್ತಿದ್ದರು.

Advertisements

ಸಂಕ್ರಾಂತಿ ಹಬ್ಬದ ಪ್ರಯುಕ್ತ ರೇಣುಕಾ ತಮ್ಮ ಮಗಳಿಗೆ ಬುತ್ತಿ ಕೊಡಲು ಬಂದಿದ್ದ ವೇಳೆ ಅತ್ತೆ- ಅಳಿಯನ ನಡುವೆ ಜಗಳ ಶುರುವಾಗಿ, ಮನೆಯಲ್ಲಿದ್ದ ಚಾಕು ತೆಗೆದುಕೊಂಡು ರೇಣುಕಾ ತೊಡೆಗೆ ಅಳಿಯ ಶುಭಂ ಚುಚ್ಚಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಿಸಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ರೇಣುಕಾ ಮೃತಪಟ್ಟಿದ್ದಾರೆ ಎಂದು ಪೋಲಿಸರು ತಿಳಿಸಿದ್ದಾರೆ.‌

ಈ ವರದಿ ಓದಿದ್ದೀರಾ? ಬೆಳಗಾವಿ | ಖಾಸಗಿ ಆಸ್ಪತ್ರೆಯಲ್ಲಿ ನೌಕರ ಆತ್ಮಹತ್ಯೆ

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಭಂ ಹಾಗೂ ಅವರ ತಂದೆ- ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ರೋಹನ್ ಜಗದೀಶ್ ಪರಿಶೀಲನೆ ನಡೆಸಿದ್ದಾರೆ. ಈ ಕುರು ಶಹಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

Download Eedina App Android / iOS

X